ದೇಶ- ವಿದೇಶ

ವಯನಾಡ್ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ: ಚುನಾವಣೆಗೆ ವೇದಿಕೆ ಸಜ್ಜು

ಹೊಸದಿಲ್ಲಿ: ಕೇರಳದ ವಯನಾಡ್‌ ಲೋಕಸಭಾ ಕ್ಷೇತ್ರದಲ್ಲಿ ನವೆಂಬರ್‌ 13 ರಂದು ಉಪ ಚುನಾವಣೆ ನಡೆಯಲಿದೆ ಎಂದು ಕೇಂದ್ರ ಚುನಾವಣೆ ಆಯೋಗ ಬುಧವಾರ ಘೋಷಿಸಿದೆ.

ಇದರ ಬೆನ್ನಲ್ಲೇ ವಯನಾಡ್ ಲೋಕಸಭಾ ಕ್ಷೇತ್ರಕ್ಕೆ ಪ್ರಿಯಾಂಕ ಗಾಂಧಿ ಅವರು ತಮ್ಮ ಚೊಚ್ಚಲ ಚುನಾವಣೆಗೆ ಸಿದ್ಧತೆ ನಡೆಸುತ್ತಿದ್ದಾರೆ. ಇದಕ್ಕೆ ಚನಾವಣೆ ವೇದಿಕೆಯು ಸಜ್ಜಾಗಿದೆ.

2024ರ ಲೋಕಸಭೆ ಚುನಾವಣೆಯಲ್ಲಿ ಕೇಂದ್ರ ವಿಪಕ್ಷ ನಾಯಕ ರಾಹುಲ್‌ ಗಾಂಧಿ ಅವರು ರಾಯ್‌ಬರೇಲಿ ಹಾಗೂ ವಯನಾಡ್‌ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ನಂತರ ವಯನಾಡ್‌ ಲೋಕಸಭಾ ಕ್ಷೇತ್ರಕ್ಕೆ ರಾಜೀನಾಮೆ ನೀಡಿ ರಾಯ್‌ಬರೇಲಿ ಕ್ಷೇತ್ರವನ್ನು ಮುನ್ನಡೆಸಲು ನಿರ್ಧರಿಸಿದ್ದರು. ಹೀಗಾಗಿ ಕೇರಳದ ವಯನಾಡ್‌ ಲೋಕಸಭಾ ಕ್ಷೇತ್ರ ಸಂಸದ ಸ್ಥಾನದಿಂದ ತೆರವಾಗಿತ್ತು.

ಕಾಂಗ್ರೆಸ್‌ ಈಗಾಗಲೇ ವಯನಾಡ್‌ ಕ್ಷೇತ್ರದಿಂದ ರಾಹುಲ್‌ ಗಾಂಧಿ ಅವರ ತಂಗಿ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲಿದ್ದಾರೆ ಎಂದು ಘೋಷಿಸಿದೆ. ಇದರೊಂದಿ ಪ್ರಿಯಾಂಕಾ ಗಾಂಧಿ ತಮ್ಮ ಚೊಚ್ಚಲ ಚುನಾವಣೆಗೆ ಸಿದ್ಧತೆ ಆರಂಭಿಸಿದ್ದಾರೆ.

ವಯನಾಡ್‌ ಉಪ ಚುನಾವಣೆ ಫಲಿತಾಂಶವು ನವೆಂಬರ್‌ 23ರಂದು ಪ್ರಕಟಗೊಳ್ಳಲಿದೆ.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಮಾದಕ ವಸ್ತು ಮಾರಾಟ, ಬಳಕೆ ವಿರುದ್ಧ ಕಾರ್ಯಾಚರಣೆ

ನವೀನ್ ಡಿಸೋಜ ೩ ತಿಂಗಳಲ್ಲಿ ೧೩೮ ಎನ್‌ಡಿಪಿಎಸ್ ಪ್ರಕರಣ ದಾಖಲು; ೬ ಕೆ.ಜಿ. ೬೬೪ ಗ್ರಾಂ ಗಾಂಜಾ, ೩೫.೬೬ ಗ್ರಾಂ…

