Mysore
23
clear sky

Social Media

ಮಂಗಳವಾರ, 14 ಏಪ್ರಿಲ 2026
Light
Dark

ಗಾಯಕಿ ಆಶಾ ಭೋಸ್ಲೆ ನಿಧನಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

ಮುಂಬೈ: ಭಾರತೀಯ ಚಿತ್ರರಂಗದ ಖ್ಯಾತ ಗಾಯಕಿ ಆಶಾ ಭೋಸ್ಲೆ ವಿಧಿವಶರಾಗಿದ್ದಾರೆ. ಹಿರಿಯ ಗಾಯಕಿ ಅಗಲಿಕೆಗೆ ಪ್ರಧಾನಿ ನರೇಂದ್ರ ಮೋದಿ ಕಂಬನಿ ಮಿಡಿದಿದ್ದಾರೆ.

ಆಶಾ ಭೋಸ್ಲೆ ಅವರ ಜೊತೆಗಿನ ಚಿತ್ರಗಳನ್ನು ಹಂಚಿಕೊಂಡು ಸಾಮಾಜಿಕ ಜಾಲತಾಣಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ.

ಆಶಾ ಭೋಸ್ಲೆ ಭಾರತ ಕಂಡ ಬಹುಮುಖ ಪ್ರತಿಭೆ. ದಶಕಗಳ ಕಾಲ ಆಶಾ ಭೋಸ್ಲೆ ಅವರ ಸಂಗೀತ ಪಯಣ ನಮ್ಮ ಸಾಂಸ್ಕೃತಿಕ ಪರಂಪರೆಯನ್ನು ಶ್ರೀಮಂತಗೊಳಿಸಿದೆ. ವಿಶ್ವದಾದ್ಯಂತ ಕೋಟ್ಯಾಂತರ ಹೃದಯಗಳನ್ನು ತಲುಪಿದೆ. ಆಶಾ ಭೋಸ್ಲೆ ಅವರ ನಿಧನ ಭಾರತೀಯ ಚಿತ್ರರಂಗಕ್ಕೆ ತುಂಬಲಾರದ ನಷ್ಟವನ್ನು ಉಂಟುಮಾಡಿದೆ.

ಆಶಾ ಭೋಸ್ಲೆ ಅವರ ಅಗಲಿಕೆ ಅವರ ಕುಟುಂಬ ಸದಸ್ಯರಿಗೆ ದುಃಖವನ್ನು ಭರಿಸುವ ಶಕ್ತಿಯನ್ನು ಭಗವಂತ ನೀಡಲಿ ಎಂದು ಪ್ರಾರ್ಥಿಸಿದ್ದಾರೆ.

Tags:
error: Content is protected !!