ದೇಶ- ವಿದೇಶ

ಜಮ್ಮು-ಕಾಶ್ಮೀರದಲ್ಲಿ ಝಡ್‌-ಮೋರ್ಹ್‌ ಸುರಂಗ ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ

ಶ್ರೀನಗರ: ಜಮ್ಮು-ಕಾಶ್ಮೀರದ ಗಂದರ್‌ಬಾಲ್‌ ಜಿಲ್ಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದು ಝಡ್‌-ಮೋರ್ಹ್‌ ಸುರಂಗ ಮಾರ್ಗ ಉದ್ಘಾಟಿಸಿದರು.

ಇದು 2024ರ ವಿಧಾನಸಭಾ ಚುನಾವಣೆ ಬಳಿಕ ಜಮ್ಮು-ಕಾಶ್ಮೀರಕ್ಕೆ ಪ್ರಧಾನಿ ಮೋದಿ ಅವರ ಮೊದಲ ಭೇಟಿಯಾಗಿದೆ.

ಇಂದು ಶ್ರೀನಗರ ವಿಮಾನ ನಿಲ್ದಾಣಕ್ಕೆ ಬಂದಿಳಿದ ಪ್ರಧಾನಿ ಮೋದಿ ಅವರು, ಹೆಲಿಕಾಪ್ಟರ್‌ ಮೂಲಕ ತೆರಳಿ ಸುರಂಗ ಮಾರ್ಗ ಉದ್ಘಾಟಿಸಿದರು. ಮೋದಿ ಜೊತೆಗೆ ಕೇಂದ್ರ ಸಚಿವ ನಿತಿನ್‌ ಗಡ್ಕರಿ, ಜಮ್ಮು ಮತ್ತು ಕಾಶ್ಮೀರದ ಸಿಎಂ ಓಮರ್‌ ಅಬ್ದುಲ್ಲಾ, ರಾಜ್ಯಪಾಲ ಮನೋಜ್‌ ನಿನ್ಹಾ ಸೇರಿದಂತೆ ಇತರ ನಾಯಕರ ಜೊತೆಗಿದ್ದರು.

ಮಧ್ಯ ಕಾಶ್ಮೀರದ ಗಂದರ್‌ಬಾಲ್‌ ಜಿಲ್ಲೆಯ ಗಗಾಂಗೀರ್‌ ಮತ್ತು ಸೋನಾಮಾರ್ಗ್‌ ನಡುವಿನ 6.5 ಕಿ.ಮೀ ಉದ್ದದ 2 ಪಥದ ರಸ್ತೆ ಸುರಂಗದಲ್ಲಿ ತುರ್ತು ಪರಿಸ್ಥಿತಿಗಾಗಿ ಸಮಾನಾಂತರ 7.5 ಮೀಟರ್‌ ಎಸ್ಕೇಪ್‌ ಮಾರ್ಗವನ್ನು ನಿರ್ಮಿಸಲಾಗಿದೆ.

ಸಮುದ್ರ ಮಟ್ಟಕ್ಕಿಂತ 8650 ಅಡಿ ಎತ್ತರದಲ್ಲಿ ನಿರ್ಮಿಸಿರುವ ಈ ಸುರಂಗವು ಶ್ರೀನಗರ ಮತ್ತು ಸೋನಾಮಾರ್ಗ ನಡುವೆ ಲೇಹ್‌ಗೆ ಹೋಗುವ ಮಾರ್ಗದಲ್ಲಿ ಎಲ್ಲಾ ಋತುಮಾನದಲ್ಲೂ ಸಂಪರ್ಕ ಕಲ್ಪಿಸುತ್ತದೆ.

2700 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣವಾಗಿರುವ 6.5 ಕಿ.ಮೀ ಉದ್ದದ ಝಡ್‌-ಮೋರ್ಹ್‌ ಸುರಂಗದಲ್ಲಿ ಗಂಟೆಗೆ 70 ಕಿ.ಮೀ ವೇಗದಲ್ಲಿ ಚಲಿಸುವ ಅವಕಾಶವಿದೆ. ಸುರಂಗವು ಪ್ರತಿ ಗಂಟೆಗೆ 1000 ವಾಹನಗಳನ್ನು ನಿಭಾಯಿಸುವ ಸಾಮರ್ಥ್ಯ ಹೊಂದಿದೆ. ಎಲ್ಲಾ ಹವಾಮಾನಗಳಲ್ಲಿಯೂ ಸಂಚಾರಕ್ಕೆ ಯೋಗ್ಯವಾಗಿರುವ ಈ ಸುರಂಗವು ಕೇಂದ್ರಾಡಳಿತ ಪ್ರದೇಶವಾದ ಲಡಾಖ್‌ಗೂ ಸಂಪರ್ಕ ಕಲ್ಪಿಸಲಿದೆ. ಜೊತೆಗೆ ಇದರಿಂದ ಸೇನೆಯ ಓಡಾಟಕ್ಕೂ ತೀವ್ರ ಅನುಕೂಲವಾಗಲಿದೆ.

