ದೇಶ- ವಿದೇಶ

ಮನ್‌ ಕಿ ಬಾತ್‌ನಲ್ಲಿ ಕರ್ನಾಟಕದ ಹುಲಿ ವೇಷ ಕುಣಿತ ಹಾಡಿ ಹೊಗಳಿದ ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ 119ನೇ ಮನ್‌ ಕಿ ಬಾತ್‌ ಸಂಚಿಕೆ ಇಂದು ಪ್ರಸಾರವಾಯಿತು.

ದೇಶವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಜನತೆಗೆ ಹಲವು ವಿಷಯಗಳನ್ನು ಹೇಳಿದ್ದಾರೆ.

ಪದೇ ಪದೇ ಮನ್‌ ಕಿ ಬಾತ್‌ ಕಾರ್ಯಕ್ರಮದಲ್ಲಿ ಕರ್ನಾಟಕದ ಬಗ್ಗೆ ಮಾತನಾಡುವ ಪ್ರಧಾನಿ ನರೇಂದ್ರ ಮೋದಿ ಅವರು, ಇದು ಈ ಕರ್ನಾಟಕದ ಜನಪದ ಕಲೆಯಾಗಿರುವ ಹುಲಿ ವೇಷ ಕುಣಿತವನ್ನು ಉಲ್ಲೇಖಿಸಿ ಹುಲಿ ವೇಷ ಹಾಕುವವರನ್ನು ಹಾಡಿ ಹೊಗಳಿದ್ದಾರೆ.

ಈ ಬಗ್ಗೆ ಮನ್‌ ಕಿ ಬಾತ್‌ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಕರ್ನಾಟಕ, ಕೇರಳ ಮತ್ತು ತಮಿಳುನಾಡಿನಲ್ಲಿ ಹುಲಿ ವೇಷ ತೊಟ್ಟು ಕುಣಿತದ ದೃಶ್ಯ ನೋಡುಗರ ಕಣ್ಮನ ಸೆಳೆಯುತ್ತವೆ.

ಕರ್ನಾಟಕದ ಚಾಮರಾಜನಗರ ಜಿಲ್ಲೆಯಲ್ಲಿ ಬಿಆರ್‌ಟಿ ಅರಣ್ಯವಿದೆ. ಬಿಆರ್‌ಟಿ ಅರಣ್ಯ ಅತಿಹೆಚ್ಚು ಹುಲಿಗಳಿರುವ ಪ್ರದೇಶವಾಗಿದೆ. ಹುಲಿಗಳನ್ನು ಉಳಿಸುವುದರಲ್ಲಿ ಸ್ಥಳೀಯ ಸೋಲಿಗರ ಪಾತ್ರ ಬಹಳ ದೊಡ್ಡದಿದೆ. ಹುಲಿಗಳನ್ನು ಉಳಿಸಿರುವ ಕ್ರೆಡಿಟ್‌ ಸ್ಥಳೀಯ ಪೊಲೀಸರಿಗೆ ಸಲ್ಲಬೇಕು ಎಂದು ಹೇಳಿದರು.

ಇದರ ಜೊತೆಗೆ ಆರೋಗ್ಯದ ಕುರಿತು ಕೆಲವು ಸಲಹೆ ನೀಡಿದ ಪ್ರಧಾನಿ ಮೋದಿ ಅವರು, ದೇಹದ ಬೊಜ್ಜು ಹಲವು ರೋಗಗಳಿಗೆ ಆಹ್ವಾನ ನೀಡುತ್ತದೆ. ಎಂಟು ಜನರ ಪೈಕಿ ಒಬ್ಬರು ಬೊಜ್ಜು ಸಮಸ್ಯೆಯಿಂದ ಬಳಲುತ್ತಿದ್ದಾರೆ. ಮಕ್ಕಳಲ್ಲಿ ಬೊಜ್ಜಿನ ಸಮಸ್ಯೆ ಶೇಕಡಾ.4ರಷ್ಟು ಇದೆ. ಅಡುಗೆ ಎಣ್ಣೆ ಕಡಿಮೆ ಬಳಕೆಯಿಂದ ಬೊಜ್ಜು ತಗ್ಗಿಸಬಹುದು. ಆಹಾರದಲ್ಲಿ ಶೇ.10ರಷ್ಟು ಕಡಿಮೆ ಅಡುಗೆ ಎಣ್ಣೆ ಬಳಸಲು ಸಲಹೆ ನೀಡಿದರು.

