Mysore
20
overcast clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಕುವೈತ್‌ ಪ್ರವಾಸದಲ್ಲಿ ಪ್ರಧಾನಿ ಮೋದಿ: ನಾಯಕರೊಂದಿಗೆ ದ್ವಿಪಕ್ಷೀಯ ಮಾತುಕತೆ

ಕುವೈತ್‌: ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕುವೈತ್‌ ಪ್ರವಾಸ ಕೈಗೊಂಡಿದ್ದು, ಅಲ್ಲಿನ ರಾಜ ಶೇಕ್‌ ಮಿಶಾಲ್‌ ಅಲ್‌ ಅಹಮದ್‌ ಜಾಬೇರ್‌ ಅಲ್‌ ಸಬಾ ಅವರೊಂದಿಗೆ ಸುದೀರ್ಘ ಸಮಯ ಮಾತುಕತೆ ನಡೆಸಿದ್ದಾರೆ.

ವಾಣಿಜ್ಯ, ವ್ಯಾಪಾರ, ಹೂಡಿಕೆ, ಇಂಧನ ಕ್ಷೇತ್ರ ಹಾಗೂ ರಕ್ಷಣಾ ವಲಯ ಸೇರಿದಂತೆ ಹಲವು ಕ್ಷೇತ್ರಗಳಲ್ಲಿ ಒಬ್ಬರಿಗೊಬ್ಬರು ಸಹಕಾರ ನೀಡುತ್ತಾ ಎರಡು ದೇಶಗಳ ನಡುವಿನ ಬಾಂಧವ್ಯ ವೃದ್ಧಿ ಕುರಿತು ಚರ್ಚಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕುವೈತ್‌ನ ಯುವರಾಜ ಶೇಕ್‌ ಸಬಾ ಅಲ್‌ ಖಾಲಿದ್‌ ಅಲ್‌ ಸಬಾ ಅವರನ್ನು ಪ್ರಧಾನಿ ನರೇಂದ್ರ ಮೋದಿ ಅವರು ಭೇಟಿಯಾಗಿ ದೇಶದ ಆಂತರಿಕ ಹಾಗೂ ರಕ್ಷಣಾ ವಲಯಕ್ಕೆ ಸಂಬಂಧಿಸಿದಂತೆ ಮಾತುಕತೆ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇಂದು ಕುವೈತ್‌ನಲ್ಲಿರುವ ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ ಅವರು, ಕುವೈತ್‌ನಲ್ಲಿ ಭಾರತೀಯರು ಹೆಚ್ಚಿನ ಜನಸಂಖ್ಯೆಯಲ್ಲಿ ಇದ್ದಾರೆ. ಕುವೈತ್‌ನ ಅಗ್ರ ವ್ಯಾಪಾರ ಪಾಲುದಾರ ದೇಶಗಳಲ್ಲಿ ಭಾರತವು ಒಂದಾಗಿದೆ ಎಂದರು. ಇದಾದ ನಂತರ ಅಲ್ಲಿರುವ ಕಾರ್ಮಿಕ ಶಿಬಿರಕ್ಕೂ ಭೇಟಿ ನೀಡಿ ಖುಷಿ ಹಂಚಿಕೊಂಡರು.

1981ರಲ್ಲಿ ಅಂದಿನ ಪ್ರಧಾನಿ ಇಂದಿರಾ ಗಾಂಧಿ ಕುವೈತ್‌ಗೆ ಭೇಟಿ ನೀಡಿದ್ದರು. 43 ವರ್ಷದ ಬಳಿಕ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿಯವರು ಕುವೈತ್‌ಗೆ ಭೇಟಿ ನೀಡಿರುವುದು ವಿಶೇಷವೆನಿಸಿದೆ.

 

Tags: