ಹೈದರಬಾದ್: ಭಾರತೀಯ ಸೇನೆಯಲ್ಲಿರುವ ಸಿಬ್ಬಂದಿ ಕುಟುಂಬಗಳಿಗೆ ಆಸ್ತಿ ತೆರಿಗೆ ವಿನಾಯಿತಿ ನೀಡಲಾಗುವುದು ಎಂದು ಆಂಧ್ರಪ್ರದೇಶ ಡಿಸಿಎಂ ಪವನ್ ಕಲ್ಯಾಣ್ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣವಾದ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಡಿಸಿಎಂ ಪವನ್ ಕಲ್ಯಾಣ್ ಅವರು, ಭಾರತೀಯ ಸೇನೆಯಲ್ಲಿ ಸೇವೆ ಸಲ್ಲಿಸುವವರಿಗೆ ಗೌರವ ಹಾಗೂ ಕೃತಜ್ಞತೆಯ ಸೂಚಕವಾಗಿ ಈ ಕ್ರಮ ಕೈಗೊಳ್ಳಲಾಗುತ್ತದೆ.
ರಾಜ್ಯದ ಗ್ರಾಮ ಪಂಚಾಯಿತಿ ಮಿತಿಯೊಳಗಿರುವ ಭಾರತೀಯ ಸೇನೆಯಲ್ಲಿರುವ ಸಿಬ್ಬಂದಿಗೆ ಸೇರಿದ ಕುಟುಂಬಗಳಿಗೆ ಆಸ್ತಿ ತೆರಿಗೆ ವಿನಾಯಿತಿ ನೀಡುವುದಾಗಿ ಹೇಳಿದ್ದಾರೆ.
ಇದನ್ನೂ ಓದಿ:- ಕದನ ವಿರಾಮ: ಇಂದು ಭಾರತ-ಪಾಕ್ ನಡುವೆ ಮಹತ್ವದ ಮಾತುಕತೆ
ದೇಶಾದ್ಯಂತ ನಿಯೋಜಿತ ಸ್ಥಳಗಳನ್ನು ಲೆಕ್ಕಿಸದೇ ಎಲ್ಲಾ ಸಕ್ರಿಯ ಸಿಬ್ಬಂದಿಯ ಕುಟುಂಬಕ್ಕೆ ಈ ನಿಯಮ ಅನ್ವಯವಾಗಲಿದೆ. ಈ ನಿರ್ಧಾರ ಸೇನೆ, ನೌಕಾಪಡೆ, ವಾಯುಪಡೆ, ಸಿಆರ್‌ಪಿಎಫ್ ಮತ್ತು ಅರೆಸೈನಿಕ ಪಡೆಗಳ ಧೈರ್ಯವನ್ನು ಗೌರವಿಸುತ್ತದೆ. ರಾಷ್ಟ್ರಕ್ಕೆ ಸೈನಿಕರ ಸೇವೆ ಅಪಾರ ಎಂದು ತಿಳಿಸಿದ್ದಾರೆ.
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ತಾಳು ಬೆಟ್ಟದಿಂದ ಪಾದಯಾತ್ರೆಯ ಮೂಲಕ ತೆರಳುತ್ತಿದ್ದ ಪಾದಯಾತ್ರಿಕನ ಮೇಲೆ ದಾಳಿ…
ಬೆಂಗಳೂರು : ಮೊದಲ ವರ್ಷದ ಜಂಟಿ ಅಧಿವೇಶನದಲ್ಲಿ ರಾಜ್ಯಪಾಲರು ಸಚಿವ ಸಂಪುಟ ಸಿದ್ಧಪಡಿಸಿದ ಭಾಷಣವನ್ನು ಓದದೇ, ಸಂವಿಧಾನದ ವಿಧಿಗಳನ್ನು ಉಲ್ಲಂಘನೆ…
ಸುತ್ತೂರು : ಕೇವಲ 1 ಎಕರೆ ಪ್ರದೇಶದಲ್ಲಿ ಸುಮಾರು 102 ಮಾದರಿಯ ವಿವಿಧ ತಳಿಯ ಬೆಳೆಗಳನ್ನು ಬೆಳೆಯಬಹುದೆಂಬುದನ್ನು ಸಾಬೀತು ಪಡಿಸಲಾಗಿದೆ.…
ದಕ್ಷಿಣ ಕನ್ನಡ: ದಕ್ಷಿಣ ಭಾರತದ ನಾಗರಾಧನೆಯ ಹೆಸರಾಂತ ಪುಣ್ಯಕ್ಷೇತ್ರ ಕುಕ್ಕೆ ಶ್ರೀ ಸುಬ್ರಹ್ಮಣು ದೇವಸ್ಥಾನದ ಆದಾಯ 2025ರ ನವೆಂಬರ್ ಹಾಗೂ…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಹಾಗೂ ದ್ವೇಷ ರಾಜಕಾರಣ ಮಾಡಲು ಸದನವನ್ನು ದುರ್ಬಳಕೆ ಮಾಡಿಕೊಳ್ಳಲಾಗುತ್ತಿದೆ ಎಂದು ರಾಜ್ಯ…
ಜಾರ್ಖಂಡ್: ಜಾರ್ಖಂಡ್‌ನ ಸಾರಂಡಾ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳು ಹಾಗೂ ಮಾವೋವಾದಿಗಳ ನಡುವಿನ ಗುಂಡಿನ ಚಕಮಕಿಯಲ್ಲಿ 10 ಮಂದಿ ನಕ್ಸಲರು…