ನವದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿ ಅವರು 75ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ ಹಲವು ಬಿಜೆಪಿ ನಾಯಕರು ಮೋದಿಗೆ ಶುಭಾಶಯ ಕೋರಿದ್ದಾರೆ.
ಪ್ರಧಾನಿ ಮೋದಿಯವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿಂದು ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಪ್ರಹ್ಲಾದ್ ಜೋಶಿ, ಬಿ.ಎಸ್.ಯಡಿಯೂರಪ್ಪ, ವಿಜಯೇಂದ್ರ, ಆರ್.ಅಶೋಕ್ ಸೇರಿದಂತೆ ಹಲವರು ಟ್ವೀಟ್ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು, ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಸಿಗಲಿ ಎಂದು ಬರೆದು ಶುಭ ಹಾರೈಸಿದ್ದಾರೆ.
ಇದನ್ನು ಓದಿ : ಕಲ್ಯಾಣ ಕರ್ನಾಟಕ ಭಾಗದ ಜನತೆಗೆ ಸಿಎಂ ಸಿದ್ದರಾಮಯ್ಯ ಬಂಪರ್ ಗಿಫ್ಟ್
ಇನ್ನು ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದಂದು ಸೂಪರ್ ಸ್ಟಾರ್ ಶಾರುಖ್ ಖಾನ್ ಅವರು ಸಹ ಟ್ವೀಟ್ ಮಾಡಿದ್ದು, 75ನೇ ವಯಸ್ಸಿನಲ್ಲಿ ನಿಮ್ಮ ಶಕ್ತಿಯು ನಮ್ಮಂತಹ ಯುವಕರನ್ನು ಸಹ ಮೀರಿಸುತ್ತದೆ. ನೀವು ಯಾವಾಗಲೂ ಆರೋಗ್ಯವಾಗಿ ಮತ್ತು ಸಂತೋಷವಾಗಿರಬೇಕೆಂದು ನಾನು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.





