Mysore
25
haze

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಗಣೇಶ ಮೆರವಣಿಗೆ ದುರಂತಕ್ಕೆ ಪ್ರಧಾನಿ ಮೋದಿ ಕಂಬನಿ: ಮೃತರ ಕುಟುಂಬಕ್ಕೆ ತಲಾ 2 ಲಕ್ಷ ಪರಿಹಾರ ಘೋಷಣೆ

hasana pm narendsra modi

ನವದೆಹಲಿ: ಹಾಸನದಲ್ಲಿ ಗಣೇಶ ಮೆರವಣಿಗೆ ದುರಂತಕ್ಕೆ ಪ್ರಧಾನಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ದು, ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ ಪರಿಹಾರ ಘೋಷಿಸಿದ್ದಾರೆ.

ರಾಜ್ಯದ ಹಾಸನದಲ್ಲಿ ನಡೆದ ಘಟನೆ ಹೃದಯ ವಿದ್ರಾವಕ. ಈ ದುರಂತದ ಸಮಯದಲ್ಲಿ ನನ್ನ ಆಲೋಚನೆಗಳು ಮೃತರ ಕುಟುಂಬಗಳೊಂದಿಗೆ ಇವೆ. ಗಾಯಗೊಂಡವರು ಆದಷ್ಟು ಬೇಗ ಚೇತರಿಸಿಕೊಳ್ಳಬೇಕೆಂದು ಭಾವಿಸುತ್ತೇನೆ. ಮೃತ ಪ್ರತಿ ಸಂಬಂಧಿಕರಿಗೆ PMNRF ನಿಂದ 2 ಲಕ್ಷ ರೂ ಪರಿಹಾರ ನೀಡಲಾಗುವುದು.

ಇದನ್ನು ಓದಿ: ಹಾಸನ ದುರಂತ: ಮೃತರ, ಗಾಯಾಳುಗಳ ಕುಟುಂಬಕ್ಕೆ ತೀವ್ರ ಸ್ಪಂದನೆಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಗಾಯಾಳುಗಳಿಗೆ 50,000ರೂ ನೀಡಲಾಗುವುದು ಎಂದು ಪ್ರಧಾನಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿದ್ದಾರೆ.

ಹಾಸನದಲ್ಲಿ ಗಣಪತಿ ವಿಸರ್ಜನೆ ವೇಳೆ ಟ್ರಕ್‌ ಹರಿದು 9 ಮಂದಿ ಸಾವನ್ನಪ್ಪಿದ್ದು, ಸಂಭ್ರಮದಿಂದ ಕುಣಿದು ಕುಪ್ಪಳಿಸುತ್ತಿದ್ದ ಜನರ ಮೇಲೆ ಏಕಾಏಕಿ ಟ್ರಕ್‌ ನುಗ್ಗಿದೆ. ಪರಿಣಾಮ ೯ ಮಂದಿ ಸಾವನ್ನಪ್ಪಿದ್ದು, 25ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಮಕ್ಕಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

Tags:
error: Content is protected !!