Mysore
25
scattered clouds

Social Media

ಮಂಗಳವಾರ, 03 ಡಿಸೆಂಬರ್ 2024
Light
Dark

ವಯನಾಡು ಕ್ಷೇತ್ರದ ನೂತನ ಸಂಸದೆಯಾಗಿ ಪ್ರಮಾಣ ವಚನ ಸ್ವೀಕರಿಸಿದ ಪ್ರಿಯಾಂಕಾ ಗಾಂಧಿ

ನವದೆಹಲಿ: ಕೇರಳದ ವಯನಾಡು ಲೋಕಸಭಾ ಕ್ಷೇತ್ರದ ನೂತನ ಸಂಸದೆಯಾಗಿ ಲೋಕಸಭೆ ಪ್ರತಿಪಕ್ಷದ ನಾಯಕ ರಾಹುಲ್‌ ಗಾಂಧಿ ಸಹೋದರಿ ಪ್ರಿಯಾಂಕಾ ಗಾಂಧಿ ಅವರಿಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ಕಾಂಗ್ರೆಸ್‌ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಇಂದು ಲೋಕಸಭಾ ಸಂಸದರಾಗಿ ಪ್ರಮಾಣ ವಚನ ಸ್ವೀಕರಿಸಿದರು.

ವಯನಾಡು ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಪ್ರಿಯಾಂಕಾ ಗಾಂಧಿ ಅವರು ಭಾರತೀಯ ಕಮ್ಯುನಿಸ್ಟ್‌ ಪಕ್ಷದ ಸತ್ಯನ್‌ ಮೊಕೇರಿ ಅವರನ್ನು 4,10,931 ಮತಗಳ ಅಂತರದಿಂದ ಸೋಲಿಸಿ ಇತಿಹಾಸ ಬರೆದಿದ್ದರು.

ಕಾಂಗ್ರೆಸ್‌ ಪಕ್ಷದ ಭದ್ರಕೋಟೆಯಾಗಿರುವ ವಯನಾಡು ಕ್ಷೇತ್ರದಲ್ಲಿ ಪ್ರಿಯಾಂಕಾ ಗಾಂಧಿ‌, ಬಿಜೆಪಿಯ ನವ್ಯಾ ಹರಿದಾಸ್ ಮತ್ತು ಭಾರತೀಯ ಕಮ್ಯುನಿಸ್ಟ್‌ ಪಕ್ಷದ ಸತ್ಯನ್ ಮೊಕೇರಿ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿತ್ತು. ಆದರೆ ಕಾಂಗ್ರೆಸ್‌ನ ಪ್ರಿಯಾಂಕಾ ಗಾಂಧಿ ಐತಿಹಾಸಿಕ ಗೆಲುವು ಸಾಧಿಸಿದ್ದು, ಇಂದು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

Tags: