ನವದೆಹಲಿ: ಮನ್ ಕಿ ಬಾತ್‌ನಲ್ಲಿ ಪಾಕಿಸ್ತಾನ ವಿರುದ್ಧ ಪ್ರಧಾನಿ ನರೇಂದ್ರ ಮೋದಿ ಕೆಂಡಾಮಂಡಲವಾಗಿದ್ದು, ಉಗ್ರರ ದಾಳಿಯನ್ನು ತೀವ್ರವಾಗಿ ಖಂಡಿಸಿದ್ದಾರೆ.
ಈ ಕುರಿತು ಮನ್ ಕಿ ಬಾತ್‌ನಲ್ಲಿ ಮಾತನಾಡಿದ ಅವರು, ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಗೆ ಕೆಂಡಾಮಂಡಲರಾಗಿದ್ದಾರೆ.
ಜಮ್ಮು-ಕಾಶ್ಮೀರ ಪ್ರಗತಿಯತ್ತ ಸಾಗಿರುವುದರಿಂದ ಶತ್ರುಗಳ ಕಣ್ಣು ಕೆಂಪಗಾಗುವಂತೆ ಮಾಡಿದೆ. ಇದರಿಂದ ಅದನ್ನು ನಾಶಪಡಿಸಲು ಹತಾಶ ಪ್ರಯತ್ನ ನಡೆಸಲಾಗುತ್ತಿದೆ ಎಂದು ಕಿಡಿಕಾರಿದ್ದಾರೆ.
ಇನ್ನು ಮುಂದುವರಿದು ಮಾತನಾಡಿದ ಅವರು, ಪಹಲ್ಗಾಮ್ ಉಗ್ರರ ದಾಳಿಯಲ್ಲಿ ಮೃತಪಟ್ಟವರಿಗೆ ನ್ಯಾಯ ಸಿಗುತ್ತದೆ. ಉಗ್ರರಿಗೆ ಕಠಿಣ ಶಿಕ್ಷೆ ಕೊಟ್ಟೇ ಕೊಡುತ್ತೇವೆ ಎಂದು ಭರವಸೆ ನೀಡಿದ್ದಾರೆ.





