Mysore
23
clear sky

Social Media

ಬುಧವಾರ, 21 ಜನವರಿ 2026
Light
Dark

ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಗಳಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ

ನವದೆಹಲಿ: ಪ್ರಧಾನ ಮಂತ್ರಿ ಧನ್‌-ಧಾನ್ಯ ಕೃಷಿ ಯೋಜನೆಗಳಿಗೆ ಇಂದು ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರು, ಕೃಷಿ ಕ್ಷೇತ್ರದಲ್ಲಿ ಎರಡು ಪ್ರಮುಖ ಯೋಜನೆಗಳನ್ನು ಪ್ರಾರಂಭಿಸಿದ್ದಾರೆ. ಇವುಗಳಿಗೆ 35,440 ಕೋಟಿ ರೂ ವೆಚ್ಚ ಮಾಡಲಾಗುತ್ತದೆ. ಪ್ರಧಾನಮಂತ್ರಿ ಧನ್‌ ಧಾನ್ಯ ಕೃಷಿ ಯೋಜನೆಗಳನ್ನು ಸಹ ಪ್ರಾರಂಭಿಸಿದ್ದಾರೆ. ಇದು 24,000 ಕೋಟಿ ರೂ ವೆಚ್ಚವನ್ನು ಹೊಂದಿದೆ.

ಈ ಯೋಜನೆ ಅಡಿಯಲ್ಲಿ ಕೃಷಿ ಉತ್ಪನ್ನ ಹೆಚ್ಚಿಸುವುದು. ಕೃಷಿ ದವಸ ಧಾನ್ಯಗಳನ್ನು ಬೆಳೆಯುವುದು ಹಾಗೂ ಸಮಗ್ರ ಕೃಷಿ ಅಭಿವೃದ್ಧಿ ಜಿಲ್ಲೆಯಲ್ಲಿ ನೀರಾವರಿ ಸೌಲಭ್ಯ ರೈತರಿಗೆ ಅಲ್ಪಾವಧಿ ಹಾಗೂ ದೀರ್ಘಾವಧಿ ಹಣಕಾಸು ನೆರವು ಮತ್ತು ಸುಗ್ಗಿಯ ನಂತರ ಪಂಚಾಯತ್‌ ಮತ್ತು ಬ್ಲಾಕ್‌ ಲೇವಲ್‌ನಲ್ಲಿ ದವಸ-ಧಾನ್ಯಗಳ ದಾಸ್ತಾನು ನಿರ್ಮಾಣ ಮಾಡುವುದು ಇದರ ಗುರಿಯಾಗಿದೆ.

ಇದನ್ನು ಓದಿ : ಭಾರತಕ್ಕೆ ಬಂದಿಳಿದ ಬ್ರಿಟನ್‌ ಪ್ರಧಾನಿ ; ಜಾಗತಿಕ ವಿಷಯ ಕುರಿತು ಆಳೆ ಮೋದಿ-ಕೀರ್‌ ಮಾತುಕತೆ 

ಈ ಕಾರ್ಯಕ್ರಮವು ವಾರ್ಷಿಕ 24,000 ಕೋಟಿ ರೂಗಳ ವೆಚ್ಚದಲ್ಲಿ 100 ಜಿಲ್ಲೆಗಳನ್ನು ಒಳಗೊಳ್ಳಲಿದೆ. ಕೇಂದ್ರ ಬಜೆಟ್‌ನಲ್ಲಿ ಘೋಷಿಸಲಾದ ಈ ಕಾರ್ಯಕ್ರಮವು ಅಸ್ತಿತ್ವದಲ್ಲಿರುವ 36 ಯೋಜನೆಗಳನ್ನು ಒಟ್ಟುಗೂಡಿಸುತ್ತದೆ ಹಾಗೂ ಬೆಳೆ ವೈವಿಧ್ಯೀಕರಣ ಮತ್ತು ಸುಸ್ಥಿರ ಕೃಷಿ ಪದ್ಧತಿಗಳ ಅಳವಡಿಕೆಯನ್ನು ಹೆಚ್ಚಿಸುತ್ತದೆ.

ಈ ಬಗ್ಗೆ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ ಅವರು, ಪ್ರಧಾನಮಂತ್ರಿ ಧನ್-ಧಾನ್ಯ ಕೃಷಿ ಯೋಜನೆಯು ಕೊಯ್ಲಿನ ನಂತರದ ಸಂಗ್ರಹಣೆಯನ್ನು ಹೆಚ್ಚಿಸುತ್ತದೆ. ನೀರಾವರಿ ಸೌಲಭ್ಯಗಳನ್ನು ಸುಧಾರಿಸುತ್ತದೆ ಹಾಗೂ ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುತ್ತದೆ ಎಂದು ಹೇಳಿದರು.

ಈ ಕಾರ್ಯಕ್ರಮವು 1.7 ಕೋಟಿ ರೈತರಿಗೆ ಸಹಾಯ ಮಾಡುವ ಸಾಧ್ಯತೆಯಿದೆ. ಈ ಯೋಜನೆಯು ಕೃಷಿ ಉತ್ಪಾದಕತೆಯನ್ನು ಹೆಚ್ಚಿಸುವುದು, ಬೆಳೆ ವೈವಿಧ್ಯೀಕರಣ ಮತ್ತು ಸುಸ್ಥಿರ ಕೃಷಿ ಪದ್ಧತಿಗಳನ್ನು ಹೆಚ್ಚಿಸುವುದು. ಕೊಯ್ಲಿನ ನಂತರದ ಸಂಗ್ರಹಣೆಯನ್ನು ಹೆಚ್ಚಿಸುವುದು, ನೀರಾವರಿ ಸೌಲಭ್ಯಗಳನ್ನು ಸುಧಾರಿಸುವುದು ಮತ್ತು ಸಾಲದ ಲಭ್ಯತೆಯನ್ನು ಸುಗಮಗೊಳಿಸುವ ಗುರಿಯನ್ನು ಹೊಂದಿದೆ.

Tags:
error: Content is protected !!