ನವದೆಹಲಿ: ಬಿಹಾರ ಸರ್ಕಾರದ ಮುಖ್ಯಮಂತ್ರಿ ರೋಜ್‌ಗಾರ್ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು.
ಈ ಮೂಲಕ 75 ಲಕ್ಷ ಮಹಿಳೆಯರ ಖಾತೆಗೆ ತಲಾ 10,000 ರೂ ಜಮಾ ಮಾಡಲಾಯಿತು.
ಪ್ರಧಾನಿ ನರೇಂದ್ರ ಮೋದಿ ಅವರು ದೆಹಲಿಯಿಂದಲೇ ವಿಡಿಯೋ ಕಾನ್ಫರೆನ್ಸ್ ಮೂಲಕ ಯೋಜನೆಗೆ ಚಾಲನೆ ನೀಡಿದರು.
ಇದನ್ನೂ ಓದಿ:-ಇತಿಹಾಸದ ಪುಟ ಸೇರಿದ ಭಾರತದ ಮೊದಲ ಸೂಪರ್ ಸಾನಿಕ್ ಯುದ್ಧ ವಿಮಾನ ಮಿಗ್-21
ಈ ಮೂಲಕ ರಾಜ್ಯಾದ್ಯಂತ 75 ಲಕ್ಷ ಮಹಿಳೆಯರ ಬ್ಯಾಂಕ್ ಖಾತೆಗಳಿಗೆ ತಲಾ 10,000 ವರ್ಗಾಯಿಸಿದರು. ಒಟ್ಟು 7,500 ಕೋಟಿ ವಿತರಣೆಯಾಗಿದೆ.
ಮಹಿಳಾ ಸಬಲೀಕರಣ ಮತ್ತು ಸ್ವಾವಲಂಬನೆಯನ್ನು ಉತ್ತೇಜಿಸಲು ವಿನ್ಯಾಸಗೊಳಿಸಲಾದ ಈ ಯೋಜನೆಯು ಸ್ವ-ಉದ್ಯೋಗ ಮತ್ತು ಜೀವನೋಪಾಯದ ಅವಕಾಶಗಳನ್ನು ಸೃಷ್ಟಿಸುವ ಗುರಿಯನ್ನು ಹೊಂದಿದೆ.
ಬಿಹಾರದ ಪ್ರತಿ ಕುಟುಂಬದ ಒಬ್ಬ ಮಹಿಳೆಗೆ ಆದಾಯ-ಉತ್ಪಾದಿಸುವ ಚಟುವಟಿಕೆಗಳನ್ನು ಪ್ರಾರಂಭಿಸಲು ಅಥವಾ ವಿಸ್ತರಿಸಲು ಸಹಾಯ ಮಾಡಲು ಆರ್ಥಿಕ ನೆರವು ನೀಡುತ್ತದೆ.





