Prime Minister Narendra Modi returns to India after five-nation tour
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಐದು ದೇಶಗಳ ಪ್ರವಾಸ ಮುಗಿಸಿ ಭಾರತಕ್ಕೆ ಮರಳಿದ್ದಾರೆ.
ಇಂದು ಬೆಳಿಗ್ಗೆ ಪಾಲಂ ವಿಮಾನ ನಿಲ್ದಾಣಕ್ಕೆ ಪ್ರಧಾನಿ ನರೇಂದ್ರ ಮೋದಿ ಬಂದಿಳಿದಿದ್ದು, ಎಂಟು ದಿನಗಳ ಪ್ರವಾಸದಲ್ಲಿ ಘಾನಾ, ಟ್ರನಿಡಾಡ್ ಮತ್ತು ಟೊಬೆಗೊ, ಅರ್ಜೆಂಟೀನಾ, ಬ್ರೆಜಿಲ್ ಮತ್ತು ನಮೀಬಿಯಾ ಸೇರಿದಂತೆ ಐದು ದೇಶಗಳಿಗೆ ಭೇಟಿ ನೀಡಿದ್ದರು.
ಪ್ರಧಾನಿ ಮೋದಿ ಅವರಿಗೆ ಘಾನಾದ ಅತ್ಯುನ್ನತ ನಾಗರಿಕ ದಿ ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಆಫ್ ಘಾನಾ ನೀಡಿ ಗೌರವಿಸಲಾಗಿತ್ತು.
ಟೊಬೆಗೊ ಅಧ್ಯಕ್ಷ ಕ್ರಿಸ್ಟೀನ್ ಕಂಗಲೂ ಅವರು ಮೋದಿಗೆ ಟ್ರಿನಿಡಾಡ್ ಮತ್ತು ಟೊಬೆಗೊದ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ದಿ ಆರ್ಡರ್ ಆಫ್ ದಿ ರಿಪಬ್ಲಿಕ್ ಆಫ್ ಟ್ರಿನಿಡಾಡ್ ಮತ್ತು ಟೊಬೆಗೊ ಅನ್ನು ಪ್ರದಾನ ಮಾಡಿದರು.
ಬಳಿಕ ನಮಿಬಿಯಾಕ್ಕೆ ಭೇಟಿ ನೀಡಿದ್ದ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಅಲ್ಲೂ ಕೂಡ ದೇಶದ ಅತ್ಯುನ್ನತ ನಾಗರಿಕ ಪ್ರಶಸ್ತಿ ಆರ್ಡರ್ ಆಫ್ ದಿ ಮೋಸ್ಟ್ ಏನ್ಷಿಯಂಟ್ ವೆಲ್ವಿಟ್ಟಿಯಾ ಮಿರಾಬಿಲಿಸ್ ನೀಡಿ ಗೌರವಿಸಲಾಯಿತು.
ಇನ್ನು ಬ್ರೆಜಿಲ್ ಭೇಟಿಯ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬ್ರೆಜಿಲ್ ಅಧ್ಯಕ್ಷ ಲೂಯಿಸ್ ಇನಾಸಿಯೊ ಲುಲಾ ಡ ಸಿಲ್ವಾ ಅವರು ದೇಶದ ಅತ್ಯುನ್ನತ ನಾಗರಿಕ ಗೌರವವಾದ ಗ್ರ್ಯಾಂಡ್ ಕಾಲರ್ ಆಫ್ ದಿ ನ್ಯಾಷನಲ್ ಆರ್ಡರ್ ಆಫ್ ದಿ ಸದರ್ನ್ ಕ್ರಾಸ್ ಪ್ರಶಸ್ತಿ ಪ್ರದಾನ ಮಾಡಿದರು.
ಬೆಂಗಳೂರು : ದೆಹಲಿಯಿಂದ ರಾಜಭವನಕ್ಕೆ ಫೋನ್ ಮಾಡಲಾಗಿದೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ್ ಮಾಡಿದ ಆರೋಪವು ವಿಧಾನಸಭೆಯಲ್ಲಿ ಆಡಳಿತ ಮತ್ತು…
ಬೆಂಗಳೂರು: ವೇತನ ಹಿಂಬಾಕಿ ಮತ್ತು ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕೆಎಸ್‌ಆರ್‌ಟಿಸಿ ಸೇರಿದಂತೆ ನಾಲ್ಕು ಸಾರಿಗೆ…
ಬೆಂಗಳೂರು: ಇತ್ತೀಚೆಗೆ ಕಾರು ಅಪಘಾತದಲ್ಲಿ ಮೃತಪಟ್ಟ ಐಎಎಸ್ ಅಧಿಕಾರಿ ದಿ.ಮಹಾಂತೇಶ್ ಬೀಳಗಿ ಅವರ ಪುತ್ರಿಗೆ ಸರ್ಕಾರಿ ಉದ್ಯೋಗ ಲಭಿಸಿದೆ. ಸಿಎಂ…
ಮಂಡ್ಯ: 2026ನೇ ಸಾಲಿನ ಪದ್ಮಶ್ರೀ ಪುರಸ್ಕೃತ ಅಂಕೇಗೌಡರಿಗೆ ಮಂಡ್ಯ ಜಿಲ್ಲಾಡಳಿತದ ಪರವಾಗಿ ಜಿಲ್ಲಾಧಿಕಾರಿ ಡಾ.ಕುಮಾರ ಅವರು ಅಂಕೇಗೌಡ ಅವರನ್ನು ಸನ್ಮಾನಿಸಿ…
ನವದೆಹಲಿ: ಮಹಾರಾಷ್ಟ್ರ ಡಿಸಿಎಂ ಅಜಿತ್ ಪವಾರ್ ಅವರ ಸಾವಿಗೆ ಕಾರಣವಾದ ಬಾರಾಮತಿಯ ಭೀಕರ ವಿಮಾನ ಅಪಘಾತದ ಕುರಿತು ಸುಪ್ರೀಂಕೋರ್ಟ್ ಮೇಲ್ವಿಚಾರಣೆಯಲ್ಲಿ…
ಮಹಾರಾಷ್ಟ್ರ: ಡಿಸಿಎಂ ಅಜಿತ್ ಪವಾದ ಅವರ ಸಾವು ದುರದೃಷ್ಟಕರ. ಅವರ ನಿಧನಕ್ಕೆ ಕಾರಣವಾದ ವಿಮಾನ ದುರಂತದ ಬಗ್ಗೆ ತನಿಖೆ ನಡೆಸಲಾಗುವುದು…