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮೈಸೂರು ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಭಾರೀ ಪ್ರಮಾಣದ ಹಾನಿಯಾಗಿದೆ. ಮೈಸೂರು ಜಿಲ್ಲೆಯಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದಾಗಿ…

3 mins ago

ನಾಡಿನಾದ್ಯಂತ ಯುಗಾದಿ ಹಬ್ಬದ ಸಂಭ್ರಮ: ಹಳ್ಳಿಗಳಲ್ಲಿ ಹೊನ್ನೇರು ಕಟ್ಟಿ ಸಂಭ್ರಮಿಸಿದ ಅನ್ನದಾತರು

ಮೈಸೂರು: ರೈತರು ಸಡಗರದಿಂದ ಕೃಷಿ ಚಟುವಟಿಕೆ ಆರಂಭಿಸುವ ಮೊದಲ ಹೆಜ್ಜೆ ಯುಗಾದಿಯಾಗಿದ್ದು, ಜಿಲ್ಲೆಯ ಹಲವೆಡೆ ಅನ್ನದಾತರು ಹೊನ್ನೇರು ಕಟ್ಟಿ ಭೂಮಿ…

18 mins ago

ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ

ಮೈಸೂರು: ಇಂದು ನಾಡಿನೆಲ್ಲೆಡೆ ಯುಗಾದಿ ಹಬ್ಬದ ಸಂಭ್ರಮ ಮನೆಮಾಡಿದೆ. ಬೆಲೆ ಏರಿಕೆ, ಮಧ್ಯಪ್ರಾಚ್ಯ ಯುದ್ಧ ಭೀತಿಯ ನಡುವೆಯೂ ಜನರು ಸಾಂಪ್ರದಾಯಿಕವಾಗಿ…

29 mins ago

ಓದುಗರ ಪತ್ರ: ಮೈಸೂರಿನಲ್ಲಿ ಸುಸಜ್ಜಿತ ಫುಡ್ ಸ್ಟ್ರೀಟ್ ನಿರ್ಮಾಣವಾಗಲಿ

ಸಾಂಸ್ಕೃತಿಕ ನಗರಿ ಮೈಸೂರು ಆಹಾರ ಪ್ರಿಯರ ಸ್ವರ್ಗವೂ ಹೌದು. ಮೈಸೂರು ಪಾಕ್‌ನಿಂದ ಹಿಡಿದು ಮೈಲಾರಿ ದೋಸೆಯವರೆಗೆ ಇಲ್ಲಿನ ರುಚಿ ಪ್ರಸಿದ್ಧವಾಗಿದೆ.…

44 mins ago

ಓದುಗರ ಪತ್ರ: ಗೀತೆ ರಚನಾಕಾರರ ವಿರುದ್ಧ ಸುಮೊಟೊ ಕೇಸ್ ದಾಖಲಿಸಿ

ಪ್ರೇಮ್ ನಿರ್ದೇಶನದ ಕನ್ನಡ ಕೆಡಿ ಚಿತ್ರದ ಸರ್ಸೆ ನಿನ್ನ ಸೆರಗ ಸರ್ಸೆ.. ಎಂಬ ಗೀತೆ ದ್ವಂದ್ವಾರ್ಥದ ಕೀಳು ಅಭಿರುಚಿಯ ಹಾಡು…

46 mins ago

ಓದುಗರ ಪತ್ರ: ಪರೀಕ್ಷೆ ವೇಳೆ ವಿದ್ಯುತ್ ಕಡಿತ ಮಾಡದಿರಿ

ಮಾರ್ಚ್ ತಿಂಗಳು ವಿದ್ಯಾರ್ಥಿಗಳ ಭವಿಷ್ಯ ನಿರ್ಧರಿಸುವ ಪರೀಕ್ಷಾ ಸಮಯ. ಇಂತಹ ಸಂದರ್ಭದಲ್ಲಿ ರಾಜ್ಯಾದ್ಯಂತ ಎಸ್ಕಾಂಗಳು ವಿದ್ಯುತ್ ಕಡಿತ ಮಾಡುತ್ತಿರುವುದು ಸರಿಯಲ್ಲ.…

49 mins ago