Mysore
17
overcast clouds

Social Media

ಭಾನುವಾರ, 07 ಡಿಸೆಂಬರ್ 2025
Light
Dark

ಸೇನಾ ಸಿಬ್ಬಂದಿ ಕುಟುಂಬಕ್ಕೆ ಆಸ್ತಿ ತೆರಿಗೆ ವಿನಾಯಿತಿ: ಆಂಧ್ರ ಡಿಸಿಎಂ ಪವನ್‌ ಕಲ್ಯಾಣ್‌

ಹೈದರಬಾದ್:‌ ಭಾರತೀಯ ಸೇನೆಯಲ್ಲಿರುವ ಸಿಬ್ಬಂದಿ ಕುಟುಂಬಗಳಿಗೆ ಆಸ್ತಿ ತೆರಿಗೆ ವಿನಾಯಿತಿ ನೀಡಲಾಗುವುದು ಎಂದು ಆಂಧ್ರಪ್ರದೇಶ ಡಿಸಿಎಂ ಪವನ್‌ ಕಲ್ಯಾಣ್‌ ಘೋಷಣೆ ಮಾಡಿದ್ದಾರೆ.

ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್‌ ಖಾತೆಯಲ್ಲಿ ಪೋಸ್ಟ್‌ ಮಾಡಿರುವ ಡಿಸಿಎಂ ಪವನ್‌ ಕಲ್ಯಾಣ್‌ ಅವರು, ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುವವರಿಗೆ ಗೌರವ ಹಾಗೂ ಕೃತಜ್ಞತೆಯ ಸೂಚಕವಾಗಿ ಈ ಕ್ರಮ ಕೈಗೊಳ್ಳಲಾಗುತ್ತದೆ.

ರಾಜ್ಯದ ಗ್ರಾಮ ಪಂಚಾಯಿತಿ ಮಿತಿಯೊಳಗಿರುವ ಭಾರತೀಯ ಸೇನೆಯಲ್ಲಿರುವ ಸಿಬ್ಬಂದಿಗೆ ಸೇರಿದ ಕುಟುಂಬಗಳಿಗೆ ಆಸ್ತಿ ತೆರಿಗೆ ವಿನಾಯಿತಿ ನೀಡುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ:- ಕದನ ವಿರಾಮ: ಇಂದು ಭಾರತ-ಪಾಕ್‌ ನಡುವೆ ಮಹತ್ವದ ಮಾತುಕತೆ

ದೇಶಾದ್ಯಂತ ನಿಯೋಜಿತ ಸ್ಥಳಗಳನ್ನು ಲೆಕ್ಕಿಸದೇ ಎಲ್ಲಾ ಸಕ್ರಿಯ ಸಿಬ್ಬಂದಿಯ ಕುಟುಂಬಕ್ಕೆ ಈ ನಿಯಮ ಅನ್ವಯವಾಗಲಿದೆ. ಈ ನಿರ್ಧಾರ ಸೇನೆ, ನೌಕಾಪಡೆ, ವಾಯುಪಡೆ, ಸಿಆರ್‌ಪಿಎಫ್‌ ಮತ್ತು ಅರೆಸೈನಿಕ ಪಡೆಗಳ ಧೈರ್ಯವನ್ನು ಗೌರವಿಸುತ್ತದೆ. ರಾಷ್ಟ್ರಕ್ಕೆ ಸೈನಿಕರ ಸೇವೆ ಅಪಾರ ಎಂದು ತಿಳಿಸಿದ್ದಾರೆ.

Tags:
error: Content is protected !!