ದೇಶ- ವಿದೇಶ

ಮನ್‌ ಕಿ ಬಾತ್‌: ರಾಜ್ಯ ಸೈಬರ್‌ ಕ್ರೈಂ ವಂಚನೆ ಪ್ರಕರಣ ಉಲ್ಲೇಖಿಸಿ ಪ್ರಧಾನಿ ಮೋದಿ ಜಾಗೃತಿ

ನವದೆಹಲಿ: ಸತತ ಮೂರನೇ ಬಾರಿಗೆ ಪ್ರಧಾನಿಯಾಗಿರುವ ನರೇಂದ್ರ ಮೋದಿ ಅವರು ರೇಡಿಯೋ ಕಾರ್ಯಕ್ರಮದ ಮನ್‌ ಕಿ ಬಾತ್‌ನ 115ರ ಸಂಚಿಕೆಯಲ್ಲಿ ಸೈಬ್ರರ್‌ ಕ್ರೈಂ ವಂಚನೆ, ಡಿಜಿಟಲ್‌ ಆರೆಸ್ಟ್‌ ಇನ್ನಿತರ ನೆಪದಲ್ಲಿ ಬರುವ ಕರೆಗಳಿಂದ ದೂರವಿರಿ ಎಂದು ಕರ್ನಾಟಕದ ಪ್ರಕರಣವನ್ನು ಉಲ್ಲೇಖಿಸಿ ಮಾತನಾಡಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಮನ್‌ ಕಿ ಬಾತ್‌ನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಇತ್ತೀಚೆಗೆ ದೇಶದಲ್ಲಿ ಸೈಬರ್‌ ಕ್ರೈಂ ವಂಚನೆ ಹೆಚ್ಚಾಗಿದೆ. ಡಿಜಿಟಲ್‌ ಆರೆಸ್ಟ್‌, ವಿಡಿಯೋ ಕಾಲ್‌, ಸಿಐಡಿ, ಇಡಿ ಹಾಗೂ ಪೊಲೀಸ್‌ ತನಿಖೆ ನೆಪದಲ್ಲಿ ಸಾರ್ವಜನಿಕರಿಗೆ ಪದೇ ಪದೇ ಕರೆಗಳು ಬರುತ್ತಿವೆ. ಈ ಬಗ್ಗೆ ಸಾರ್ವಜನಿಕರು ಎಚ್ಚರದಿಂದ ಇರಬೇಕು ಎಂದು ಸಲಹೆ ನೀಡಿದರು.

ಕರ್ನಾಟಕದ ಪ್ರಕರಣವನ್ನು ಉಲ್ಲೇಖಿಸಿ ಮಾತನಾಡಿದ ಅವರು, ನಿಮ್ಮ ಬಗ್ಗೆ ಮಾಹಿತಿಯನ್ನು ಕಲೆ ಹಾಕುವ ನೆಪದಲ್ಲಿ ಭಯದ ವಾತಾವರಣ ಸೃಷ್ಠಿಸಿ ನಿಮ್ಮನ್ನು ಹೆದರಿಸುತ್ತಿದ್ದಾರೆ. ಅಲ್ಲದೇ, ಸಮಯದ ಒತ್ತಡ ಹೇರಿ ಬಂಧನದ ಆತಂಕ ನಿರ್ಮಿಸುತ್ತಿದ್ದಾರೆ ಎಂದು ಕಳವಳ ವ್ಯಕ್ತಪಡಿಸಿದರು.

ಡಿಜಿಟಲ್‌ ಅರೆಸ್ಟ್‌ ವಂಚನೆಗೆ ಎಲ್ಲಾ ವಯಸ್ಸಿನ ಜನರನ್ನು ಬಳಸುತ್ತಿದ್ದು, ತಮ್ಮ ದುಡಿಮೆಯ ಹಣವನ್ನು ಕಳೆದುಕೊಳ್ಳುವಂತೆ ಮಾಡುತ್ತಿದ್ದಾರೆ. ಹೀಗಾಗಿ ಅಂತಹ ಕರೆ ಬಂದರೆ ಆತಂಕಗೊಳ್ಳಬೇಡಿ. ಕರೆ ಮಾಡಿದವರಿಗೆ ನಿಮ್ಮ ಬಗ್ಗೆ ಯಾವುದೇ ಮಾಹಿತಿಯನ್ನು ನೀಡಬೇಡಿ. ಅದರ ಬದಲಾಗಿ ವಿಡಿಯೋ ರೆಕಾರ್ಡ್‌ ಮಾಡಿಟ್ಟುಕೊಳ್ಳಿ. ಸರ್ಕಾರಿ ತನಿಖಾ ಸಂಸ್ಥೆಗಳು ಯಾವುದೇ ಕಾರಣಕ್ಕೂ ವಿಡಿಯೋ ಕಾಲ್‌ ಮಾಡಿ ಬೆದರಿಕೆ ಹಾಕುವುದಿಲ್ಲ. ಹೀಗಾಗಿ ಇಂತಹ ಘಟನೆ ನಡೆದರೆ ರಾಷ್ಟ್ರೀಯ ಸೈಬರ್‌ ಕ್ರೈಂಗೆ ದೂರು ಸಲ್ಲಿಸಿ. ಅಲ್ಲದೇ, ಡಿಜಿಟಲ್‌ ಆರೆಸ್ಟ್‌ ಎಂಬುದು ಕಾನೂನು ವ್ಯವಸ್ಥೆಯಲ್ಲಿ ಇಲ್ಲವೇ ಇಲ್ಲ. ರಾಜ್ಯ ಸರ್ಕಾರದ ಜೊತೆಗೆ ಕೇಂದ್ರ ಸಂಸ್ಥೆಗಳು ತನಿಖೆ ನಡೆಸುತ್ತಿವೆ. ಆ ಕಾರಣಕ್ಕೆ ಕರೆ ಮಾಡುವವರ ವಿರುದ್ಧ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಜೊತೆಗೆ ಅವರ ಸಿಮ್‌ ಅನ್ನು ಕೂಡ ಬಂದ್‌ ಮಾಡಲಾಗುತ್ತಿದೆ ಎಂದು ಎಚ್ಚರಿಕೆ ನೀಡಿದರು.

