pm narendra modi (1)
ಇಂಫಾಲ್ : ಈಶಾನ್ಯ ರಾಜ್ಯ ಭೀಕರ ಜನಾಂಗೀಯ ಹಿಂಸಾಚಾರಕ್ಕೆ ತುತ್ತಾಗಿ ಎರಡು ವರ್ಷಗಳ ನಂತರ, ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ಮಣಿಪುರಕ್ಕೆ ಭೇಟಿ ನೀಡುತ್ತಿದ್ದು, ೮,೫೦೦ ಕೋಟಿ ರೂ. ಮೊತ್ತದ ಅಭಿವೃದ್ಧಿ ಯೋಜನೆಗಳನ್ನು ಅನಾವರಣಗೊಳಿಸಲಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಕುಕಿಗಳು ಬಹುಸಂಖ್ಯಾತರಾಗಿರುವ ಚುರಾಚಂದ್‌ಪುರದ ಪೀಸ್ ಗ್ರೌಂಡ್‌ನಲ್ಲಿ ಪ್ರಧಾನಿ ಮೋದಿ ೭,೩೦೦ ಕೋಟಿ ರೂ.ಗಳ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಅಡಿಪಾಯ ಹಾಕಲಿದ್ದಾರೆ. ಮೈಟೈ ಬಹುಸಂಖ್ಯಾತ ಇಂಫಾಲ್‌ನಲ್ಲಿ ಒಟ್ಟು ೧,೨೦೦ ಕೋಟಿ ರೂ.ಗಳ ಮೂಲಸೌಕರ್ಯ ಯೋಜನೆಗಳನ್ನು ಪ್ರಧಾನಿ ಉದ್ಘಾಟಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಮಣಿಪುರದಲ್ಲಿ ಹಿಂಸಾಚಾರದಿಂದ ಮೇ ೨೦೨೩ರಿಂದ ಇದುವರೆಗೆ ೨೬೦ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ ಮತ್ತು ಸಾವಿರಾರು ಜನ ನಿರಾಶ್ರಿತರಾಗಿದ್ದಾರೆ. ಕುಕಿ ಮತ್ತು ಮೈಟೈ ಸಮುದಾಯಗಳ ನಡುವಿನ ಜನಾಂಗೀಯ ಕಲಹದ ನಂತರ ರಾಜ್ಯಕ್ಕೆ ಭೇಟಿ ನೀಡದ ಬಗ್ಗೆ ವಿರೋಧ ಪಕ್ಷಗಳು ಪದೇ ಪದೇ ಟೀಕಿಸುತ್ತಿರುವ ನಡುವೆಯೇ ಪ್ರಧಾನಿ ಮೋದಿ ಶನಿವಾರ ಭೇಟಿ ನೀಡುತ್ತಿದ್ದಾರೆ.
ಮಣಿಪುರ ಸರ್ಕಾರ ಗುರುವಾರ ಸಂಜೆ ಚುರಾಚಂದ್‌ಪುರದ ಪೀಸ್ ಗ್ರೌಂಡ್ ಮತ್ತು ಇಂಫಾಲ್‌ನ ಕಾಂಗ್ಲಾ ಕೋಟೆಯಲ್ಲಿ ಪ್ರಧಾನಿಯವರ ಕಾರ್ಯಕ್ರಮದ ದೊಡ್ಡ ದೊಡ್ಡ ಜಾಹೀರಾತು ಫಲಕವನ್ನು ಹಾಕಿದೆ. ಇಂಫಾಲ್‌ನ ಪ್ರಮುಖ ಸ್ಥಳವಾದ ಕೀಸಂಪತ್ ಜಂಕ್ಷನ್‌ನಲ್ಲಿ ಈ ಹೋರ್ಡಿಂಗ್ ಕಾಣಿಸಿಕೊಂಡಿದ್ದು, ಇದು ಬಿಜೆಪಿ ರಾಜ್ಯ ಪ್ರಧಾನ ಕಚೇರಿಗೂ ಹತ್ತಿರದಲ್ಲಿದೆ.
ಕಠ್ಮಂಡು: ನೇಪಾಳದಲ್ಲಿ ಮತ್ತೆ ಪ್ರವಾಹ, ಭೂಕುಸಿತದ ಆರ್ಭಟ ಮುಂದುವರಿದಿದ್ದು, ಕೇವಲ 8 ಸೆಕೆಂಡ್‌ಗಳಲ್ಲಿ ಪರ್ವತವೇ ಕುಸಿದು ಬಿದ್ದಿದೆ! ವಿವಿಧೆಡೆ ಸಂಭವಿಸಿದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಪಳನಿಮೇಡ್ ಗ್ರಾಮದಲ್ಲಿ ರೈತನ ಮೇಲೆ ಕಾಡುಹಂದಿ ದಾಳಿ ಮಾಡಿದ್ದು,…
ಮೈಸೂರು: ಮುಡಾ 50:50 ಸೈಟ್ ವಿಚಾರದಲ್ಲಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಮಹತ್ವದ ಮಾಹಿತಿ ನೀಡಿದ್ದಾರೆ. ಶೀಘ್ರದಲ್ಲೇ ಅಕ್ರಮ ಸೈಟ್‌ಗಳ…
ಕೊಪ್ಪಳ: ಮೈಸೂರು ದಸರಾ ಉದ್ಘಾಟನೆ ಕುರಿತು ಹರಿದಾಡುತ್ತಿದ್ದ ವದಂತಿಗಳಿಗೆ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿ ತೆರೆ ಎಳೆದಿದ್ದಾರೆ. ಮೈಸೂರು ದಸರಾ ಉದ್ಘಾಟನೆಗೆ…
ನವದೆಹಲಿ: ಬ್ಯಾಂಕ್ ಗ್ರಾಹಕರಿಗೆ ಯಾವುದೇ ಆತಂಕ ಬೇಡ. ಇಂದಿನಿಂದ ನಡೆಯಬೇಕಿದ್ದ 3 ದಿನಗಳ ಬ್ಯಾಂಕ್ ಮುಷ್ಕರ ಮುಂದೂಡಿಕೆಯಾಗಿದೆ. ಬ್ಯಾಂಕ್ ಸೇವೆಗಳಲ್ಲಿ…
ಪ್ರಜಾತಂತ್ರ ವ್ಯವಸ್ಥೆಯ ಭಾರತದಲ್ಲಿ ಪ್ರತಿ ಐದು ವರ್ಷಗಳಿಗೊಮ್ಮೆ ಸಂಸತ್ತು ಮತ್ತು ವಿಧಾನಸಭೆಗಳಿಗೆ ಮುಕ್ತ ಮತ್ತು ನಿಷ್ಪಕ್ಷಪಾತ ಚುನಾವಣೆಯನ್ನು ನಡೆಸುವ ಮೂಲಕ…