ಗಾಂಧಿನಗರ: ನಾಸಿಕ್-ಗುಜರಾತ್ ಹೆದ್ದಾರಿಯಲ್ಲಿ ಖಾಸಗಿ ಬಸ್‌ವೊಂದು ಕಂದಕಕ್ಕೆ ಉರುಳಿದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 15 ಮಂದಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಯೊಬ್ಬರು ಮಾತನಾಡಿ, ಇಂದು(ಫೆಬ್ರವರಿ.2) ಬೆಳಿಗ್ಗೆ ಸುಮಾರು 5.30 ಗಂಟೆಯ ವೇಳೆಗೆ ಈ ಅವಘಡ ಸಂಭವಿಸಿದೆ. ಖಾಸಗಿ ಬಸ್‌ವೊಂದು ನಾಸಿಕ್‌ನಿಂದ ಗುಜರಾತ್‌ಗೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ವೇಳೆ ನಾಸಿಕ್-ಗುಜರಾತ್ ಹೆದ್ದಾರಿಯ ಸಪುತಾರಾ ಘಾಟ್‌ನಲ್ಲಿ 200 ಅಡಿ ಆಳದ ಕಂದಕ್ಕೆ ಉರುಳಿದ್ದು, ಸ್ಥಳದಲ್ಲೇ 7 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ ಹಲವು ಮಂದಿಗೆ ಗಂಭೀರ ಗಾಯಗೊಂಡಿದ್ದಾರೆ ಎಂದು ಹೇಳಿದ್ದಾರೆ.
ಇನ್ನೂ ಈ ಘಟನೆಯ ಪ್ರಾಥಮಿಕ ವರದಿಗಳ ಪ್ರಕಾರ ಮೃತಪಟ್ಟವರು ಮತ್ತು ಗಾಯಗೊಂಡ ಪ್ರಯಾಣಿಕರು ಮಧ್ಯಪ್ರದೇಶದವರು ಎಂಬ ಮಾಹಿತಿ ಲಭ್ಯವಾಗಿದೆ. ಆದಾಗ್ಯೂ ಸದ್ಯ ಗಂಭೀರ ಗಾಯಗೊಂಡಿರುವವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.