ದೇಶ- ವಿದೇಶ

ಅಯೋಧ್ಯೆ ರಾಮಮಂದಿರದ ಗೋಪುರದ ಮೇಲೆ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಅಯೋಧ್ಯೆ: ಉತ್ತರ ಪ್ರದೇಶದ ಶ್ರೀರಾಮ ಮಂದಿರದ ನಿರ್ಮಾಣ ಕಾರ್ಯ ಪೂರ್ಣಗೊಂಡ ಹಿನ್ನೆಲೆಯಲ್ಲಿ ಅಯೋಧ್ಯೆಯ ಶ್ರೀರಾಮಮಂದಿರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದು ಭಗವಧ್ವಜಾರೋಹಣ ನೆರವೇರಿಸಿದರು.

ದೇವಸ್ಥಾನದ ಶಿಖರ್‌ ಮೇಲೆ 10 ಅಡಿ ಎತ್ತರದ ಭಗವಾಧ್ವಜ ಅಳವಡಿಸಲಾಗಿದೆ. ಬೆಳಿಗ್ಗೆ 11.35ರಿಂದ ಮಧ್ಯಾಹ್ನ 12.35ರ ಶುಭ ಮುಹೂರ್ತದಲ್ಲಿ ಭಗವಾಧ್ವಜಾರೋಹಣ ಕಾರ್ಯಕ್ರಮ ನಡೆಯಿತು.

ಇದನ್ನು ಓದಿ: ರಾಜ್ಯದ ಎಲ್ಲಾ ಸರ್ಕಾರಿ ಕಚೇರಿ, ಶಾಲಾ-ಕಾಲೇಜುಗಳಲ್ಲಿ ನಾಳೆ ಸಂವಿಧಾನ ದಿನ ಆಚರಣೆ ಕಡ್ಡಾಯ

ಇದಕ್ಕೂ ಮುನ್ನ ಪ್ರಧಾನಿ ನರೇಂದ್ರ ಮೋದಿ ಅವರು, ಮಹರ್ಷಿ ವಶಿಷ್ಠ, ಮಹರ್ಷಿ ವಿಶ್ವಾಮಿತ್ರ, ಮಹರ್ಷಿ ಅಗಸ್ತ್ಯ, ಮಹರ್ಷಿ ವಾಲ್ಮೀಕಿ, ದೇವಿ ಅಹಲ್ಯ, ನಿಷಾದರಾಜ್‌ ಗುಹಾ ಮತ್ತು ಮಾತಾ ಶಬರಿಗೆ ಸಂಬಂಧಿಸಿದ ದೇವಾಲಯಗಳನ್ನು ಒಳಗೊಂಡಿರುವ ಸಪ್ತಮಂದಿರಕ್ಕೆ ಭೇಟಿ ನೀಡಿದರು. ಬಳಿಕ ಶೇಷಾವ್ತರ ಮಂದಿರ ಹಾಗೂ ಮಾತಾ ಅನ್ನಪೂರ್ಣ ಮಂದಿರಕ್ಕೆ ತೆರಳಿ ದರ್ಶನ ಪಡೆದರು.

ಇನ್ನು ಧ್ವಜವನ್ನು ಸಾಂಪ್ರದಾಯಿಕ ಉತ್ತರ ಭಾರತೀಯ ನಾಗರ ವಾಸ್ತುಶಿಲ್ಪ ಶೈಲಿಯಲ್ಲಿ ನಿರ್ಮಿಸಲಾದ ಶಿಖರದ ಮೇಲೆ ಜೋಡಿಸಲಾಗಿದ್ದು, ದೇವಾಲಯದ ಸಂಕೀರ್ಣವನ್ನು ಸುತ್ತುವರೆದಿರುವ 800 ಮೀಟರ್‌ ಎತ್ತರದ ಪಾರ್ಕೋಟಾವನ್ನು ದಕ್ಷಿಣ ಭಾರತೀಯ ಶೈಲಿಯಲ್ಲಿ ವಿನ್ಯಾಸಗೊಳಿಸಲಾಗಿದ್ದು, ವಾಸ್ತುಶಿಲ್ಪದ ವೈವಿಧ್ಯತೆಯನ್ನು ಪ್ರತಿಬಿಂಬಿಸುತ್ತದೆ.

