ನವದೆಹಲಿ : ಉದಯ್‌ಪುರದ ಕನ್ಹಯ್ಯ ಲಾಲ್ ತೇಜಿ ಕೊಲೆ ಆರೋಪಿಗಳನ್ನು ಕ್ಷಮಿಸಬೇಕು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ ಎಂಬ ಕಾರ್ಯಕ್ರಮ ಪ್ರಸಾರ ಮಾಡಿದ್ದಕ್ಕೆ ಜೀ ನ್ಯೂಸ್ ಸಂಪಾದಕ ರಜನೀಶ್ ಅಹುಜಾ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಅವರನ್ನು ಬಂಧಿಸದಂತೆ ಶುಕ್ರವಾರ ಸುಪ್ರೀಂ ಕೋರ್ಟ್ ಆದೇಶ ಮಾಡಿದೆ.
ಅಹುಜಾ ಮನವಿಗೆ ಸಂಬಂಧಿಸಿದಂತೆ ನೋಟಿಸ್ ಜಾರಿ ಮಾಡಿರುವ ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್ ಮತ್ತು ಜೆ ಬಿ ಪರ್ದಿವಾಲಾ ಅವರ ನೇತೃತ್ವದ ವಿಭಾಗೀಯವು ಪೀಠವು ಸುದ್ದಿ ವಾಚಕ ರೋಹಿತ್ ರಂಜನ್ ಮನವಿ ಜೊತೆಗೆ ಹಾಲಿ ಮನವಿಯನ್ನು ಸೇರಿಸಲು ರಿಜಿಸ್ಟ್ರಿಗೆ ನಿರ್ದೇಶನ ನೀಡಿದೆ.
“ಸದರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣ ಅಥವಾ ಮುಂದೆ ದಾಖಲಾಗಬಹುದಾದ ಪ್ರಕರಣದಲ್ಲಿ ಸಂಪಾದಕರ ವಿರುದ್ಧ ಬಲವಂತದ ಕ್ರಮಕೈಗೊಳ್ಳಬಾರದು. ಕೇಂದ್ರ ಮತ್ತು ರಾಜಸ್ಥಾನ, ಛತ್ತೀಸಗಢ ರಾಜ್ಯ ಸರ್ಕಾರಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ” ಎಂದು ಪೀಠ ಹೇಳಿದೆ.
ಅಹುಜಾ ಪ್ರತಿನಿಧಿಸಿದ್ದ ಹಿರಿಯ ವಕೀಲ ಸಿದ್ಧಾರ್ಥ್ ದವೆ ಅವರು “ಅಹುಜಾ ವಿರುದ್ಧ ಛತ್ತೀಸಗಢದ ರಾಯಪುರ, ರಾಜಸ್ಥಾನದ ಸಿಕಾರ್‌ನಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ” ಎಂದರು.
ಉದಯಪುರದಲ್ಲಿ ಕನ್ಹಯ್ಯ ಲಾಲ್ ತೇಜಿ ಅವರನ್ನು ಕೊಲೆ ಮಾಡಿದವರನ್ನು ಕ್ಷಮಿಸಬೇಕು ಎಂದು ರಾಹುಲ್ ಗಾಂಧಿ ಹೇಳಿದ್ದಾರೆ ಎಂದು ಜೀ ನ್ಯೂಸ್ ಸುದ್ದಿ ಪ್ರಸಾರ ಮಾಡಿತ್ತು. ಕೇರಳದಲ್ಲಿ ತಮ್ಮ ಕಚೇರಿಯನ್ನು ಧ್ವಂಸಗೊಳಿಸಿದ್ದವರನ್ನು ಕ್ಷಮಿಸಬೇಕು ಎಂದು ರಾಹುಲ್ ಗಾಂಧಿ ಹೇಳಿದ್ದರೇ ವಿನಾ ತೇಜಿ ಕೊಲೆಗಾರರನ್ನಲ್ಲ. ಆನಂತರ, ವಾಹಿನಿಯು ಕ್ಷಮೆ ಕೋರಿತ್ತು.
ಮಧ್ಯ ಪ್ರಾಚ್ಯದಲ್ಲಿ ಇರಾನ್ ಮೇಲೆ ಇಸ್ರೇಲ್ ಮತ್ತು ಅಮೆರಿಕದಿಂದ ನಡೆಯುತ್ತಿರುವ ದಾಳಿ ಹಾಗೂ ಯುಎಇ, ಬಹರೇನ್, ಕುವೈತ್ ಮೊದಲಾದ ರಾಷ್ಟ್ರಗಳಲ್ಲಿರುವ…
೩೦ ವರ್ಷ ಪ್ರಾಯದ ಸಫುರಾ ಖಾನ್‌ರ ತಂದೆ ತಾಯಿ ಚೆನ್ನೆ ಯಿಂದ ಕರ್ನಾಟಕಕ್ಕೆ ವಲಸೆ ಬಂದಾಗ ಆಕೆ ಇನ್ನೂ ಮಗುವಾಗಿದ್ದರು.…
ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ: ಗುಂಡ್ಲುಪೇಟೆಯಿಂದ ನಂಜನಗೂಡು ತನಕ ರಾಷ್ಟ್ರೀಯ ಹೆದ್ದಾರಿ ಅಗಲೀಕರಣ ಕಾಮಗಾರಿ ನಡೆಯುತ್ತಿದ್ದು ರಸ್ತೆಯ ಎರಡೂ ಬದಿಗಳನ್ನು ಅಗೆದು…
ಮಾಮರಶಿ ರೇಷ್ಮೆ ಕೃಷಿಯಿಂದಲೇ ಉದ್ಯಮ ಕಟ್ಟಿದ ರೇಷ್ಮೆ ತ್ಯಾಗರಾಜು ೨೦೦ಕ್ಕೂ ಹೆಚ್ಚು ಮಂದಿಗೆ ಉದ್ಯೋಗ ನೀಡಿದ ರೈತನ ಮಗ ಮಳವಳ್ಳಿ:…
ಕೆ.ಬಿ.ರಮೇಶನಾಯಕ ಮೈಸೂರು: ದಕ್ಷಿಣ ಭಾರತದಲ್ಲೇ ಲಕ್ಷಾಂತರ ಪ್ರವಾಸಿಗರನ್ನು ಆಕರ್ಷಿಸುವ ಶ್ರೀ ಚಾಮರಾಜೇಂದ್ರ ಮೃಗಾಲಯವು ಕೋವಿಡ್ ಸಮಯದಲ್ಲಿ ಆದಾಯ ಕುಸಿತದಿಂದ ಕಂಗೆಟ್ಟರೂ…
ಶೇಷಾದ್ರಿ ಗಂಜೂರು ಇರಾನ್ ಮತ್ತು ಇಸ್ರೇಲ್ ನಡುವಿನ ಸಮರ ನಾಲ್ಕನೇ ದಿನ ಪೂರ್ಣಗೊಳಿಸಿದೆ. ಯುದ್ಧದ ಬೀಸಿಗೆ ಸಿಲುಕಿ ಮುಖ್ಯವಾಗಿ ೧೨…