ದೇಶ- ವಿದೇಶ

ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದ ಪ್ರಧಾನಿ ಮೋದಿ

ಹೊಸದಿಲ್ಲಿ : ದೇಶದೆಲ್ಲೆಡೆ ಸ್ವಾತಂತ್ರ್ಯೋತ್ಸವದ ಸಂಭ್ರಮ ಮನೆಮಾಡಿದ್ದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು 79ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ದೆಹಲಿಯ ಐತಿಹಾಸಿಕ ಕೆಂಪುಕೋಟೆಯಲ್ಲಿ ಧ್ವಜಾರೋಹಣ ನೆರವೇರಿಸಿದರು.

ಕೆಂಪುಕೋಟೆಗೆ ಆಗಮಿಸಿದ ಪ್ರಧಾನಿ ಮೋದಿಗೆ ಮೂರು ಸೇನಾಪಡೆಗಳು ಗೌರವ ಸಲ್ಲಿಸಿದವು. ಇದಕ್ಕೂ ಮುನ್ನ ರಾಜ್‌ಘಾಟ್‌ಗೆ ತೆರಳಿ ಮೋದಿ ಮಹಾತ್ಮಾ ಗಾಂಧಿ ಸ್ಮಾರಕಕ್ಕೆ ಪುಷ್ಪ ನಮನ ಸಲ್ಲಿಸಿದರು.

ಕೆಂಪು ಕೋಟೆಯಲ್ಲಿ ಪ್ರಧಾನಿ ಮೋದಿ ಧ್ವಜಾರೋಹಣ ಮಾಡಿದ ನಂತರ ಐಎಎಫ್ ನ ಎರಡು ಹೆಲಿಕಾಪ್ಟರ್ ಪುಷ್ಪವೃಷ್ಟಿ ಮಾಡಿತು. ಒಂದು ಹೆಲಿಕಾಪ್ಟರ್‌ ಧ್ವಜದೊಂದಿಗೆ ಹಾರಿದರೆ, ಇನ್ನೊಂದು ಹೆಲಿಕಾಪ್ಟರ್‌ ಆಪರೇಷನ್‌ ಸಿಂಧೂರ್‌ ಬ್ಯಾನರ್‌ ಅನ್ನು ಪ್ರದರ್ಶಿಸಿತು.

ಸಮಾರಂಭದಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ, ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ಕೇಂದ್ರ ಸಚಿವ ಹೆಚ್‌.ಡಿ.ಕುಮಾರಸ್ವಾಮಿ, ಲೋಕಸಭಾ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಅನಿಲ ಬಿಕ್ಕಟ್ಟು: ಕೃಷಿ, ಪ್ರವಾಸೋದ್ಯಮಕ್ಕೆ ಇಕ್ಕಟ್ಟು

ಕೆ.ಬಿ.ರಮೇಶನಾಯಕ ಮೈಸೂರು: ಮಧ್ಯಪ್ರಾಚ್ಯ ದೇಶಗಳಲ್ಲಿ ನಡೆಯುತ್ತಿರುವ ಯುದ್ಧದಿಂದಾಗಿ ಭಾರತದ ಮೇಲೆ ದಿನದಿಂದ ದಿನಕ್ಕೆ ಅನಿಲ ಬಿಕ್ಕಟ್ಟು ಬಿಗಡಾಯಿಸುತ್ತಿದ್ದು, ವಾಣಿಜ್ಯ ಬಳಕೆಯ…

13 mins ago

ಕಾವೇರಿ ನದಿ ದಂಡೆಯಲ್ಲಿ ಹೆಚ್ಚುತ್ತಿರುವ ವಾಮಾಚಾರ

ಭೇರ್ಯ ಮಹೇಶ್ ಮಡಕೆ, ಕುಡಿಕೆ, ನಿಂಬೆಹಣ್ಣು, ಕುಂಕುಮ, ರಾಶಿ ಹೂಗಳನ್ನು ಬಿಸಾಡುತ್ತಿರುವುದರಿಂದ ನದಿ ಕಲುಷಿತ ಆರೋಪ  ಕೆ.ಆರ್.ನಗರ: ನದಿಗಳ ಸಂರಕ್ಷಣೆಗಾಗಿ…

20 mins ago

ಕೊಡಗು ; ವ್ಯಕ್ತಿ ಬಲಿ ಪಡೆದಿದ್ದ ರೌಡಿ ಆನೆ ಕೊನೆಗೂ ಸೆರೆ

ಕೊಡಗು : ಕಳೆದ ಕೆಲ ದಿನಗಳಿಂದ ಉಪಟಳ ನೀಡುವ ಜತೆಗೆ ವ್ಯಕ್ತಿಯ ಮೇಲೆ ದಾಳಿ ಮಾಡಿ ಬಲಿ ಪಡೆದಿದ್ದ ಕಾಡಾನೆಯನ್ನು…

8 hours ago

ಸೋಮವಾರದಿಂದಲೇ ತಂಬಾಕು ಖರೀದಿ : ಗೋಯಲ್‌ ಭರವಸೆ

ಬೆಂಗಳೂರು : ಕರ್ನಾಟಕವೂ ಸೇರಿದಂತೆ ದೇಶಾದ್ಯಂತ ತಂಬಾಕು ಬೆಳೆಗಾರರ ಸಮಸ್ಯೆಗಳ ಬಗ್ಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ…

9 hours ago

ಸೃಜನಶೀಲತೆಗೆ  ʻಎಐʼ ಕುತ್ತು : ಲೇಖಕ ನಾಗಭೂಷಣ ಸ್ವಾಮಿ

ಬೆಂಗಳೂರು : ಸಾಹಿತ್ಯದಲ್ಲಿ ಕೃತಕ ಬುದ್ಧಿಮತ್ತೆಯ ಬಳಕೆಯಿಂದ ಸಾಕಷ್ಟು ಅಪಾಯಗಳು ಎದುರಾಗುತ್ತವೆ, ಮನುಷ್ಯನ ಸೃಜನಶೀಲ ಚಿಂತನೆಗೆ ಎಐ ತಂತ್ರಜ್ಞಾನ ಮಾರಕವಾಗಲಿದೆ…

9 hours ago

ಊಹಾ ಪತ್ರಿಕೋದ್ಯಮ ಬಿಟ್ಟು, ಸತ್ಯವನ್ನೇ ಬರೆಯಿರಿ : ಪತ್ರಕರ್ತರಿಗೆ ಮುಖ್ಯಮಂತ್ರಿ ಸಲಹೆ

ಬೆಂಗಳೂರು : ನಾವು ಯಾರ ಪರವಾಗಿ ಇದ್ದೇವೆ ಎನ್ನುವ ಸ್ಪಷ್ಟ ಅರಿವು ಮಾಧ್ಯಮದವರಿಗೆ ಇರಬೇಕು. ಸರ್ಕಾರ ಕಟ್ಟ ಕಡೆಯ ಮನುಷ್ಯರ…

9 hours ago