ದೇಶ- ವಿದೇಶ

ನಾಸಿಕ್‌-ಗುಜರಾತ್‌ ಹೆದ್ದಾರಿಯಲ್ಲಿ ಕಂದಕಕ್ಕೆ ಉರುಳಿದ ಖಾಸಗಿ ಬಸ್‌: 7 ಮಂದಿ ಸಾವು, 15 ಮಂದಿಗೆ ಗಂಭೀರ ಗಾಯ

ಗಾಂಧಿನಗರ: ನಾಸಿಕ್‌-ಗುಜರಾತ್‌ ಹೆದ್ದಾರಿಯಲ್ಲಿ ಖಾಸಗಿ ಬಸ್‌ವೊಂದು ಕಂದಕಕ್ಕೆ ಉರುಳಿದ ಪರಿಣಾಮ 7 ಮಂದಿ ಸಾವನ್ನಪ್ಪಿದ್ದು, 15 ಮಂದಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ.

ಈ ವಿಚಾರಕ್ಕೆ ಸಂಬಂಧಿಸಿದಂತೆ ಅಧಿಕಾರಿಯೊಬ್ಬರು ಮಾತನಾಡಿ, ಇಂದು(ಫೆಬ್ರವರಿ.2) ಬೆಳಿಗ್ಗೆ ಸುಮಾರು 5.30 ಗಂಟೆಯ ವೇಳೆಗೆ ಈ ಅವಘಡ ಸಂಭವಿಸಿದೆ. ಖಾಸಗಿ ಬಸ್‌ವೊಂದು ನಾಸಿಕ್‌ನಿಂದ ಗುಜರಾತ್‌ಗೆ ಯಾತ್ರಾರ್ಥಿಗಳನ್ನು ಕರೆದೊಯ್ಯುತ್ತಿದ್ದ ವೇಳೆ ನಾಸಿಕ್‌-ಗುಜರಾತ್‌ ಹೆದ್ದಾರಿಯ ಸಪುತಾರಾ ಘಾಟ್‌ನಲ್ಲಿ 200 ಅಡಿ ಆಳದ ಕಂದಕ್ಕೆ ಉರುಳಿದ್ದು, ಸ್ಥಳದಲ್ಲೇ 7 ಮಂದಿ ಸಾವನ್ನಪ್ಪಿದ್ದಾರೆ. ಅಲ್ಲದೇ ಹಲವು ಮಂದಿಗೆ ಗಂಭೀರ ಗಾಯಗೊಂಡಿದ್ದಾರೆ ಎಂದು ಹೇಳಿದ್ದಾರೆ.

ಇನ್ನೂ ಈ ಘಟನೆಯ ಪ್ರಾಥಮಿಕ ವರದಿಗಳ ಪ್ರಕಾರ ಮೃತಪಟ್ಟವರು ಮತ್ತು ಗಾಯಗೊಂಡ ಪ್ರಯಾಣಿಕರು ಮಧ್ಯಪ್ರದೇಶದವರು ಎಂಬ ಮಾಹಿತಿ ಲಭ್ಯವಾಗಿದೆ. ಆದಾಗ್ಯೂ ಸದ್ಯ ಗಂಭೀರ ಗಾಯಗೊಂಡಿರುವವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಾಯಾಳುಗಳು ಚಿಕಿತ್ಸೆ ಪಡೆಯುತ್ತಿದ್ದಾರೆ.

