ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರ ಮನೆಗೆ ಹೊಸ ಅತಿಥಿಯ ಆಗಮನವಾಗಿದ್ದು, ಕರುವಿನ ಜೊತೆ ಮೋದಿ ಕಳೆದ ಕ್ಷಣಗಳ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಫುಲ್ ವೈರಲ್ ಆಗಿದೆ.
ಪ್ರಧಾನಿ ನರೇಂದ್ರ ಮೋದಿ ಅವರ ಲೋಕ ಕಲ್ಯಾಣ ಮಾರ್ಗ್ ನಿವಾಸಕ್ಕೆ ಹೊಸ ಅತಿಥಿ ದೀಪಜ್ಯೋತಿ ಎಂಬ ಹೆಸರಿನ ಕರುವೊಂದು ಆಗಮಿಸಿದೆ.
ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಹಾಕಿರುವ ಪ್ರಧಾನಿ ನರೇಂದ್ರ ಮೋದಿ ಅವರು, ನನ್ನ ನಿವಾಸದಲ್ಲಿ ಗೋಮಾತೆ ಕರುವಿಗೆ ಜನ್ಮ ನೀಡಿದ್ದಾಳೆ ಎಂದು ತಿಳಿಸಿದ್ದಾರೆ.
ತಮ್ಮ ನಿವಾಸದಲ್ಲಿ ಕರುವನ್ನು ಮುದ್ದಾಡಿ ಅದರ ಜೊತೆ ಕಾಲ ಕಳೆಯುವ ವಿಡಿಯೋವನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ.
ಪ್ರೀತಿಯ ತಾಯಿ ಹಸು ಹೊಸ ಕರುವಿಗೆ ಜನ್ಮ ನೀಡಿದೆ. ಅರ ಹಣೆಯ ಮೇಲೆ ಬೆಳಕಿನ ಗುರುತು ಇದೆ. ಆದ್ದರಿಂದ ನಾನು ಅದಕ್ಕೆ ದೀಪಜ್ಯೋತಿ ಎಂದು ಹೆಸರಿಟ್ಟಿದ್ದೇನೆ ಎಂದು ಪೋಸ್ಟ್‌ನಲ್ಲಿ ಬರೆದುಕೊಂಡು ಖುಷಿಹಂಚಿಕೊಂಡಿದ್ದಾರೆ.
ಇದರ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರು, ಕರುವನ್ನು ಹೊತ್ತುಕೊಂಡು ಹೋಗುತ್ತಿರುವುದು, ಪೂಜೆ ಮಾಡುವ ವೇಳೆ ಕರುವಿಗೆ ಹೂವಿನ ಹಾರ ಹಾಕುವುದು, ಅದನ್ನು ಎತ್ತಿ ಮುದ್ದಾಡುತ್ತಿರುವುದು, ಕರುವನ್ನು ತೋಟಕ್ಕೆ ತೆಗೆದುಕೊಂಡು ಹೋಗುತ್ತಿರುವ ದೃಶ್ಯದ ಫೋಟೋಗಳನ್ನು ಸಹ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಈ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಾಕುಪ್ರಾಣಿಗಳ ಮೇಲೆ ಎಷ್ಟು ಪ್ರೀತಿಯಿದೆ ಎಂಬುದನ್ನು ಇದು ಸಾರಿ ಸಾರಿ ಹೇಳುತ್ತಿದ್ದು, ಟ್ವೀಟ್‌ನಲ್ಲಿ ಅಭಿಮಾನಿಗಳು ಕಮೆಂಟ್ಸ್ ಮಾಡಿ ಸಂತೋಷ ವ್ಯಕ್ತಪಡಿಸಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್‌ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…