Mysore
27
scattered clouds
Light
Dark

ವಿದೇಶ ಪ್ರವಾಸ ಮುಗಿಸಿ ಭಾರತಕ್ಕೆ ವಾಪಸ್‌ ಆದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ಪೋಲೆಂಡ್‌ ಹಾಗೂ ಉಕ್ರೇನ್‌ ಪ್ರವಾಸ ಮುಗಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತಕ್ಕೆ ವಾಪಸ್‌ ಆಗಿದ್ದಾರೆ.

2 ದಿನಗಳ ಉಕ್ರೇನ್‌ ಮತ್ತು ಪೋಲೆಂಡ್‌ ಪ್ರವಾಸವನ್ನು ಯಶಸ್ವಿಯಾಗಿ ಮುಗಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಇಂದು ಮಧ್ಯಾಹ್ನ ದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ಬಂದಿಳಿದರು.

ಭಾರತದ ಪ್ರಧಾನಿಯೊಬ್ಬರು 45 ‌ವರ್ಷಗಳ ಬಳಿಕ ಪೋಲೆಂಡ್‌ಗೆ ನೀಡಿದ ಭೇಟಿ ಇದಾಗಿತ್ತು.

ಪ್ರಧಾನಿ ನರೇಂದ್ರ ಮೋದಿ ಅವರು, ಉಕ್ರೇನ್‌ಗೆ ಭೇಟಿ ನೀಡಿ ವೊಲೊಡಿಮಿರ್‌ ಝಲೆನ್ಸ್ಕಿ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು. ದ್ವಿಪಕ್ಷೀಯ ವಿಚಾರದ ಕುರಿತು ಚರ್ಚೆ ನಡೆಸಿದ ಅವರು, ಸಮುದಾಯ ಅಭಿವೃದ್ಧಿ ಯೋಜನೆಗಳು, ಔಷಧ ನಿಯಂತ್ರಣ ಮಾನದಂಡಗಳು, ಸಾಂಸ್ಕೃತಿಕ ವಿನಿಮಯ ಮತ್ತು ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಂಬಂಧಗಳನ್ನು ಹೆಚ್ಚಿಸಲು ನಾಲ್ಕು ತಿಳುವಳಿಕಾ ಒಪ್ಪಂದಗಳಿಗೆ ಸಹಿ ಹಾಕಿದರು.

ಇನ್ನು ನಾಗರಿಕರಿಬ್ಬರು ಜಾಗತಿಕ ವಿಷಯಗಳ ಬಗ್ಗೆ ಕುರಿತು ಮಾತನಾಡಿ, ಉಕ್ರೇನ್‌ ಮತ್ತು ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷಗಳು ಸೇರಿದಂತೆ ಹಿತಾಸಕ್ತಿಯನ್ನು ಪರಸ್ಪರ ವಿನಿಮಯ ಮಾಡಿಕೊಂಡರು.

ಉಕ್ರೇನ್‌ ಮತ್ತು ರಷ್ಯಾ ನಡುವಿನ ಯುದ್ಧ ಕೊನೆಗೊಳಿಸುವ ಪ್ರಯತ್ನದಲ್ಲಿ ಭಾರತವು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಉಕ್ರೇನ್‌ ಅಧ್ಯಕ್ಷ ವೊಲೊಡಿಮಿರ್‌ ಝಲೆನ್ಸ್ಕಿ ಹೇಳಿದ್ದಾರೆ. ಇನ್ನು ಕೀವ್‌ನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಝಲೆನ್ಸ್ಕಿಯವರಿಗೆ ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನ ನೀಡಿದರು.