Mysore
22
broken clouds

Social Media

ಸೋಮವಾರ, 10 ಆಗಸ್ಟ್ 2026
Light
Dark

ಉಪರಾಷ್ಟ್ರಪತಿ ಧನಕರ್‌ ಅವರ ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

ನವದೆಹಲಿ: ಎದೆನೋವಿನಿಂದ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರು ಆಸ್ಪತ್ರೆಗೆ ದಾಖಾಲಾದ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೆಹಲಿಯ ಏಮ್ಸ್‌ ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ್ದಾರೆ.

ಈ ಬಗ್ಗೆ ತಮ್ಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ಏಮ್ಸ್‌ ಆಸ್ಪತ್ರೆಗೆ ಭೇಟಿ ನೀಡಿ ಉಪರಾಷ್ಟ್ರಪತಿ ಜಗದೀಪ್‌ ಧನಕರ್‌ ಅವರ ಆರೋಗ್ಯ ವಿಚಾರಿಸಿದೆ. ಶೀಘ್ರ ಚೇತರಿಕೆಗಾಗಿ ನಾನು ಪ್ರಾರ್ಥಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

ಜಗದೀಪ್‌ ಧನಕರ್‌ ಅವರ ಆರೋಗ್ಯ ಸ್ಥಿರವಾಗಿದ್ದು, ಏಮ್ಸ್‌ನಲ್ಲಿ ಹೃದ್ರೋಗ ವಿಭಾಗದ ಮುಖ್ಯಸ್ಥ ಡಾ.ರಾಜೀವ್‌ ನಾರಂಗ್‌ ತಂಡವು ಮೇಲ್ವಿಚಾರಣೆ ಮಾಡುತ್ತಿದೆ.

 

Tags:
error: Content is protected !!