ದೇಶ- ವಿದೇಶ

ವಿಮಾನ ದುರಂತದಲ್ಲಿ ಪ್ರಾಣ ಕಳೆದುಕೊಂಡ ಪ್ರಮುಖ ರಾಜಕಾರಣಿಗಳಿವರು…

ಬಾರಾಮತಿ : ಭಾರತೀಯ ರಾಜಕಾರಣದಲ್ಲಿ ಅನೇಕ ರಾಜಕೀಯ ನಾಯಕರು ವಿಮಾನ ದುರಂತದಲ್ಲಿ ಮೃತಪಟ್ಟಿದ್ದಾರೆ. ಈ ಹಿಂದೆ ವಿಮಾನ ಅಪಘಾತದಲ್ಲಿ ಯಾವೆಲ್ಲಾ ರಾಜಕಾರಣಿಗಳು ಪ್ರಾಣ ಕಳೆದುಕೊಂಡಿದ್ದಾರೆ ಮುಖ್ಯಮಂತ್ರಿಗಳಾಗಿದ್ದ ವೈ.ಎಸ್.ರಾಜಶೇಖರ ರೆಡ್ಡಿ, ದೋರ್ಜಿ ಖಂಡು, ಮಾಜಿ ಸಿಎಂ ವಿಜಯ್ ರೂಪಾನಿ , ಹಿರಿಯ ನಾಯಕರಾಗಿದ್ದ ಓಂ ಪ್ರಕಾಶ್ ಜಿಂದಾಲ್, ಮಾಧವರಾವ್ ಸಿಂಧಿಯಾ, ಸಂಜಯ್ ಗಾಂಧಿ ಸೇರಿದಂತೆ ಹಲವು ಪ್ರಮುಖ ನಾಯಕರು ಇಂತಹ ದುರಂತಗಳಿಗೆ ಬಲಿಯಾಗಿದ್ದಾರೆ. ಅವರ ರಾಜಕೀಯ ಪ್ರಯಾಣ ಇಂತಹ ದುರ್ಘಟನೆಗಳಿಂದ ಕೊನೆಗೊಂಡಿದೆ.

ವಿಜಯ್ ರೂಪಾನಿ (2025) ಗುಜರಾತ್‌ನ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ ಜೂನ್ 12, 2025 ರಂದು ಅಹಮದಾಬಾದ್‌ನಲ್ಲಿ ನಡೆದ ದುರಂತ ವಿಮಾನ ಅಪಘಾತದಲ್ಲಿ ನಿಧನರಾಗಿದ್ದರು. ಸರ್ದಾರ್ ವಲ್ಲಭಭಾಯಿ ಪಟೇಲ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಹೊರಟ ಕೆಲವೇ ಕ್ಷಣಗಳಲ್ಲಿ ಲಂಡನ್‌ಗೆ ತೆರಳುತ್ತಿದ್ದ ವಿಮಾನ ಪತನಗೊಂಡಿತ್ತು ಅದರಲ್ಲಿ ರೂಪಾನಿ ಇದ್ದರು. ವಿಮಾನದಲ್ಲಿದ್ದ 242 ಜನರಲ್ಲಿ 241 ಜನರು ಸಾವನ್ನಪ್ಪಿದರು.

ದೋರ್ಜಿ ಖಂಡು (2011) ಅರುಣಾಚಲ ಪ್ರದೇಶದ ಮುಖ್ಯಮಂತ್ರಿ ದೋರ್ಜಿ ಖಂಡು ಮತ್ತು ಇತರ ನಾಲ್ವರನ್ನು ಏಪ್ರಿಲ್ 30, 2011 ರಂದು ತವಾಂಗ್‌ನಿಂದ ಇಟಾನಗರಕ್ಕೆ ಕರೆದೊಯ್ಯುತ್ತಿದ್ದ ಹೆಲಿಕಾಪ್ಟರ್ ರಾಜ್ಯದ ಪಶ್ಚಿಮ ಕಾಮೆಂಗ್ ಜಿಲ್ಲೆಯಲ್ಲಿ ಅಪಘಾತಕ್ಕೀಡಾಗಿ ಸಾವನ್ನಪ್ಪಿದ್ದರು.