ಅರ್ಚನ ಎಸ್‌ ಎಸ್

Recent Posts

ಮತ್ತೆ ಹುಯ್ಯುತ್ತಿರುವ ಪ್ರತಿಭಟನೆಯ ಸುರಿಮಳೆ

ಕೆ.ನೀಲಾ ಕರುನಾಡ ಹೋರಾಟಗಾರ್ತಿ ಕಾಮ್ರೇಡ್ ನೀಲಾ ನೆನಪುಗಳು ನಾನು ಆಗ ಏಳು ಅಥವಾ ಎಂಟನೇ ತರಗತಿ ಓದುತ್ತಿದ್ದೆ ಎಂದು ನೆನಪು.…

28 mins ago

ಕೆಚ್ಚೆದೆಯ ನೇಹಾ ಮತ್ತು ವಾತ್ಸಲ್ಯದ ಅಮ್ಮ

ಪಾತು ಎಲ್ಲಾ ಭಿನ್ನಾಭಿಪ್ರಾಯಗಳಾಚೆಯೂ ಒಬ್ಬರ ಬದುಕಿನಲ್ಲಿ ಇನ್ನೊಬ್ಬರು ಆಸರೆಯಾಗಬಹುದು ಎನ್ನುವುದಕ್ಕೆ ಸಾಕ್ಷಿಯಾಗಿ ಈ ಘಟನೆ ಹಲವು ಕಾಲ ಜನಮಾನಸದಲ್ಲಿ ನಿಲ್ಲುತ್ತದೆ…

36 mins ago

ಪೆಟ್ರೋಲ್ ಬಂಕ್‌ನಲ್ಲಿ ನಿರ್ಮಾಣವಾದ ಮಿನಿ ಕೆರೆ!

ಮಂಜು ಕೋಟೆ ನೀರಾವರಿ ಇಲಾಖೆ ಅಧಿಕಾರಿಗಳ ಬೇಜವಾಬ್ದಾರಿಯಿಂದ ಅವ್ಯವಸ್ಥೆ ಎಂದು ಸಾರ್ವಜನಿಕರ ಆಕ್ರೋಶ  ಎಚ್.ಡಿ.ಕೋಟೆ: ತಾಲ್ಲೂಕಿನಲ್ಲಿ ಮಳೆ ಇಲ್ಲದೆ ಬರ…

49 mins ago

ಜಿಪಂ, ತಾಪಂ ಕರಡು ಮೀಸಲಾತಿ ಪ್ರಕಟ; ಗರಿಗೆದರಿದ ರಾಜಕೀಯ

ಭೇರ್ಯ ಮಹೇಶ್ ಅವಳಿ ತಾಲ್ಲೂಕುಗಳ ಗ್ರಾಮೀಣ ಭಾಗಗಳಲ್ಲಿ ಚುನಾವಣಾ ಕಾವು ತೀವ್ರ ಕೆ.ಆರ್.ನಗರ: ರಾಜ್ಯ ಸರ್ಕಾರವು ಜಿಪಂ, ತಾಪಂ ಕ್ಷೇತ್ರಗಳ…

56 mins ago

ಈ ಬಾರಿ ಅಂಬಾರಿ ಹೊರುವ ಸಾರಥಿ ಯಾರು.?

ಚಿರಂಜೀವಿ ಸಿ.ಹುಲ್ಲಹಳ್ಳಿ ಮಹೇಂದ್ರ ಆನೆ ಹೊರಬಿದ್ದ ಬಳಿಕ ಸ್ಪರ್ಧೆ ಜೋರು: ಪ್ರಶಾಂತ್‌, ಧನಂಜಯ, ಸುಗ್ರೀವ, ಏಕಲವ್ಯ ನಡುವೆ ಪೈಪೋಟಿ ಭಾನುವಾರ…

1 hour ago

ಇಂದಿನಿಂದ ನಾಲ್ಕು ಶಕ್ತಿ ದೇವತೆಗಳ ಕರಗ ಉತ್ಸವ ಆರಂಭ

ನವೀನ್ ಡಿಸೋಜ ಮಡಿಕೇರಿ ದಸರಾಕ್ಕೆ ಕರಗಗಳೇ ಮುನ್ನುಡಿ ವಿಜಯದಶಮಿವರೆಗೆ ಮನೆಮನೆಗೆ ತೆರಳಿ ಆಶೀರ್ವಚನ ನೀಡುವ ಪರಂಪರೆ ಮಡಿಕೇರಿ: ಐತಿಹಾಸಿಕ ಮಡಿಕೇರಿ…

1 hour ago