Mysore
23
few clouds

Social Media

ಸೋಮವಾರ, 26 ಜನವರಿ 2026
Light
Dark

ನಾಗ್ಪುರ| ಆರ್‌ಎಸ್‌ಎಸ್‌ ಕಚೇರಿಗೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ

ನಾಗ್ಪುರ: ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಮೊದಲ ಬಾರಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಆರ್‌ಎಸ್‌ಎಸ್‌ ಕಚೇರಿ ಸ್ಮೃತಿ ಮಂದಿರಕ್ಕೆ ಭೇಟಿ ನೀಡಿದರು.

ಈ ವರ್ಷ ಆರ್‌ಎಸ್‌ಎಸ್‌ 100 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ರೇಶಿಮ್‌ ಭಾಗ್‌ನಲ್ಲಿರುವ ಸ್ಮೃತಿ ಮಂದಿರಕ್ಕೆ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದರು.

ಈ ವೇಳೆ ಆರ್‌ಎಸ್‌ಎಸ್‌ ಸ್ಥಾಪಕ ಕೇಶವ ಬಲಿರಾಮ ಹೆಡಗೇವಾರ್‌ ಹಾಗೂ ಎರಡನೇ ಸರಸಂಘ ಸಂಚಾಲಕ ಎಂ.ಎಸ್.ಗೋಲ್ವಾಲ್ಕರ್‌ ಸ್ಮಾರಕಗಳಿಗೆ ಗೌರವ ಸಲ್ಲಿಸಿದರು.

ಈ ವೇಳೆ ಆರ್‌ಎಸ್‌ಎಸ್‌ ಮುಖ್ಯಸ್ಥ ಮೋಹನ್‌ ಭಾಗವತ್‌, ಸಂಘದ ಮಾಜಿ ಪ್ರಧಾನ ಕಾರ್ಯದರ್ಶಿ ಸುರೇಶ್‌ ಭಯ್ಯಾಜಿ, ಮಹಾರಾಷ್ಟ್ರ ಸಿಎಂ ದೇವೇಂದ್ರ ಫಡ್ನವೀಸ್‌, ಕೇಂದ್ರ ಸಚಿವ ನಿತಿನ್‌ ಗಡ್ಕರಿ ಉಪಸ್ಥಿತರಿದ್ದರು.

 

Tags:
error: Content is protected !!