ವೈ.ಎಸ್. ಆರ್.ರೆಡ್ಡಿ (2009) ಆಂಧ್ರಪ್ರದೇಶದ ಆಗಿನ ಮುಖ್ಯಮಂತ್ರಿ ವೈ.ಎಸ್.ರಾಜಶೇಖರ ರೆಡ್ಡಿ (2009), ವೈ.ಎಸ್.ಆರ್ ಎಂದೇ ಜನಪ್ರಿಯರಾಗಿದ್ದರು, ಸೆಪ್ಟೆಂಬರ್ 2, 2009 ರಂದು ಅವರ ಬೆಲ್ 430 ಹೆಲಿಕಾಪ್ಟರ್ ಕೆಟ್ಟ ಹವಾಮಾನದಿಂದಾಗಿ ದಟ್ಟವಾದ ನಲ್ಲಮಲ ಕಾಡಿನಲ್ಲಿ ಅಪಘಾತಕ್ಕೀಡಾಗಿ ನಿಧನರಾದರು.

ಜಿಂದಾಲ್ ಮತ್ತು ಸುರೇಂದರ್ ಸಿಂಗ್ (2005) ರಲ್ಲಿ ಕೈಗಾರಿಕೋದ್ಯಮಿ ಮತ್ತು ಹರಿಯಾಣ ಸಚಿವ ಓಂ ಪ್ರಕಾಶ್ ಜಿಂದಾಲ್ ಅವರು ಕೃಷಿ ಸಚಿವ ಸುರೇಂದರ್ ಸಿಂಗ್ ಅವರೊಂದಿಗೆ ಹೆಲಿಕಾಪ್ಟರ್ ಅಪಘಾತದಲ್ಲಿ ಪ್ರಾಣ ಕಳೆದುಕೊಂಡರು. ಅವರ ಹೆಲಿಕಾಪ್ಟರ್ ದೆಹಲಿಯಿಂದ ಚಂಡೀಗಢಕ್ಕೆ ತೆರಳುತ್ತಿದ್ದಾಗ ಉತ್ತರ ಪ್ರದೇಶದ ಸಹರಾನ್‌ಪುರದಲ್ಲಿ ಅಪಘಾತಕ್ಕೀಡಾಯಿತು.

ಕೆ.ಎಸ್.ಸೌಮ್ಯ (2004) ದಕ್ಷಿಣ ಭಾರತದ ಖ್ಯಾತ ನಟಿ ಕೆ.ಎಸ್.ಸೌಮ್ಯ, ಸೌಂದರ್ಯ ಎಂದೇ ಜನಪ್ರಿಯರಾಗಿದ್ದರು. ಅವರು ಏಪ್ರಿಲ್ 17, 2004 ರಂದು ವಿಮಾನ ಅಪಘಾತದಲ್ಲಿ ಸಾವನ್ನಪ್ಪಿದರು. ಸೂರ್ಯವಂಶಂ ಚಿತ್ರದ ನಟಿ ಬೆಂಗಳೂರಿನಿಂದ ಕರೀಂನಗರಕ್ಕೆ ತನ್ನ ಸಹೋದರನೊಂದಿಗೆ ವಿಮಾನದಲ್ಲಿ ಪ್ರಯಾಣಿಸುತ್ತಿದ್ದರು.

ಸಿಪ್ರಿಯನ್ ಸಂಗ್ಮಾ (2004)ರ ಸೆಪ್ಟೆಂಬರ್ 22 ರಂದು ರಾಜ್ಯ ರಾಜಧಾನಿಯಿಂದ ಕೇವಲ 20 ಕಿ.ಮೀ ದೂರದಲ್ಲಿರುವ ಬಾರಾಪಾನಿ ಸರೋವರದ ಬಳಿ ಹೆಲಿಕಾಪ್ಟರ್ ಅಪಘಾತಕ್ಕೀಡಾಗಿ ಮೇಘಾಲಯದ ಗ್ರಾಮೀಣಾಭಿವೃದ್ಧಿ ಸಚಿವ ಸಿಪ್ರಿಯನ್ ಸಂಗ್ಮಾ ಮತ್ತು ಇತರ ಒಂಬತ್ತು ಮಂದಿ ಪವನ್ ಹನ್ಸ್ ಹೆಲಿಕಾಪ್ಟರ್‌ನಲ್ಲಿ ಗುವಾಹಟಿಯಿಂದ ಶಿಲ್ಲಾಂಗ್‌ಗೆ ಹೋಗುತ್ತಿದ್ದಾಗ ಸಾವನ್ನಪ್ಪಿದ್ದರು.