 

ಆಂದೋಲನ ಡೆಸ್ಕ್

Recent Posts

ಇಂದು ಪೋಲೀಯೋ ಲಸಿಕಾ ಅಭಿಯಾನ

ನವೀನ್ ಡಿಸೋಜ ೧,೯೪೬ ಲಸಿಕೆದಾರರು, ೮೫ ಮೇಲ್ವಿಚಾರಕರು ೯೭೩ ಮನೆ ಭೇಟಿ ನೀಡುವ ತಂಡ ರಚನೆ ಪ್ರವಾಸಿಗರು, ವಲಸೆ ಕಾರ್ಮಿಕರ…

2 hours ago

ಮರುಳಯ್ಯನ ಕೊಪ್ಪಲು ಕೊಂತನಾಯಕರಿಗೆ ಬೇಡರ ಕಣ್ಣಪ್ಪನೇ ದೇವರು

ಸೂರ್ಯಪುತ್ರ ಯಾರಾದ್ರೂ ಮತ್ತೆ ಮತ್ತೆ ಸಿಗ್ತಾನೆ ಇದ್ರೆ ‘ಭೂಮಿ ದುಂಡಗಿದೆ, ಅದ್ಕೆ ಮತ್ತೆ ಮತ್ತೆ ಎದುರುಬದುರಾಗೋದು’ ಅನ್ನೋ ಮಾತು ಕೇಳಿರ್ತೇವೆ.…

2 hours ago

ಮೈಸೂರಲ್ಲಿ ಎಸ್.ಎಲ್. ಭೈರಪ್ಪನವರ ಸ್ಮಾರಕ ಹೇಗಿರಬೇಕು?

ತೀರಿಹೋದ ಕನ್ನಡದ ಹಿರಿಯ ಸಾಹಿತಿ ಡಾ.ಎಸ್.ಎಲ್.ಭೈರಪ್ಪನವರಿಗೆ ಮೈಸೂರಿನಲ್ಲಿ ಸ್ಮಾರಕ ನಿರ್ಮಿಸಲಾಗುವುದು ಎಂದು ರಾಜ್ಯದ ಮುಖ್ಯಮಂತ್ರಿಗಳು ಘೋಷಿಸಿದ್ದಾರೆ. ಈ ಉದ್ದೇಶಿತ ಸ್ಮಾರಕದ…

2 hours ago

ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರು ಬದಲಾವಣೆ : ಸಂಸದ ಯದುವೀರ್‌

ಮೈಸೂರು : ಆಧುನಿಕ ಕಾಲಕ್ಕೆ ತಕ್ಕಂತೆ ಮನ್ರೇಗಾ ಹೆಸರನ್ನು ಕೇಂದ್ರ ಸರ್ಕಾರ ಬದಲಾಯಿಸಿದೆ. ಆದರೆ, ಕಾಂಗ್ರೆಸ್ ಮಾಡುತ್ತಿರುವ ಆರೋಪಕ್ಕೆ ಯಾವ…

11 hours ago

ತಂತ್ರಜ್ಞಾನ ಅಳವಡಿಸಿಕೊಂಡು ಉತ್ತಮ ಇಳುವರಿ ಜೊತೆಗೆ ಹೆಚ್ಚಿನ ಆದಾಯ ಪಡೆಯರಿ : ರೈತರಿಗೆ ಸಿಎಂ ಕರೆ

ಬೆಳಗಾವಿ : ರಾಜ್ಯ ಸರ್ಕಾರ ರೈತ ಪರ ಸರಕಾರವಾಗಿದ್ದು, ಕಬ್ಬು ಬೆಳೆಯುವ ಪ್ರದೇಶದಲ್ಲಿ ಮಣ್ಣಿನ ಆರೋಗ್ಯ ಮತ್ತು ನೀರಿನ ಸಮಗ್ರ…

12 hours ago