Mysore
24
broken clouds

Social Media

ಸೋಮವಾರ, 27 ಏಪ್ರಿಲ 2026
Light
Dark

ಹೂಗ್ಲಿ ನದಿಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೋಣಿ ವಿಹಾರ

ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮೊದಲ ಹಂತದ ಚುನಾವಣೆ ಮುಗಿದಿದೆ.

ಚುನಾವಣೆ ಮುಗಿಯುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹೂಗ್ಲಿ ನದಿಯಲ್ಲಿ ದೋಣಿ ವಿಹಾರ ನಡೆಸಿದರು.

ಏಪ್ರಿಲ್.‌29ರಂದು ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನ ನಡೆಯಲಿದೆ.

ಇಂದು ಬೆಳಿಗ್ಗೆ ಕೋಲ್ಕತ್ತಾದ ಗಂಗಾ ನದಿಯ ಉಪನದಿಯಾಗಿರುವ ಹೂಗ್ಲಿ ನದಿಯಲ್ಲಿ ಕೈಯಲ್ಲಿ ಕ್ಯಾಮರಾ ಹಿಡಿದು ದೋಣಿ ವಿಹಾರವನ್ನು ಆನಂದಿಸಿದ್ದಾರೆ. ಈ ಫೋಟೋಗಳನ್ನು ಪ್ರಧಾನಿ ಮೋದಿ ಅವರು ತಮ್ಮ ಎಕ್ಸ್‌ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಈ ಬಗ್ಗೆ ಬರೆದುಕೊಂಡಿರುವ ಪ್ರಧಾನಿ ಮೋದಿ ಅವರು, ಪ್ರತಿಯೊಬ್ಬ ಬಂಗಾಳಿಗನಿಗೂ ಗಂಗಾ ನದಿ ಬಹಳ ವಿಶೇಷ ಹಾಗೂ ಪವಿತ್ರವಾದ ಸ್ಥಾನವನ್ನು ಹೊಂದಿದೆ. ಗಂಗಾ ಕೇವಲ ನದಿಯಾಗಿರದೇ ಇಲ್ಲಿನ ಸಂಸ್ಕೃತಿ, ಇತಿಹಾಸ, ಜೀವನಶೈಲಿಯನ್ನು ಎತ್ತಿತೋರಿಸುವ ಬಂಗಾಳದ ಆತ್ಮದ ಮೂಲಕ ಹರಿಯುತ್ತದೆ. ಇಲ್ಲಿನ ನೀರು ನಾಗರಿಕತೆಯ ಚೈತನ್ಯವನ್ನು ಹೊತ್ತೊಯ್ಯುತ್ತದೆ. ಇಂದು ಬೆಳಿಗ್ಗೆ ನಾನು ಕೋಲ್ಕತ್ತಾದ ಹೂಗ್ಲಿ ನದಿಯ ದಡದಲ್ಲಿ ಸ್ವಲ್ಪ ಸಮಯ ಕಳೆದು, ಗಂಗಾ ಮಾತೆಗೆ ಕೃತಜ್ಞತೆ ಸಲ್ಲಿಸಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.

 

 

Tags:
error: Content is protected !!