ಕೋಲ್ಕತ್ತಾ: ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಯ ಮೊದಲ ಹಂತದ ಚುನಾವಣೆ ಮುಗಿದಿದೆ.
ಚುನಾವಣೆ ಮುಗಿಯುತ್ತಿದ್ದಂತೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಹೂಗ್ಲಿ ನದಿಯಲ್ಲಿ ದೋಣಿ ವಿಹಾರ ನಡೆಸಿದರು.
ಏಪ್ರಿಲ್.29ರಂದು ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನ ನಡೆಯಲಿದೆ.
ಇಂದು ಬೆಳಿಗ್ಗೆ ಕೋಲ್ಕತ್ತಾದ ಗಂಗಾ ನದಿಯ ಉಪನದಿಯಾಗಿರುವ ಹೂಗ್ಲಿ ನದಿಯಲ್ಲಿ ಕೈಯಲ್ಲಿ ಕ್ಯಾಮರಾ ಹಿಡಿದು ದೋಣಿ ವಿಹಾರವನ್ನು ಆನಂದಿಸಿದ್ದಾರೆ. ಈ ಫೋಟೋಗಳನ್ನು ಪ್ರಧಾನಿ ಮೋದಿ ಅವರು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಈ ಬಗ್ಗೆ ಬರೆದುಕೊಂಡಿರುವ ಪ್ರಧಾನಿ ಮೋದಿ ಅವರು, ಪ್ರತಿಯೊಬ್ಬ ಬಂಗಾಳಿಗನಿಗೂ ಗಂಗಾ ನದಿ ಬಹಳ ವಿಶೇಷ ಹಾಗೂ ಪವಿತ್ರವಾದ ಸ್ಥಾನವನ್ನು ಹೊಂದಿದೆ. ಗಂಗಾ ಕೇವಲ ನದಿಯಾಗಿರದೇ ಇಲ್ಲಿನ ಸಂಸ್ಕೃತಿ, ಇತಿಹಾಸ, ಜೀವನಶೈಲಿಯನ್ನು ಎತ್ತಿತೋರಿಸುವ ಬಂಗಾಳದ ಆತ್ಮದ ಮೂಲಕ ಹರಿಯುತ್ತದೆ. ಇಲ್ಲಿನ ನೀರು ನಾಗರಿಕತೆಯ ಚೈತನ್ಯವನ್ನು ಹೊತ್ತೊಯ್ಯುತ್ತದೆ. ಇಂದು ಬೆಳಿಗ್ಗೆ ನಾನು ಕೋಲ್ಕತ್ತಾದ ಹೂಗ್ಲಿ ನದಿಯ ದಡದಲ್ಲಿ ಸ್ವಲ್ಪ ಸಮಯ ಕಳೆದು, ಗಂಗಾ ಮಾತೆಗೆ ಕೃತಜ್ಞತೆ ಸಲ್ಲಿಸಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…
ಹನೂರು: ಸೋಮವಾರ ತಡರಾತ್ರಿ ಸುರಿದ ಭಾರಿ ಮಳೆಗೆ ಕ್ಷೇತ್ರದ ಹಲವು ಜಮೀನುಗಳಲ್ಲಿ ಬೆಳೆದಿದ್ದ ಬೆಳೆಗಳು ಸಂಪೂರ್ಣ ಜಲಾವೃತಗೊಂಡು ಲಕ್ಷಾಂತರ ರೂಪಾಯಿ…
ಮೈಸೂರು: ಜಿಲ್ಲೆಯ ಹುಣಸೂರು ತಾಲೂಕಿನ ನಂಜಾಪುರ ಗ್ರಾಮದಲ್ಲಿ ಹೃದಯವಿದ್ರಾವಕ ಘಟನೆ ನಡೆದಿದೆ. ರಸ್ತೆ ಬದಿ ನಿಂತಿದ್ದ ಒಂದೂವರೆ ವರ್ಷದ ಪುಟ್ಟ…