 

 

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಸಿಜೆಪಿ ನಾಯಕ ಅಭಿಜಿತ್ ದೀಪ್ಕೆ ಅಜ್ಜಿ ನಿಧನ

ಮುಂಬೈ: ಸಿಜೆಪಿ ಸಂಸ್ಥಾಪಕ ಅಭಿಜಿತ್‌ ದೀಪ್ಕೆ ಅವರನ್ನು ದೆಹಲಿ ಪೊಲೀಸರು ವಶಕ್ಕೆ ಪಡೆದ ಗಂಟೆಗಳಲ್ಲಿ ಅವರ ಅಜ್ಜಿ ನಿಧನರಾಗಿದ್ದಾರೆ. ದೀರ್ಘಕಾಲದ…

5 hours ago

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ: ನಾಳೆ ಅಧಿಕೃತ ಚಾಲನೆ

ಮೈಸೂರು: ಮೈಸೂರಿನ ದಸರಾ ಮಹೋತ್ಸವದ ಉದ್ಘಾಟನೆಗೆ ಚಾಮುಂಡಿಬೆಟ್ಟದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಉದ್ಘಾಟನಾ ಸಮಾರಂಭಕ್ಕಾಗಿ ಬೃಹತ್ ವೇದಿಕೆ ನಿರ್ಮಾಣ ಕಾರ್ಯ…

6 hours ago

ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಪ್ರಯುಕ್ತ ವಿಶೇಷ ಪೂಜೆ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಮಹಾಲಯ ಅಮಾವಾಸ್ಯೆ ಪ್ರಯುಕ್ತ ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ…

7 hours ago

ಅಭಿಜಿತ್ ದೀಪ್ಕೆ ಪೊಲೀಸ್ ವಶಕ್ಕೆ: ಜಂತರ್ ಮಂತರ್‌ನಲ್ಲಿ ಪ್ರತಿಭಟನೆಗೆ ಅಜಿಂಕ್ಯ ಶಿಂಧೆ ಸಾರಥ್ಯ

ನವದೆಹಲಿ: ಅಭಿಜಿತ್ ದೀಪ್ಕೆ ಪೊಲೀಸ್ ವಶದಲ್ಲಿರುವ ಹಿನ್ನೆಲೆಯಲ್ಲಿ, ಜಂತರ್ ಮಂತರ್‌ನಲ್ಲಿ ನಡೆಯುತ್ತಿರುವ ಪ್ರತಿಭಟನೆಗೆ ಸಿಜೆಪಿಯ ಸಂಘಟನಾ ಉಸ್ತುವಾರಿ ಅಜಿಂಕ್ಯ ಶಿಂಧೆ…

8 hours ago

ಓದುಗರ ಪತ್ರ: ಹೋರಾಟಗಳು ರಚನಾತ್ಮಕವಾಗಿರಲಿ, ಗಂಭೀರವಾಗಿರಲಿ

ಚುನಾವಣಾ ಆಯೋಗದ ವಿರುದ್ಧ ವಿಪಕ್ಷಗಳು ಹಾಗೂ ಕೆಲವು ಸಂಘಟನೆಗಳು ಪ್ರತಿಭಟನೆಗಳನ್ನು ಮಾಡುತ್ತಿರುವುದು ಪ್ರಸ್ತುತ ರಾಜಕೀಯ ಮತ್ತು ಸಾಮಾಜಿಕ ವಾತಾವರಣ ದಲ್ಲಿ…

11 hours ago

ಓದುಗರ ಪತ್ರ: ಒಂದು ವರ್ಷ ಅಲೆದಾಡಿಸಿದ ನಂತರ… !

ಮೈಸೂರಿನಲ್ಲಿ ಇ-ಖಾತಾ ಹಾಗೂ ಸಿ ಆರ್ ವಿತರಣೆ ಸಂಬಂಧ ಸಾರ್ವಜನಿಕರಿಂದ ಕುಂದು ಕೊರತೆ ಆಲಿಸಿದ ನಂತರ ಮೈಸೂರು ನಗರ ಪಾಲಿಕೆಯ…

11 hours ago