ದೇಶ- ವಿದೇಶ

ಭಾರತದೊಂದಿಗೆ ವಿಲೀನಕ್ಕೆ ಒತ್ತಾಯಿಸಿ ಪ್ರತಿಭಟನೆ

ಇಸ್ಲಾಮಾಬಾದ್ : ಆರ್ಥಿಕ ಸಂಕಷ್ಟಕ್ಕೆ ಸಿಲುಕಿ ಒದ್ದಾಡುತ್ತಿರುವ ಪಾಕಿಸ್ಥಾನಕ್ಕೆ ಈಗ ಪ್ರತಿಭಟನೆಯ ಬಿಸಿ ತಟ್ಟುತ್ತಿದೆ. ಅದಕ್ಕೆ ಪೂರಕವಾಗಿ ಪಾಕಿಸ್ಥಾನ ಆಕ್ರಮಿತ ಕಾಶ್ಮೀರದ ಗಿಲ್ಗಿಟ್-ಬಾಲ್ಟಿಸ್ಥಾನವನ್ನು ಭಾರತದೊಂದಿಗೆ ವಿಲೀನಕ್ಕೆ ಒತ್ತಾಯಿಸಿ ಪಾಕ್ ಮಿಲಿಟರಿ ಹಾಗೂ ಸರ್ಕಾರದ ವಿರುದ್ಧ ಜನರು ತಿರುಗಿಬಿದ್ದಾರೆ.
ಗಿಲ್ಗಿಟ್ ಹಾಗೂ ಬಾಲ್ಟಿಸ್ಥಾನವನ್ನು ಆಕ್ರಮಿಸಿಕೊಂಡಿರುವ ಪಾಕಿಸ್ಥಾನಕ್ಕೆ ಅಲ್ಲಿನ ಜನರಿಗೆ ಸವಲತ್ತುಗಳನ್ನು ಒದಗಿಸುವ ಸಾಮರ್ಥ್ಯವೂ ಇಲ್ಲ. ಎಲ್ಲ ಸೌಕರ್ಯ ಹಾಗೂ ಅಭಿವೃದ್ಧಿ ಯೋಜನೆಗಳಲ್ಲೂ ಸರ್ಕಾರ, ಪಿಒಕೆಗೆ ತಾರತಮ್ಯ ಎಸಗುತ್ತಿದೆ. ಪಾಕ್ ಸರ್ಕಾರ ನಮ್ಮ ನೈಸರ್ಗಿಕ ಸಂಪನ್ಮೂಲಗಳನ್ನ ದುರುಪಯೋಗ ಪಡಿಸಿಕೊಳ್ಳುತ್ತಿದೆ, ಅಕ್ರಮವಾಗಿ ನಮ್ಮ ಭೂಮಿಯನ್ನು ಒತ್ತುವರಿ ಮಾಡಲಾಗುತ್ತಿದೆ ಎಂದು ಆರೋಪಿಸಿ 12 ದಿನಗಳಿಂದಲೂ ಗಿಲ್ಗಿಟ್-ಬಾಲ್ಟಿಸ್ಥಾನದ ಜನರು ಬೀದಿಗಿಳಿದು ಪ್ರತಿಭಟಿಸುತ್ತಿದ್ದಾರೆ.
ಪಾಕ್ ಸರ್ಕಾರದ ದುರಾಡಳಿತದಿಂದ ಜೀವನಕ್ಕೆ ತೊಂದರೆಯಾಗಿದೆ. ಹೀಗಾಗಿ, ಭಾರತದ ಜತೆಗೆ ಗಿಲ್ಗಿಟ್-ಬಾಲ್ಟಿಸ್ಥಾನ ವಿಲೀನಗೊಳ್ಳಲು ಅವಕಾಶ ನೀಡಲೇಬೇಕು ಎಂದು ಸ್ಥಳೀಯರು 12 ದಿನಗಳಿಂದ ಪ್ರತಿಭಟಿಸಿ, ಆಗ್ರಹಿಸುತ್ತಿದ್ದಾರೆ.

andolanait

Recent Posts

ಓದುಗರ ಪತ್ರ: ಗ್ರಹಣ..!