ಜಿಎಂಸಿ ಬಾಲಯೋಗಿ (2002) ಲೋಕಸಭಾ ಸ್ಪೀಕರ್ ಮತ್ತು ತೆಲುಗು ದೇಶಂ ಪಕ್ಷದ ನಾಯಕ ಜಿಎಂಸಿ ಬಾಲಯೋಗಿ ಅವರನ್ನು ಮಾರ್ಚ್ 3, 2002 ರಂದು ಪಶ್ಚಿಮ ಗೋದಾವರಿ ಜಿಲ್ಲೆಯ ಭೀಮಾವರಂನಿಂದ ಕರೆದೊಯ್ಯುತ್ತಿದ್ದ ಖಾಸಗಿ ಹೆಲಿಕಾಪ್ಟರ್ ಆಂಧ್ರಪ್ರದೇಶದ ಕೃಷ್ಣ ಜಿಲ್ಲೆಯ ಕೈಕಲೂರು ಬಳಿಯ ಕೊಳಕ್ಕೆ ಅಪ್ಪಳಿಸಿ ಹೆಲಿಕಾಪ್ಟರ್ ಅಪಘಾತದಲ್ಲಿ ನಿಧನರಾದರು.

ಮಾಧವರಾವ್ ಸಿಂಧಿಯಾ (2001) ಹಿರಿಯ ಕಾಂಗ್ರೆಸ್ ನಾಯಕ, ಮಾಜಿ ನಾಗರಿಕ ವಿಮಾನಯಾನ ಸಚಿವರಾಗಿದ್ದ ಮಾಧವರಾವ್ ಸಿಂಧಿಯಾ ಅವರು ಸೆಪ್ಟೆಂಬರ್ 30, 2001 ರಂದು ಕಾನ್ಪುರದಲ್ಲಿ ರಾಜಕೀಯ ರ್ಯಾಲಿಯೊಂದರ ಮಾರ್ಗಮಧ್ಯೆ ಸಂಭವಿಸಿದ ವಿಮಾನ ಅಪಘಾತದಲ್ಲಿ ನಿಧನರಾದರು. ಉತ್ತರ ಪ್ರದೇಶದ ಮಣಿಪುರಿ ಬಳಿ ಪ್ರತಿಕೂಲ ಹವಾಮಾನದಿಂದಾಗಿ 10 ಆಸನಗಳ ಖಾಸಗಿ ವಿಮಾನ ಅಪಘಾತಕ್ಕೀಡಾಗಿತ್ತು.

ಸಂಜಯ್ ಗಾಂಧಿ (1980) ಕಾಂಗ್ರೆಸ್ ನಾಯಕ ಮತ್ತು ಅಂದಿನ ಪ್ರಧಾನಿ ಇಂದಿರಾ ಗಾಂಧಿಯವರ ಪುತ್ರ ಸಂಜಯ್ ಗಾಂಧಿ, ಜೂನ್ 23, 1980 ರಂದು ನಡೆದ ದುರಂತ ಅಪಘಾತದಲ್ಲಿ ನಿಧನರಾದರು.

