Mysore
28
broken clouds

Social Media

ಬುಧವಾರ, 10 ಡಿಸೆಂಬರ್ 2025
Light
Dark

ವಯನಾಡು ಕ್ಷೇತ್ರಕ್ಕೆ ಪರಿಹಾರ ಘೋಷಿಸುವಂತೆ ಕೇಂದ್ರದ ವಿರುದ್ಧ ಪ್ರಿಯಾಂಕಾ ಗಾಂಧಿ ಪ್ರತಿಭಟನೆ

ನವದೆಹಲಿ: ಕೇರಳದ ವಯನಾಡು ಜಿಲ್ಲೆಯಲ್ಲಿ ಭೀಕರ ಭೂಕುಸಿತದಿಂದ ತತ್ತರಿಸಿರುವ ಸಂತ್ರಸ್ಥರಿಗೆ ಕೇಂದ್ರ ಸರ್ಕಾರ ಪರಿಹಾರ ಪ್ಯಾಕೇಜ್‌ ನೀಡುತ್ತಿಲ್ಲ. ಕೇಂದ್ರದಿಂದ ಕೂಡಲೇ ಪರಿಹಾರವನ್ನು ಘೋಷಿಸಬೇಕು ಎಂದು ಸಂಸದೆ ಪ್ರಿಯಾಂಕಾ ಗಾಂಧಿ ಸಂಸತ್‌ ಆವರಣದಲ್ಲಿ ಪ್ರತಿಭಟನೆ ನಡೆಸಿದ್ದಾರೆ.

ನೂತನ ಸಂಸತ್‌ ಆವರಣದಲ್ಲಿ ಇಂದು(ಡಿ.14) ಕೇಂದ್ರ ಸರ್ಕಾರದ ತಾರತಮ್ಮ ನೀತಿಯನ್ನು ಖಂಡಿಸಿ ಕೇರಳ ಸಂಸದರೊಡನೆ ಪ್ರತಿಭಟನೆ ನಡೆಸಿದ್ದಾರೆ. ಈ ವೇಳೆ ತಮ್ಮ ವಯನಾಡು ಕ್ಷೇತ್ರವನ್ನು ಪ್ರತಿನಿಧಿಸಿ, ಕೇಂದ್ರ ಸರ್ಕಾರ ರಾಜಕೀಯ ಮಾಡುತ್ತಿದೆ. ಕೇರಳ ಭಾರತದಲ್ಲಿದ್ದು, ವಯನಾಡು ಕ್ಷೇತ್ರಕ್ಕೆ ನ್ಯಾಯ ದೊರಕಿಸಿ ಎಂದು ಘೋಷಣೆಗಳನ್ನು ಕೂಗಿ ಕೇಂದ್ರ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.

ವಯನಾಡು ಕ್ಷೇತ್ರದಲ್ಲಾದ ಭೀಕರ ಭೂಕುಸಿತವನ್ನು ಇಡೀ ದೇಶವೇ ನೋಡಿದೆ. ಈ ಕ್ಷೆತ್ರಕ್ಕೆ ಸಮವಾಗುವಂತೆ ಹರಿಯಾಣದಲ್ಲೂ ಸಹ ವಿಪತ್ತು ಸಂಭವಿಸಿದೆ. ಹೀಗಿದ್ದರೂ ಕೇಂದ್ರ ಸರ್ಕಾರ ರಾಜಕೀಯ ತಾರತಮ್ಮ ಮಾಡಿ ಈ ಎರಡೂ ಕ್ಷೇತ್ರಗಳಿಗೂ ನೆರವು ನೀಡುತ್ತಿಲ್ಲ. ಅಲ್ಲದೇ ಈಗಾಗಲೇ ನಾವು ಕೇಂದ್ರ ಗೃಹ ಸಚಿವರನ್ನು ಭೇಟಿಯಾಗಿದ್ದು, ಪ್ರಧಾನ ಮಂತ್ರಿಗೂ ಪತ್ರ ಬರೆದಿದ್ದೇವೆ. ನೈಸರ್ಗಿಕ ವಿಪತ್ತು ಎಂದು ಘೋಷಿಸಿ ವಿಶೇಷ ಪ್ಯಾಕೇಜ್‌ ಬಿಡುಗಡೆ ಮಾಡಲು ಸಾಧ್ಯವಿರುವ ಎಲ್ಲಾ ಪ್ರಯತ್ನಗಳನ್ನು ಮಾಡಿದ್ದೇವೆ. ಆದರೆ ಕೇಂದ್ರ ಸರ್ಕಾರದ ವತಿಯಿಂದ ವಯನಾಡಿಗೆ ವಿಶೇಷ ಪ್ಯಾಕೇಜ್‌ ನೀಡಲು ನಿರಾಕರಿಸುತ್ತಿರುವುದು ಅತ್ಯಂತ ಬೇಸರದ ಸಂಗತಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

 

Tags:
error: Content is protected !!