38 mins ago

ಹಾಳಾಗಿ ವರ್ಷಗಳೇ ಕಳೆದರೂ ದುರಸ್ತಿಯಾಗದ ಶುದ್ಧ ನೀರಿನ ಘಟಕಗಳು

ಮಹಾದೇಶ್ ಎಂ.ಗೌಡ ಹನೂರು: ತಾಲ್ಲೂಕಿನ ೨೫ ಗ್ರಾಮ ಪಂಚಾಯಿತಿಗಳ ಪೈಕಿ ೨೧ಗ್ರಾಮ ಪಂಚಾಯಿತಿಗಳ ವ್ಯಾಪ್ತಿಯಲ್ಲಿ ೪೭ ಶುದ್ಧ ಕುಡಿಯುವ ನೀರಿನ…

43 mins ago

ಅವೈಜ್ಞಾನಿಕ ರಸ್ತೆ ಕಾಮಗಾರಿಯಿಂದ ಅಪಘಾತಗಳಿಗೆ ಆಹ್ವಾನ

ಎಸ್.ನಾಗಸುಂದರ್ ರೈತನಿಗೆ ಕೈಮೂಳೆ ಮುರಿತ: ಪಾಂಡವಪುರದಲ್ಲಿ ಅವಗಢ, ಸಾರ್ವಜನಿಕರ ಆಕ್ರೋಶ ಪಾಂಡವಪುರ: ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ಅವೈಜ್ಞಾನಿಕವಾಗಿ ಮತ್ತು…

47 mins ago

ಅರ್ಜುನಹಳ್ಳಿ ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರ

ಎರಡನೇ ಬಾರಿ ಪ್ರಶಸ್ತಿ ಪಡೆದು ಗಮನಸೆಳೆದ ಪಂಚಾಯಿತಿ ಭೇರ್ಯ ಮಹೇಶ್ ಕೆ.ಆರ್.ನಗರ : ತಾಲೂಕಿನ ಅರ್ಜುನಹಳ್ಳಿ ಗ್ರಾಮ ಪಂಚಾಯಿತಿ ಗ್ರಾಮೀಣಾಭಿವೃದ್ಧಿ…

51 mins ago

ಊರ ಜಾತ್ರೆ ಒಂದು ನೆನಪು…

ನಂಜನಗೂಡಿನ ಜಾತ್ರೆ ಅಂದು ಹೇಗಿತ್ತೋ ಇಂದೂ ಹಾಗೆ ತನ್ನ ಆಚರಣೆಯ ಮುಗ್ಧತೆ ಉಳಿಸಿಕೊಂಡಿದೆ  ಡಾ.ಹೆಚ್.ಸಿ.ಮಹದೇವಪ್ಪ, ಸಚಿವರು ನಂಜನಗೂಡಿನಿಂದ ಕೆಲವೇ ಮೈಲಿಗಳ…

56 mins ago

ಯುದ್ಧ: ಕಟ್ಟಡ ನಿರ್ಮಾಣ ವಲಯಕ್ಕೆ ಬೆಲೆ ಏರಿಕೆಯ ಬಿಸಿ

ಚಿರಂಜೀವಿ ಸಿ.ಹುಲ್ಲಹಳ್ಳಿ ಮೈಸೂರು: ಮಧ್ಯಪ್ರಾಚ್ಯ ದೇಶದಲ್ಲಿ ನಡೆಯುತ್ತಿರುವ ಯುದ್ಧದ ಪರಿಣಾಮ ಜನಸಾಮಾನ್ಯರಿಗೆ ನಿತ್ಯ ಒಂದಲ್ಲಾ ಒಂದು ಬಿಸಿ ತಟ್ಟುತ್ತಿದೆ. ಕಟ್ಟಡ…

1 hour ago