ಸಫ್ದರ್ಜಂಗ್ ವಿಮಾನ ನಿಲ್ದಾಣದ ಬಳಿ ದೆಹಲಿ ಫೈಯಿಂಗ್ ಕ್ಲಬ್ ವಿಮಾನದಲ್ಲಿ ವೈಮಾನಿಕ ಸಾಹಸ ಮಾಡಲು ಪ್ರಯತ್ನಿಸುತ್ತಿದ್ದಾಗ, ವಿಮಾನವು ನಿಯಂತ್ರಣ ತಪ್ಪಿ ಪತನಗೊಂಡಿತ್ತು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ: ಸಿಎಂ ಡಿ.ಕೆ.ಶಿವಕುಮಾರ್‌

ಹನೂರು: ಚಾಮರಾಜನಗರ ಎಂದರೆ ನನಗೆ ಬಲು ಪ್ರೀತಿ, ನನ್ನ ಕ್ಷೇತ್ರದ ಪಕ್ಕದಲ್ಲೇ ಚಾಮರಾಜನಗರ ಜಿಲ್ಲೆ ಇದೆ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್…

1 min ago

ಹನೂರು ತಾಲೂಕಿನಲ್ಲಿ ಮುಂದುವರಿದ ಮಳೆ ಅವಾಂತರ: ಹಳ್ಳದಲ್ಲಿ ಗಣಪತಿ ದೇವಾಲಯ ಜಲಸಮಾಧಿ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕು ವ್ಯಾಪ್ತಿಯಲ್ಲಿ ಕಳೆದ ಎರಡು ದಿನಗಳಿಂದ ನಿರಂತರವಾಗಿ ಮಳೆ ಸುರಿಯುತ್ತಿರುವ…

57 mins ago

ಹನೂರಿನಲ್ಲಿ ಮಳೆಯ ಅಬ್ಬರ: 50ಕ್ಕೂ ಹೆಚ್ಚು ಮನೆಗಳು ಜಲಾವೃತ

ಮಹಾದೇಶ್‌ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಕಳೆದ ಎರಡು ದಿನಗಳಿಂದ ಹನೂರು ತಾಲೂಕಿನಾದ್ಯಂತ ನಿರಂತರವಾಗಿ ಸುರಿಯುತ್ತಿರುವ ಮಳೆಗೆ…

1 hour ago

ಓದುಗರ ಪತ್ರ: ಜನರ ಹಿತ ಕಾಯಲಿ!

ಜನರ ಹಿತ ಕಾಯಲಿ! ನಕಲಿ ವೈದ್ಯರು, ಕಲಬೆರಿಕೆ ಔಷಧದ ಹಾವಳಿಯಿಂದ ಜನ ಬೇಸ್ತುಬಿದ್ದಿರುವಾಗ ನೈಜ ದರಕ್ಕಿಂತ ಅತ್ಯಧಿಕ ದರಕ್ಕೆ ಔಷಧಿ ಮಾರಾಟ…

7 hours ago

ಓದುಗರ ಪತ್ರ: ಜಾಗೃತಿ, ನಿಯಂತ್ರಣ ಇರಬೇಕು

ಆಹಾರದಲ್ಲಿ ಬಳಸುವ ಉಪ್ಪು, ಸಕ್ಕರೆ ಬಳಕೆ ಪ್ರಮಾಣಕ್ಕೆ ಕಡಿವಾಣ ಹಾಕಲು ಅರೋಗ್ಯ ಇಲಾಖೆ ಚಿಂತನೆ ನಡೆಸಿದೆ ಎಂದು ವರದಿಯಾಗಿದೆ. ಹಾಗೆಯೇ…

7 hours ago

ಓದುಗರ ಪತ್ರ: ಚಾ.ನಗರ ಜಿಲ್ಲೆಗೆ ವಿಶೇಷ ಅನುದಾನ ನೀಡಲು ಮುಖ್ಯಮಂತ್ರಿಗಳು ಕ್ರಮ ಕೈಗೊಳ್ಳಲಿ

ಚಾಮರಾಜನಗರ ಜಿಯ ಕೊಳ್ಳೇಗಾಲ ಮತ್ತು ಹನೂರು ವಿಧಾನಸಭಾ ಕ್ಷೇತ್ರಗಳಲ್ಲಿ ಸುಮಾರು ರೂ.೫೦೦ ಕೋಟಿಗೂ ಅಧಿಕ ಮೊತ್ತದ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ…

7 hours ago