ಅಯೋಧ್ಯೆ: ಉತ್ತರ ಪ್ರದೇಶದ ಶ್ರೀರಾಮ ಮಂದಿರದ ನಿರ್ಮಾಣ ಕಾರ್ಯ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದು ಭಗವಧ್ವಜಾರೋಹಣ ನೆರವೇರಿಸಿದರು.
ದೇವಸ್ಥಾನದ ಶಿಖರ್ ಮೇಲೆ 10 ಅಡಿ ಎತ್ತರದ ಭಗವಾಧ್ವಜ ಅಳವಡಿಸಲಾಗಿದೆ. ಬೆಳಿಗ್ಗೆ 11.35ರಿಂದ ಮಧ್ಯಾಹ್ನ 12.35ರ ಶುಭ ಮುಹೂರ್ತದಲ್ಲಿ ಭಗವಾಧ್ವಜಾರೋಹಣ ಕಾರ್ಯಕ್ರಮ ನಡೆಯಿತು.
ಇದನ್ನು ಓದಿ: ರಾಜ್ಯದ ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ ನಾಳೆ ಸಂವಿಧಾನ ದಿನ ಆಚರಣೆ ಕಡ್ಡಾಯ
ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು, ಮಹರ್ಷಿ ವಶಿಷ್ಠ, ಮಹರ್ಷಿ ವಿಶ್ವಾಮಿತ್ರ, ಮಹರ್ಷಿ ಅಗಸ್ತ್ಯ, ಮಹರ್ಷಿ ವಾಲ್ಮೀಕಿ, ದೇವಿ ಅಹಲ್ಯ, ನಿಷಾದರಾಜ್ ಗುಹಾ ಮತ್ತು ಮಾತಾ ಶಬರಿಗೆ ಸಂಬಂಧಿಸಿದ ದೇವಾಲಯಗಳನ್ನು ಒಳಗೊಂಡಿರುವ ಸಪ್ತಮಂದಿರಕ್ಕೆ ಭೇಟಿ ನೀಡಿದರು. ಬಳಿಕ ಶೇಷಾವ್ತರ ಮಂದಿರ ಹಾಗೂ ಮಾತಾ ಅನ್ನಪೂರ್ಣ ಮಂದಿರಕ್ಕೆ ತೆರಳಿ ದರ್ಶನ ಪಡೆದರು.
ಇನ್ನು ಧ್ವಜವನ್ನು ಸಾಂಪ್ರದಾಯಿಕ ಉತ್ತರ ಭಾರತೀಯ ನಾಗರ ವಾಸ್ತುಶಿಲ್ಪ ಶೈಲಿಯಲ್ಲಿ ನಿರ್ಮಿಸಲಾದ ಶಿಖರದ ಮೇಲೆ ಜೋಡಿಸಲಾಗಿದ್ದು, ದೇವಾಲಯದ ಸಂಕೀರ್ಣವನ್ನು ಸುತ್ತುವರೆದಿರುವ 800 ಮೀಟರ್ ಎತ್ತರದ ಪಾರ್ಕೋಟಾವನ್ನು ದಕ್ಷಿಣ ಭಾರತೀಯ ಶೈಲಿಯಲ್ಲಿ ವಿನ್ಯಾಸಗೊಳಿಸಲಾಗಿದ್ದು, ವಾಸ್ತುಶಿಲ್ಪದ ವೈವಿಧ್ಯತೆಯನ್ನು ಪ್ರತಿಬಿಂಬಿಸುತ್ತದೆ.





