ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದಿನಿಂದ ಜುಲೈ.26ರವರೆಗೆ ವಿದೇಶ ಪ್ರವಾಸದಲ್ಲಿದ್ದಾರೆ.
ಈ ಬಾರಿ ಬ್ರಿಟನ್ ಮತ್ತು ಮಾಲ್ಡೀವ್ಸ್‌ಗೆ ಭೇಟಿ ನೀಡಲಿದ್ದು, ಭೇಟಿಯಲ್ಲಿ ಭಾರತ-ಯುಕೆ ದ್ವಿಪಕ್ಷೀಯ ವಾಣಿಜ್ಯ ಒಪ್ಪಂದಕ್ಕೆ ಅಂತಿಮ ಸ್ವರೂಪ ನೀಡುವುದು ಹಾಗೂ ದ್ವಿಪಕ್ಷೀಯ ಸಂಬಂಧಗಳನ್ನು ಮತ್ತಷ್ಟು ಗಟ್ಟಿಗೊಳಿಸುವುದು ಪ್ರಮುಖ ಗುರಿಯಾಗಿದೆ.
ಬ್ರಿಟನ್ ಭೇಟಿಯ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು, 25-26ರಂದು ಮಾಲ್ಡೀವ್ಸ್‌ಗೆ ತೆರಳಲಿದ್ದಾರೆ. ಅಲ್ಲಿ ಅವರು ಮಾಲ್ಡೀವ್ಸ್ ಸ್ವಾತಂತ್ರ್ಯ ದಿನಾಚರಣೆಯ ಮುಖ್ಯ ಅತಿಥಿಯಾಗಿ ಭಾಗಿಯಾಗಲಿದ್ದಾರೆ.
ಮಾಲ್ಡೀವ್ಸ್‌ನ ರಾಷ್ಟ್ರಪತಿ ಮೊಹಮ್ಮದ್ ಮುಯಿಝಿ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿರುವ ಮೋದಿ ಅವರು ಎರಡೂ ದೇಶಗಳ ನಡುವಿನ ಸಹಕಾರವನ್ನು ಗಾಢವಾಗಿರುವ ಬಗ್ಗೆ ಕೂಲಂಕುಶವಾಗಿ ಚರ್ಚೆ ನಡೆಸಲಿದ್ದಾರೆ.





