ಹೊಸದಿಲ್ಲಿ: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದಲ್ಲಿ ನವೆಂಬರ್ 13 ರಂದು ಉಪ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣೆ ಆಯೋಗ ಬುಧವಾರ ಘೋಷಿಸಿದೆ.
ಇದರ ಬೆನ್ನಲ್ಲೇ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಪ್ರಿಯಾಂಕ ಗಾಂಧಿ ಅವರು ತಮ್ಮ ಚೊಚ್ಚಲ ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದಾರೆ. ಇದಕ್ಕೆ ಚನಾವಣೆ ವೇದಿಕೆಯು ಸಜ್ಜಾಗಿದೆ.
2024ರ ಲೋಕಸಭೆ ಚುನಾವಣೆಯಲ್ಲಿ ಕೇಂದ್ರ ವಿಪಕ್ಷ ನಾಯಕ ರಾಹುಲ್ ಗಾಂಧಿ ಅವರು ರಾಯ್‌ಬರೇಲಿ ಹಾಗೂ ವಯನಾಡ್ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ನಂತರ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಿ ರಾಯ್‌ಬರೇಲಿ ಕ್ಷೇತ್ರವನ್ನು ಮುನ್ನಡೆಸಲು ನಿರ್ಧರಿಸಿದ್ದರು. ಹೀಗಾಗಿ ಕೇರಳದ ವಯನಾಡ್ ಲೋಕಸಭಾ ಕ್ಷೇತ್ರ ಸಂಸದ ಸ್ಥಾನದಿಂದ ತೆರವಾಗಿತ್ತು.
ಕಾಂಗ್ರೆಸ್ ಈಗಾಗಲೇ ವಯನಾಡ್ ಕ್ಷೇತ್ರದಿಂದ ರಾಹುಲ್ ಗಾಂಧಿ ಅವರ ತಂಗಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ ಎಂದು ಘೋಷಿಸಿದೆ. ಇದರೊಂದಿ ಪ್ರಿಯಾಂಕಾ ಗಾಂಧಿ ತಮ್ಮ ಚೊಚ್ಚಲ ಚುನಾವಣೆಗೆ ಸಿದ್ಧತೆ ಆರಂಭಿಸಿದ್ದಾರೆ.
ವಯನಾಡ್ ಉಪ ಚುನಾವಣೆ ಫಲಿತಾಂಶವು ನವೆಂಬರ್ 23ರಂದು ಪ್ರಕಟಗೊಳ್ಳಲಿದೆ.