ದೇಶ- ವಿದೇಶ

ಪ್ರಧಾನಿ ನರೇಂದ್ರ ಮೋದಿ 75ನೇ ಜನ್ಮದಿನ: ಗಣ್ಯರಿಂದ ಶುಭಾಶಯ

ನವದೆಹಲಿ: ಇಂದು ಪ್ರಧಾನಿ ನರೇಂದ್ರ ಮೋದಿ ಅವರು 75ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಹಲವು ಬಿಜೆಪಿ ನಾಯಕರು ಮೋದಿಗೆ ಶುಭಾಶಯ ಕೋರಿದ್ದಾರೆ.

ಪ್ರಧಾನಿ ಮೋದಿಯವರ ಹುಟ್ಟುಹಬ್ಬದ ಹಿನ್ನೆಲೆಯಲ್ಲಿಂದು ಮಲ್ಲಿಕಾರ್ಜುನ ಖರ್ಗೆ, ರಾಹುಲ್‌ ಗಾಂಧಿ, ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ, ಪ್ರಹ್ಲಾದ್‌ ಜೋಶಿ, ಬಿ.ಎಸ್.ಯಡಿಯೂರಪ್ಪ, ವಿಜಯೇಂದ್ರ, ಆರ್.‌ಅಶೋಕ್‌ ಸೇರಿದಂತೆ ಹಲವರು ಟ್ವೀಟ್‌ ಮಾಡಿದ್ದು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಹುಟ್ಟುಹಬ್ಬದ ಶುಭಾಶಯಗಳು, ಅವರಿಗೆ ಉತ್ತಮ ಆರೋಗ್ಯ ಮತ್ತು ದೀರ್ಘಾಯುಷ್ಯ ಸಿಗಲಿ ಎಂದು ಬರೆದು ಶುಭ ಹಾರೈಸಿದ್ದಾರೆ.

ಇದನ್ನು ಓದಿ : ಕಲ್ಯಾಣ ಕರ್ನಾಟಕ ಭಾಗದ ಜನತೆಗೆ ಸಿಎಂ ಸಿದ್ದರಾಮಯ್ಯ ಬಂಪರ್‌ ಗಿಫ್ಟ್‌

ಇನ್ನು ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದಂದು ಸೂಪರ್‌ ಸ್ಟಾರ್‌ ಶಾರುಖ್‌ ಖಾನ್‌ ಅವರು ಸಹ ಟ್ವೀಟ್‌ ಮಾಡಿದ್ದು, 75ನೇ ವಯಸ್ಸಿನಲ್ಲಿ ನಿಮ್ಮ ಶಕ್ತಿಯು ನಮ್ಮಂತಹ ಯುವಕರನ್ನು ಸಹ ಮೀರಿಸುತ್ತದೆ. ನೀವು ಯಾವಾಗಲೂ ಆರೋಗ್ಯವಾಗಿ ಮತ್ತು ಸಂತೋಷವಾಗಿರಬೇಕೆಂದು ನಾನು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.

ಆಂದೋಲನ ಡೆಸ್ಕ್

Recent Posts

ಕೊಡಗು: ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ

ಕೊಡಗು: ಜಿಲ್ಲೆಯ ನೆಲ್ಯಹುದಿಕೇರಿ ಸಮೀಪದ ಅತ್ತಿಮಂಗಲದಲ್ಲಿ ಕೆಲಸಕ್ಕೆ ತೆರಳುತ್ತಿದ್ದ ಕಾರ್ಮಿಕರ ಮೇಲೆ ಕಾಡಾನೆ ದಾಳಿ ನಡೆಸಿದೆ. ಸ್ಕೂಟರ್‌ನಲ್ಲಿ ತೆರಳುತ್ತಿದ್ದ 60…

4 hours ago

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

8 hours ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

8 hours ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

8 hours ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

11 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

11 hours ago