ಆಂಧ್ರಪ್ರದೇಶ: ವಿಶಾಖಪಟ್ಟಣಂನ ಸಮುದ್ರ ತೀರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಂದು 3 ಲಕ್ಷ ಜನರೊಂದಿಗೆ ಯೋಗ ಮಾಡುವ ಮೂಲಕ ಹೊಸ ದಾಖಲೆ ಮಾಡಿದ್ದಾರೆ.
ಒಂದು ಭೂಮಿಗಾಗಿ, ಒಂದು ಆರೋಗ್ಯಕ್ಕಾಗಿ ಯೋಗ ಎಂಬ ಘೋಷ ವಾಕ್ಯದಡಿ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಹಮ್ಮಿಕೊಳ್ಳಲಾಗಿತ್ತು.
ವಿಶಾಖಪಟ್ಟಣಂನಲ್ಲಿ ನಡೆದ 11ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು 3 ಲಕ್ಷ ಜನರೊಂದಿಗೆ ಯೋಗ ಮಾಡಿದರು. 25,000 ವಿದ್ಯಾರ್ಥಿಗಳು 108 ನಿಮಿಷ ಸೂರ್ಯ ನಮಸ್ಕಾರ ಮಾಡುವ ಮೂಲಕ ಎಲ್ಲರ ಗಮನ ಸೆಳೆದರು. ಕಾರ್ಯಕ್ರಮದಲ್ಲಿ ಸಿಎಂ ಚಂದ್ರಬಾಬು ನಾಯ್ಡು, ಡಿಸಿಎಂ ಪವನ್ ಕಲ್ಯಾಣ್ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಸರ್ವೇ ಭವಂತು ಸುಖಿನಃ. ನಾವು ಈ ಚಿಂತನೆಯಿಂದ ಬದುಕಬೇಕು. ಏಕೆಂದರೆ ಇದು ಶಾಂತಿಯುತ ಸಮಾಜಕ್ಕೆ ಕಾರಣವಾಗುತ್ತದೆ. ದುರದೃಷ್ಟವಶಾಥತ್ ಇಂದು ಜಗತ್ತು ವ್ಯಾಪಕ ಹಿಂಸೆ ಹಾಗೂ ಅಶಾಂತಿಗೆ ಸಾಕ್ಷಿಯಾಗುತ್ತಿದೆ. ಯೋಗವು ಮಾನವೀಯತೆಯು ಉಸಿರಾಡಲು, ಸಮತೋಲನವನ್ನು ಕಂಡುಕೊಳ್ಳಲು ಮತ್ತು ಶಾಂತತೆಯನ್ನು ಮರಳಿ ಪಡೆಯಲು ಯೋಗ ಅಗತ್ಯವಾಗಿದೆ ಎಂದು ಹೇಳಿದರು.
ಇನ್ನು ಯೋಗ ಕಾರ್ಯಕ್ರಮಕ್ಕೆ ಭಾರೀ ಭದ್ರತಾ ವ್ಯವಸ್ಥೆಯನ್ನು ಮಾಡಲಾಗಿತ್ತು. 10,000ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಇಡೀ ಮಾರ್ಗದುದ್ದಕ್ಕೂ 1200 ಸಿಸಿ ಕ್ಯಾಮರಾಗಳು ಮತ್ತು ಡ್ರೋನ್ ಮೂಲಕ ಕಣ್ಗಾವಲಿನಲ್ಲಿಡಲಾಗಿತ್ತು.
ಬೆಂಗಳೂರು : ತಾಂತ್ರಿಕ ದೋಷ ಹಾಗೂ ಸರ್ವರ್ ಮಂದಗತಿಯ ಕಾರಣದಿಂದ ನ್ಯಾಯಬೆಲೆ ಅಂಗಡಿಗಳಲ್ಲಿ ಇ-ಕೆವೈಸಿ ಮಾಡಿಸಲು ಬಿಪಿಎಲ್, ಎಪಿಎಲ್ ಪಡಿತರದಾರರಿಗೆ…
ಬಾಲಸುಬ್ರಹ್ಮಣ್ಯ ಕಂಜರ್ಪಣೆ ನಮ್ಮೂರಿನಲ್ಲಿ ಒಬ್ರು ಬಹಳ ಒಳ್ಳೆಯ ಮನುಷ್ಯ ಇದ್ರು. ಅವರು ಕುಡೀತಿರ್ಲಿಲ್ಲ. ಅವರಿಗೆ ಒಂದಿಬ್ಬರು ಗೆಳೆಯರು ಸೇರಿ ಕುಡಿಯೋದನ್ನು…
ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಮುಂಬರುವ ಕೆಲವೇ ದಿನಗಳಲ್ಲಿ ನಡೆಯುವ ನಾಡ ಹಬ್ಬ ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರನ್ನು ಆಕರ್ಷಿಸುವ ಸಲುವಾಗಿ,…
ಕಾರ್ಮಿಕರು ಅಥವಾ ವಿಶಾಲಾರ್ಥದಲ್ಲಿ ದುಡಿಯುವ ವರ್ಗಗಳು ತಮ್ಮ ಜೀವನಾವಶ್ಯ-ವೃತ್ತಿಕೇಂದ್ರಿತ ಅವಶ್ಯಕತೆಗಳನ್ನು ಈಡೇರಿಸಿಕೊಳ್ಳಲು ಉದ್ಯೋಗದಾತರ ವಿರುದ್ಧ ಮುಷ್ಕರ ಹೂಡುವುದು ಚಾರಿತ್ರಿಕವಾಗಿ ನಡೆದುಬಂದಿರುವಂತಹ…
ಅತ್ಯುತ್ತಮ ನಟನೆಗೆ ರಾಷ್ಟ್ರಪ್ರಶಸ್ತಿ ಪಡೆಯುವ ಚಿತ್ರಗಳಿದ್ದರೂ, ಆಯಾ ವರ್ಷದಲ್ಲಿನ ಸ್ಪರ್ಧೆಯ ಕಾರಣವೋ ಇನ್ನೇನೋ, ಅನಂತನಾಗ್ ಅವರಿಗೆ ಈ ತನಕ ಆ…