ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ 119ನೇ ಮನ್ ಕಿ ಬಾತ್ ಸಂಚಿಕೆ ಇಂದು ಪ್ರಸಾರವಾಯಿತು.
ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಜನತೆಗೆ ಹಲವು ವಿಷಯಗಳನ್ನು ಹೇಳಿದ್ದಾರೆ.
ಪದೇ ಪದೇ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಕರ್ನಾಟಕದ ಬಗ್ಗೆ ಮಾತನಾಡುವ ಪ್ರಧಾನಿ ನರೇಂದ್ರ ಮೋದಿ ಅವರು, ಇದು ಈ ಕರ್ನಾಟಕದ ಜನಪದ ಕಲೆಯಾಗಿರುವ ಹುಲಿ ವೇಷ ಕುಣಿತವನ್ನು ಉಲ್ಲೇಖಿಸಿ ಹುಲಿ ವೇಷ ಹಾಕುವವರನ್ನು ಹಾಡಿ ಹೊಗಳಿದ್ದಾರೆ.
ಈ ಬಗ್ಗೆ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಕರ್ನಾಟಕ, ಕೇರಳ ಮತ್ತು ತಮಿಳುನಾಡಿನಲ್ಲಿ ಹುಲಿ ವೇಷ ತೊಟ್ಟು ಕುಣಿತದ ದೃಶ್ಯ ನೋಡುಗರ ಕಣ್ಮನ ಸೆಳೆಯುತ್ತವೆ.
ಕರ್ನಾಟಕದ ಚಾಮರಾಜನಗರ ಜಿಲ್ಲೆಯಲ್ಲಿ ಬಿಆರ್‌ಟಿ ಅರಣ್ಯವಿದೆ. ಬಿಆರ್‌ಟಿ ಅರಣ್ಯ ಅತಿಹೆಚ್ಚು ಹುಲಿಗಳಿರುವ ಪ್ರದೇಶವಾಗಿದೆ. ಹುಲಿಗಳನ್ನು ಉಳಿಸುವುದರಲ್ಲಿ ಸ್ಥಳೀಯ ಸೋಲಿಗರ ಪಾತ್ರ ಬಹಳ ದೊಡ್ಡದಿದೆ. ಹುಲಿಗಳನ್ನು ಉಳಿಸಿರುವ ಕ್ರೆಡಿಟ್ ಸ್ಥಳೀಯ ಪೊಲೀಸರಿಗೆ ಸಲ್ಲಬೇಕು ಎಂದು ಹೇಳಿದರು.
ಇದರ ಜೊತೆಗೆ ಆರೋಗ್ಯದ ಕುರಿತು ಕೆಲವು ಸಲಹೆ ನೀಡಿದ ಪ್ರಧಾನಿ ಮೋದಿ ಅವರು, ದೇಹದ ಬೊಜ್ಜು ಹಲವು ರೋಗಗಳಿಗೆ ಆಹ್ವಾನ ನೀಡುತ್ತದೆ. ಎಂಟು ಜನರ ಪೈಕಿ ಒಬ್ಬರು ಬೊಜ್ಜು ಸಮಸ್ಯೆಯಿಂದ ಬಳಲುತ್ತಿದ್ದಾರೆ. ಮಕ್ಕಳಲ್ಲಿ ಬೊಜ್ಜಿನ ಸಮಸ್ಯೆ ಶೇಕಡಾ.4ರಷ್ಟು ಇದೆ. ಅಡುಗೆ ಎಣ್ಣೆ ಕಡಿಮೆ ಬಳಕೆಯಿಂದ ಬೊಜ್ಜು ತಗ್ಗಿಸಬಹುದು. ಆಹಾರದಲ್ಲಿ ಶೇ.10ರಷ್ಟು ಕಡಿಮೆ ಅಡುಗೆ ಎಣ್ಣೆ ಬಳಸಲು ಸಲಹೆ ನೀಡಿದರು.
ಬೆಂಗಳೂರು: ಸೈಬರ್ ಅಪರಾಧಗಳು ಸೇರಿದಂತೆ ನಾನಾ ಅಪರಾಧಗಳಲ್ಲಿ ನಮ್ಮ ರಾಜ್ಯ ರಾಷ್ಟ್ರೀಯ ಸರಾಸರಿಗಿಂತ ಹೆಚ್ಚಾಗಿದ್ದು ಇದನ್ನು ಕಟ್ಟುನಿಟ್ಟಾಗಿ ತಡೆಗಟ್ಟಿ ಎಂದು…
ಹಾಸನ: ಕಾರೊಂದು ನಿಯಂತ್ರಣ ತಪ್ಪಿ ಅಡಿಕೆ ತೋಟಕ್ಕೆ ನುಗ್ಗಿ ಪಲ್ಟಿಯಾದ ಪರಿಣಾಮ ಚಾಲಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹಾಸನ ಜಿಲ್ಲೆ…
ವಾಷಿಂಗ್ಟನ್: ಯುದ್ಧಕ್ಕೆ ಸಂಬಂಧಿಸಿದಂತೆ ಅಮೇರಿಕಾ ಪ್ರಜೆಗಳನ್ನು ಉದ್ದೇಶಿಸಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಭಾಷಣ ಮಾಡಿದ ಬೆನ್ನಲ್ಲೇ ಕಚ್ಚಾ ತೈಲದ ಬೆಲೆ…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಇಂದು ವಿಶ್ವ ಹಿಂದೂ ಪರಿಷತ್ ವತಿಯಿಂದ ಶೋಭಾಯಾತ್ರೆ ಹಮ್ಮಿಕೊಳ್ಳಲಾಗಿದೆ. ನಗರದಾದ್ಯಂತ ಕೇಸರಿ ಬಾವುಟ, ಬ್ಯಾನರ್,…
ವಾಷಿಂಗ್ಟನ್: ಇನ್ನು ಎರಡು ಅಥವಾ ಮೂರು ವಾರಗಳಲ್ಲಿ ಯುದ್ಧ ಅಂತ್ಯಗೊಳ್ಳಲಿದೆ ಎಂದು ಅಮೇರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ದೇಶವನ್ನು…
ಲಕ್ಷ್ಮಿಕಾಂತ್ ಕೊಮಾರಪ್ಪ ಗ್ರಾಮೀಣ ಭಾಗದಲ್ಲಿ ಮನೆಮಾಡಿದ ಸಂಭ್ರಮ; ಭಕ್ತಿ ಭಾವದಿಂದ ಪ್ರಕೃತಿ-ಗ್ರಾಮದೇವಿಗೆ ಪೂಜೆ ಸೋಮವಾರಪೇಟೆ: ಗ್ರಾಮೀಣ ಪ್ರದೇಶದ ಜನಪದದ ಪ್ರಮುಖ…