ನವದೆಹಲಿ: ಪೋಲೆಂಡ್ ಹಾಗೂ ಉಕ್ರೇನ್ ಪ್ರವಾಸ ಮುಗಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಭಾರತಕ್ಕೆ ವಾಪಸ್ ಆಗಿದ್ದಾರೆ.
2 ದಿನಗಳ ಉಕ್ರೇನ್ ಮತ್ತು ಪೋಲೆಂಡ್ ಪ್ರವಾಸವನ್ನು ಯಶಸ್ವಿಯಾಗಿ ಮುಗಿಸಿದ ಪ್ರಧಾನಿ ನರೇಂದ್ರ ಮೋದಿ ಅವರು, ಇಂದು ಮಧ್ಯಾಹ್ನ ದೆಹಲಿಯ ಪಾಲಂ ವಿಮಾನ ನಿಲ್ದಾಣಕ್ಕೆ ಬಂದಿಳಿದರು.
ಭಾರತದ ಪ್ರಧಾನಿಯೊಬ್ಬರು 45 ವರ್ಷಗಳ ಬಳಿಕ ಪೋಲೆಂಡ್‌ಗೆ ನೀಡಿದ ಭೇಟಿ ಇದಾಗಿತ್ತು.
ಪ್ರಧಾನಿ ನರೇಂದ್ರ ಮೋದಿ ಅವರು, ಉಕ್ರೇನ್‌ಗೆ ಭೇಟಿ ನೀಡಿ ವೊಲೊಡಿಮಿರ್ ಝಲೆನ್ಸ್ಕಿ ಅವರನ್ನು ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದರು. ದ್ವಿಪಕ್ಷೀಯ ವಿಚಾರದ ಕುರಿತು ಚರ್ಚೆ ನಡೆಸಿದ ಅವರು, ಸಮುದಾಯ ಅಭಿವೃದ್ಧಿ ಯೋಜನೆಗಳು, ಔಷಧ ನಿಯಂತ್ರಣ ಮಾನದಂಡಗಳು, ಸಾಂಸ್ಕೃತಿಕ ವಿನಿಮಯ ಮತ್ತು ಕೃಷಿ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಂಬಂಧಗಳನ್ನು ಹೆಚ್ಚಿಸಲು ನಾಲ್ಕು ತಿಳುವಳಿಕಾ ಒಪ್ಪಂದಗಳಿಗೆ ಸಹಿ ಹಾಕಿದರು.
ಇನ್ನು ನಾಗರಿಕರಿಬ್ಬರು ಜಾಗತಿಕ ವಿಷಯಗಳ ಬಗ್ಗೆ ಕುರಿತು ಮಾತನಾಡಿ, ಉಕ್ರೇನ್ ಮತ್ತು ಪಶ್ಚಿಮ ಏಷ್ಯಾದಲ್ಲಿನ ಸಂಘರ್ಷಗಳು ಸೇರಿದಂತೆ ಹಿತಾಸಕ್ತಿಯನ್ನು ಪರಸ್ಪರ ವಿನಿಮಯ ಮಾಡಿಕೊಂಡರು.
ಉಕ್ರೇನ್ ಮತ್ತು ರಷ್ಯಾ ನಡುವಿನ ಯುದ್ಧ ಕೊನೆಗೊಳಿಸುವ ಪ್ರಯತ್ನದಲ್ಲಿ ಭಾರತವು ಪ್ರಮುಖ ಪಾತ್ರ ವಹಿಸುತ್ತದೆ ಎಂದು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝಲೆನ್ಸ್ಕಿ ಹೇಳಿದ್ದಾರೆ. ಇನ್ನು ಕೀವ್‌ನಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಝಲೆನ್ಸ್ಕಿಯವರಿಗೆ ಭಾರತಕ್ಕೆ ಭೇಟಿ ನೀಡುವಂತೆ ಆಹ್ವಾನ ನೀಡಿದರು.
ಭೇರ್ಯ: ಸಂಜೆ ನಂತರ ನಿಲ್ದಾಣದೊಳಗೆ ಬಾರದ ಬಸ್‌ಗಳು; ಕುಡಿಯುವ ನೀರು, ಪಾರ್ಕಿಂಗ್ ವ್ಯವಸ್ಥೆ ಇಲ್ಲ ಭೇರ್ಯ ಮಹೇಶ್ ಭೇರ್ಯ: ಗ್ರಾಮದ…
ಕೀರ್ತಿ ಇದನ್ನು ನೀವು ಊಹಿಸಲೂ ಸಾಧ್ಯವಿಲ್ಲ. ಚಹ ಮಾಡಿದ ನಂತರ ಉಳಿದ ಜೊಗಟು, ಈರುಳ್ಳಿ ಸಿಪ್ಪೆ, ಚಿಂದಿ ಬಟ್ಟೆ, ಹರಿದ…
ಅಮೆರಿಕದ ಸಿಯಾಟಲ್‌ನಲ್ಲಿ ಮಗನಿಗೆ ಹೊಸ ಕೆಲಸ ಸಿಕ್ಕಿತ್ತು. ಮನೆ ಮಾಡಿದ. ಅಲ್ಲಿ ಮನೆ ಶಿಫ್ಟ್ ಮಾಡುವುದೆಂದರೆ ನಾವೇ ಸಕಲವೂ ಆಗಿರುವುದರಿಂದ…
ಮುಂಚೆ ಕಾಲವೊಂದಿತ್ತು. ಸಮಯ ಕಳೆಯಲು ಎಲ್ಲರೂ ಪುಸ್ತಕದ ಮೊರೆ ಹೋಗು ತ್ತಿದ್ದರು. ಮನೆ ಹತ್ತಿರದ ಪುಸ್ತಕ ದಂಗಡಿ, ಗ್ರಂಥಾಲಯ, ಸ್ನೇಹಿತರ…
ತೃತೀಯ ಲಿಂಗಿಯೊಬ್ಬರು ವಿಜಯನಗರದ ಶ್ರೀ ಕೃಷ್ಣದೇವರಾಯ ವಿಶ್ವವಿದ್ಯಾನಿಲಯಕ್ಕೆ ಕನ್ನಡ ಸಹಾಯಕ ಪ್ರಾಧ್ಯಾಪಕಿ ಯಾಗಿ ಆಯ್ಕೆಯಾಗಿರುವುದು ರಾಜ್ಯದ ಇತಿಹಾಸ ದಲ್ಲೇ ಮೊದಲಾಗಿದ್ದು,…
ಒಂದೆಡೆ ತಂಪಿನ ವಾತಾವರಣ : ಮತ್ತೊಂದೆಡೆ ಕಿರಿಕಿರಿ ಉಂಟುಮಾಡುವ ಕೆಸರುಮಯ ತಾಣ ಜಿ. ತಂಗಂ ಗೋಪಿನಾಥಂ ಮಂಡ್ಯ: ಕಳೆದ ಎರಡು…