ದೇಶ- ವಿದೇಶ

ರಾಹುಲ್‌ ಗಾಂಧಿ ವಿರುದ್ಧದ ಕಾರ್ಯಕ್ರಮ: ಜೀ ನ್ಯೂಸ್‌ ಸಂಪಾದಕ ರಜನೀಶ್‌ಗೆ ಬಂಧನದಿಂದ ರಕ್ಷಣೆ ನೀಡಿದ ಸುಪ್ರೀಂ

ನವದೆಹಲಿ : ಉದಯ್‌ಪುರದ ಕನ್ಹಯ್ಯ ಲಾಲ್‌ ತೇಜಿ ಕೊಲೆ ಆರೋಪಿಗಳನ್ನು ಕ್ಷಮಿಸಬೇಕು ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹೇಳಿದ್ದಾರೆ ಎಂಬ ಕಾರ್ಯಕ್ರಮ ಪ್ರಸಾರ ಮಾಡಿದ್ದಕ್ಕೆ ಜೀ ನ್ಯೂಸ್‌ ಸಂಪಾದಕ ರಜನೀಶ್‌ ಅಹುಜಾ ವಿರುದ್ಧ ದಾಖಲಾಗಿರುವ ಎಫ್‌ಐಆರ್‌ಗೆ ಸಂಬಂಧಿಸಿದಂತೆ ಅವರನ್ನು ಬಂಧಿಸದಂತೆ ಶುಕ್ರವಾರ ಸುಪ್ರೀಂ ಕೋರ್ಟ್‌ ಆದೇಶ ಮಾಡಿದೆ.

ಅಹುಜಾ ಮನವಿಗೆ ಸಂಬಂಧಿಸಿದಂತೆ ನೋಟಿಸ್‌ ಜಾರಿ ಮಾಡಿರುವ ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್‌ ಮತ್ತು ಜೆ ಬಿ ಪರ್ದಿವಾಲಾ ಅವರ ನೇತೃತ್ವದ ವಿಭಾಗೀಯವು ಪೀಠವು ಸುದ್ದಿ ವಾಚಕ ರೋಹಿತ್‌ ರಂಜನ್‌ ಮನವಿ ಜೊತೆಗೆ ಹಾಲಿ ಮನವಿಯನ್ನು ಸೇರಿಸಲು ರಿಜಿಸ್ಟ್ರಿಗೆ ನಿರ್ದೇಶನ ನೀಡಿದೆ.

“ಸದರಿ ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲಾಗಿರುವ ಪ್ರಕರಣ ಅಥವಾ ಮುಂದೆ ದಾಖಲಾಗಬಹುದಾದ ಪ್ರಕರಣದಲ್ಲಿ ಸಂಪಾದಕರ ವಿರುದ್ಧ ಬಲವಂತದ ಕ್ರಮಕೈಗೊಳ್ಳಬಾರದು. ಕೇಂದ್ರ ಮತ್ತು ರಾಜಸ್ಥಾನ, ಛತ್ತೀಸಗಢ ರಾಜ್ಯ ಸರ್ಕಾರಗಳಿಗೆ ನೋಟಿಸ್‌ ಜಾರಿ ಮಾಡಲಾಗಿದೆ” ಎಂದು ಪೀಠ ಹೇಳಿದೆ.

ಅಹುಜಾ ಪ್ರತಿನಿಧಿಸಿದ್ದ ಹಿರಿಯ ವಕೀಲ ಸಿದ್ಧಾರ್ಥ್‌ ದವೆ ಅವರು “ಅಹುಜಾ ವಿರುದ್ಧ ಛತ್ತೀಸಗಢದ ರಾಯಪುರ, ರಾಜಸ್ಥಾನದ ಸಿಕಾರ್‌ನಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ” ಎಂದರು.

ಉದಯಪುರದಲ್ಲಿ ಕನ್ಹಯ್ಯ ಲಾಲ್‌ ತೇಜಿ ಅವರನ್ನು ಕೊಲೆ ಮಾಡಿದವರನ್ನು ಕ್ಷಮಿಸಬೇಕು ಎಂದು ರಾಹುಲ್‌ ಗಾಂಧಿ ಹೇಳಿದ್ದಾರೆ ಎಂದು ಜೀ ನ್ಯೂಸ್‌ ಸುದ್ದಿ ಪ್ರಸಾರ ಮಾಡಿತ್ತು. ಕೇರಳದಲ್ಲಿ ತಮ್ಮ ಕಚೇರಿಯನ್ನು ಧ್ವಂಸಗೊಳಿಸಿದ್ದವರನ್ನು ಕ್ಷಮಿಸಬೇಕು ಎಂದು ರಾಹುಲ್‌ ಗಾಂಧಿ ಹೇಳಿದ್ದರೇ ವಿನಾ ತೇಜಿ ಕೊಲೆಗಾರರನ್ನಲ್ಲ. ಆನಂತರ, ವಾಹಿನಿಯು ಕ್ಷಮೆ ಕೋರಿತ್ತು.

andolana

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

50 mins ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

51 mins ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

54 mins ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

56 mins ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

1 hour ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

1 hour ago