ಗ್ರಹಣ..! ಸೂರ್ಯ-ಚಂದ್ರರ ನಡುವೆ ಭೂಮಿ ಬಂದರೆ ಚಂದ್ರ ಗ್ರಹಣ ! ಭಾರತ-ರಷ್ಯಾ ನಡುವೆ ಅಮೆರಿಕ ಬಂದರೆ ‘ಸುಂಕ ’ ಗ್ರಹಣ…

1 hour ago

ಓದುಗರ ಪತ್ರ: ಪೆಟ್ರೋಲ್ ಬಂಕ್‌ಗಳಲ್ಲಿ ಮೋಸ: ಗರಿಷ್ಟ ಕ್ರಮ ಕೈಗೊಳ್ಳಲಿ

ರಾಜ್ಯದ ೮೦೫ ಪೆಟ್ರೋಲ್ ಬಂಕ್‌ಗಳ ತಪಾಸಣೆಯಲ್ಲಿ ಬರೋಬ್ಬರಿ ೭೬೮ ಬಂಕ್‌ಗಳಲ್ಲಿ (ಶೇ. ೮೫ ರಷ್ಟು) ಅಳತೆಯಲ್ಲಿ ಮೋಸ ಕಂಡುಬಂದಿರುವುದು ಸಾರ್ವಜನಿಕರಿಗೆ…

1 hour ago

ಓದುಗರ ಪತ್ರ: ಉದ್ಯೋಗ ಸೃಷ್ಟಿ : ಫ್ಲಿಪ್‌ಕಾರ್ಟ್ ನಡೆ ಸ್ವಾಗತಾರ್ಹ

ಒಂದು ಕಡೆ ಒರಾಕಲನಂತಹ ಕಂಪೆನಿಗಳು ತಮ್ಮ ನೌಕರರನ್ನು ಯಾವುದೇ ಮುನ್ಸೂಚನೆ ನೀಡದೇ ಕೇವಲ ಒಂದೇ ಒಂದು ಇ ಮೇಲ್ ಸಂದೇಶದ…

1 hour ago

ಸುಗಮ ಸಂಗೀತದ ಅದ್ಬುತ ಗಾಯಕ ಮಡಿಕೇರಿ ನಾಗೇಂದ್ರ

ಡಾ.ಕೆ.ವಿ.ಲಕ್ಷ್ಮೀದೇವಿ, ಗುರುಕೃಪಾ ಸಂಗೀತ ಕೇಂದ್ರ, ಮೈಸೂರು ಇಂದು ಗುರು ನಮನ ಮಡಿಕೇರಿ ನಾಗೇಂದ್ರರೆಂದೇ ಪ್ರಖ್ಯಾತರಾದ ‘ಗುರು ಕೃಪಾ ಸಂಗೀತ ಕೇಂದ್ರ’ದ…

4 hours ago

ಸುಮ್ಮನಿದ್ದರೂ ಪರಿಣಮಿಸುವ ರಂಗಭೂಮಿಯ ಝೆನ್ ಗುರು – ಜಂಬೆ ಮೇಷ್ಟ್ರು

ಸತೀಶ್ ತಿಪಟೂರು ಕರ್ನಾಟಕದ ಯಾವುದೇ ಭಾಗದಲ್ಲಿ ಜಂಬೆ ಮೇಷ್ಟ್ರ ಹಿರಿ - ಕಿರಿಯ ವಿದ್ಯಾರ್ಥಿಗಳು ಮೂರ್ನಾಲ್ಕು ಜನ ಒಂದೆಡೆ ಸೇರಿದರೆಂದರೆ…

4 hours ago

ಮಕ್ಕಳ ಮನದಂಗಳದಲ್ಲಿ ಗಾಂಧಿ ಚಿಂತನೆಯ ಬೇರುಗಳು

ಪ್ರತಿ ಭಾರತೀಯರ ಎದೆ ಬಡಿತದ ಚೇತನ ಗಾಂಧೀಜಿ:  ಕೈಯಲ್ಲೊಂದು ಕೋಲು ಹಿಡಿದು, ದುಂಡು ಕನ್ನಡಕ ಧರಿಸಿ, ಸತ್ಯ, ಅಹಿಂಸೆಯ ಅಸದಿಂದ…

4 hours ago