ಆಂದೋಲನ ಡೆಸ್ಕ್

Recent Posts

ಹನೂರು| ಲೊಕ್ಕನಹಳ್ಳಿ-ಒಡೆಯರಪಾಳ್ಯ ಮಾರ್ಗಮಧ್ಯೆ ಎರಡು ಚಿರತೆಗಳು ಪ್ರತ್ಯಕ್ಷ: ಆತಂಕದಲ್ಲಿ ವಾಹನ ಸವಾರರು

ಮಹಾದೇಶ್‌ ಎಂ ಗೌಡ  ಹನೂರು: ಶ್ರೀ ಕ್ಷೇತ್ರ ಮಲೆ ಮಾದೇಶ್ವರ ಬೆಟ್ಟಕ್ಕೆ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಭಕ್ತನ ಮೇಲೆ ಚಿರತೆ…

30 mins ago

ಓದುಗರ ಪತ್ರ: ನಗರ ಸಾರಿಗೆ ಬಸ್‌ಗಳಿಂದ ಪರಿಸರ ಮಾಲಿನ್ಯ

ಮೈಸೂರಿನ ಕುವೆಂಪುನಗರ ಮಾರ್ಗದಲ್ಲಿ ಸಂಚರಿಸುವ ನಗರ ಸಾರಿಗೆಯ ಕೆಲವು ಬಸ್ಸುಗಳಿಂದ ವಿಪರೀತವಾಗಿ ಕಪ್ಪು ಹೊಗೆ ಬರುತ್ತಿದ್ದು, ಇದರಿಂದಾಗಿ ಸಾರ್ವಜನಿಕರ ಆರೋಗ್ಯದ…

3 hours ago

ಓದುಗರ ಪತ್ರ: ರಾಜ್ಯಕ್ಕೆ ಕೇಂದ್ರದ ಅನುದಾನ ಕಡಿತ: ಹೋರಾಟ ಅಗತ್ಯ

ಪ್ರತಿ ವರ್ಷ ರಾಜ್ಯದಿಂದ ಕೇಂದ್ರ ಸರ್ಕಾರಕ್ಕೆ ಸುಮಾರು ಐದು ಲಕ್ಷ ಕೋಟಿ ರೂ.ಗಳ ತೆರಿಗೆ ಹೋಗುತ್ತಿದ್ದರೂ, ಕೇಂದ್ರ ಸರ್ಕಾರ ರಾಜ್ಯಕ್ಕೆ…

3 hours ago

ಓದುಗರ ಪತ್ರ: ಕುವೆಂಪುನಗರ ಸಾರ್ವಜನಿಕ ಗ್ರಂಥಾಲಯ ಅಭಿವೃದ್ಧಿಪಡಿಸಿ

ಮೈಸೂರಿನ ಕುವೆಂಪು ನಗರದಲ್ಲಿರುವ ಕೇಂದ್ರ ಗ್ರಂಥಾಲಯಕ್ಕೆ ಪ್ರತಿ ದಿನ ಹಿರಿಯ ನಾಗರಿಕರು ಬರುತ್ತಾರೆ. ಸ್ಪರ್ಧಾತ್ಮಕ ಪರೀಕ್ಷೆ ಹಾಗೂ ವಾರ್ಷಿಕ ಪರೀಕ್ಷೆಗಳಿಗೆ ಸಿದ್ಧತೆ…

3 hours ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ: ಕನ್ನಡ ಚಿತ್ರರಂಗವೂ ಅರಸು-ಸಿದ್ದರಾಮಯ್ಯ ಆಡಳಿತ ರಂಗವೂ

ವೈಡ್‌ ಆಂಗಲ್‌  ಬಾ.ನಾ.ಸುಬ್ರಹ್ಮಣ್ಯ  ಅತಿ ಹೆಚ್ಚು ಕಾಲ ನಾಡಿನ ಆಡಳಿತ ಚುಕ್ಕಾಣಿ ಹಿಡಿದಿದ್ದವರು ದೇವರಾಜ ಅರಸು. ಆ ದಾಖಲೆಯನ್ನು ಮೊನ್ನೆ…

3 hours ago

ಇಂದು ಫಲಪುಷ್ಪ ಪ್ರದರ್ಶನದ ಮಧುರ ವಸ್ತ್ರೋತ್ಸವ

ಮಂಡ್ಯ: ಜಿಲ್ಲಾಡಳಿತ ಮತ್ತು ಮಂಡ್ಯ ಜಿಲ್ಲಾ ಪಂಚಾಯಿತಿ,ತೋಟಗಾರಿಕೆ ಇಲಾಖೆ ಮತ್ತು ಕೈಮಗ್ಗ ಮತ್ತು ಜವಳಿ ಇಲಾಖೆ ಸಹ ಯೋಗದಲ್ಲಿ ಫಲಪುಷ್ಪ…

4 hours ago