Mysore
32
few clouds

Social Media

ಸೋಮವಾರ, 02 ಮಾರ್ಚ್ 2026
Light
Dark

ಇರಾನ್‌ ಮೇಲೆ ಇಸ್ರೇಲ್-ಅಮೇರಿಕಾ ಜಂಟಿ ದಾಳಿ: ಇಸ್ರೇಲ್‌ ಪ್ರಧಾನಿ ನೆತನ್ಯಾಹುಗೆ ಪ್ರಧಾನಿ ನರೇಂದ್ರ ಮೋದಿ ಕರೆ

ನವದೆಹಲಿ: ಇರಾನ್‌ ಮೇಲೆ ಇಸ್ರೇಲ್‌-ಅಮೇರಿಕಾ ದಾಳಿತ ನಂತರ ನಡೆಯುತ್ತಿರುವ ಉದ್ವಿಗ್ನತೆಯ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರು ಇಸ್ರೇಲ್‌ ಪ್ರಧಾನಿ ಬೆಂಜಮಿನ್‌ ನೆತನ್ಯಾಹು ಅವರೊಂದಿಗೆ ಕರೆ ಮಾಡಿ ಮಾತನಾಡಿದ್ದಾರೆ.

ಪ್ರಾದೇಶಿಕ ಪರಿಸ್ಥಿತಿಯ ಬಗ್ಗೆ ಚರ್ಚಿಸಿದ ಪ್ರಧಾನಿ ಮೋದಿ ಅವರು, ಯುದ್ಧವನ್ನು ಬೇಗನೆ ನಿಲ್ಲಿಸುವಂತೆ ಕರೆ ನೀಡಿದರು. ಇತ್ತೀಚಿನ ಬೆಳವಣಿಗೆಗಳ ಬಗ್ಗೆ ಭಾರತದ ಕಳವಳ ಬಗ್ಗೆ ಅವರು ತಿಳಿಸಿ ನಾಗರಿಕರ ಸುರಕ್ಷತೆಯು ಆದ್ಯತೆಯಾಗಿರಬೇಕು ಎಂದು ಹೇಳಿದರು.

ಇನ್ನು ಭಾನುವಾರ ರಾತ್ರಿ ಪ್ರಧಾನಿ ಮೋದಿ ಅವರು, ಭದ್ರತೆ ಮತ್ತು ಕಾರ್ಯತಂತ್ರದ ವಿಷಯಗಳ ಕುರಿತು ದೇಶದ ಅತ್ಯುನ್ನತ ನಿರ್ಧಾರ ತೆಗೆದುಕೊಳ್ಳುವ ಸಂಸ್ಥೆಯಾದ ಭದ್ರತೆಯ ಕುರಿತಾದ ಸಂಪುಟ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿದ್ದರು.

ಸಭೆಯಲ್ಲಿ ರಕ್ಷಣಾ ಸಚಿವ ರಾಜನಾಥ್‌ ಸಿಂಗ್‌, ಗೃಹ ಸಚಿವ ಅಮಿತ್‌ ಶಾ, ವಿದೇಶಾಂಗ ಸಚಿವ ಎಸ್.ಜೈಶಂಕರ್‌ ಮತ್ತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್‌ ಭಾಗಿಯಾಗಿದ್ದರು.

 

Tags:
error: Content is protected !!