ನವದೆಹಲಿ: ವಿದೇಶ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿಗೆ ಘಾನಾ ದೇಶದ ರಾಷ್ಟ್ರೀಯ ಗೌರವ ಆಫೀಸರ್ ಆಫ್ ದಿ ಆರ್ಡರ್ ದಿ ಸ್ಟಾರ್ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಐದು ದೇಶಗಳ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಮೊದಲು ಘಾನಾ ದೇಶಕ್ಕೆ ಭೇಟಿ ನೀಡಿದ್ದಾರೆ. ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರನ್ನು ಪ್ರಭಾವಶಾಲಿ ಜಾಗತಿಕ ನಾಯಕ ಎಂದು ಗುರುತಿಸಿ ಘಾನಾದ ಅಧ್ಯಕ್ಷ ಜಾನ್ ಡ್ರಾಮಣಿ ಮಹಾಮ ಅವರು ರಾಷ್ಟ್ರೀಯ ಗೌರವ ಆಫೀಸರ್ ಆಫ್ ದಿ ಆರ್ಡರ್ ದಿ ಸ್ಟಾರ್ ಪ್ರಶಸ್ತಿ ನೀಡಿ ಗೌರವಿಸಿದ್ದಾರೆ.
ಪ್ರಶಸ್ತಿ ಸ್ವೀಕರಿಸಿದ ಬಳಿಕ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಈ ಗೌರವ ಕೇವಲ ವೈಯಕ್ತಿಕ ಶ್ರಮದಿಂದಲ್ಲ. ಇದು 140 ಕೋಟಿ ಭಾರತೀಯನ ಸಾಧನೆ. ಅವರ ಪರವಾಗಿ ನಾನು ಇದನ್ನು ಸ್ವೀಕರಿಸಿದ್ದೇನೆ. ಈ ಪ್ರಶಸ್ತಿಯನ್ನು ರಾಷ್ಟ್ರದ ಯುವಜನತೆಗೆ ಅರ್ಪಿಸುತ್ತೇವೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ. ಈ ಕುರಿತು ಪ್ರಧಾನಿ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಘಾನಾದ ರಾಷ್ಟ್ರೀಯ ಪ್ರಶಸ್ತಿ ಆಫೀಸ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ನೀಡಿದ್ದಕ್ಕೆ ಕೃತಜ್ಞತೆ ಸಲ್ಲಿಸಿದ್ದಾರೆ.





