ದೇಶ- ವಿದೇಶ

ಫ್ರಾಂಕ್‌ಫರ್ಟ್‌ನಲ್ಲಿ ಪ್ರತಿಭಟನೆ ಹಿಂಸಾಚಾರ: 100ಕ್ಕೂ ಹೆಚ್ಚು ಪೊಲೀಸರಿಗೆ ಗಾಯ, 54 ಮಂದಿ ಬಂಧನ!

ಬರ್ಲಿನ್:‌ ಜರ್ಮನಿಯ ಪ್ರಮುಖ ವಾಣಿಜ್ಯ ನಗರ ಫ್ರಾಂಕ್‌ಫರ್ಟ್‌ನಲ್ಲಿ ನಡೆದ ಬೃಹತ್ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದೆ. ನೀಡಿರುವ ವರದಿಯ ಪ್ರಕಾರ, ದುಷ್ಕರ್ಮಿಗಳು ಅಂಗಡಿ ಮುಂಗಟ್ಟುಗಳನ್ನು ಧ್ವಂಸಗೊಳಿಸಿ, ಹಲವು ಮಳಿಗೆಗಳಲ್ಲಿ ಲೂಟಿ ನಡೆಸಿದ್ದಾರೆ.

ನಗರದ ಕೇಂದ್ರ ಭಾಗದಲ್ಲಿ ನಡೆದ ರ್‍ಯಾಲಿಯಲ್ಲಿ ಸುಮಾರು ಎಂಟರಿಂದ ಒಂಬತ್ತು ಸಾವಿರ ಜನರು ಭಾಗವಹಿಸಿದ್ದರು. ಆರಂಭದಲ್ಲಿ ಶಾಂತಿಯುತವಾಗಿ ನಡೆಯುತ್ತಿದ್ದ ಪ್ರತಿಭಟನೆಯ ಮಧ್ಯೆ, ಸುಮಾರು ಒಂದು ಸಾವಿರದಿಂದ ಒಂದೂವರೆ ಸಾವಿರ ಜನರ ಗುಂಪು ಸಾರ್ವಜನಿಕ ಆಸ್ತಿಪಾಸ್ತಿಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿತು ಎಂದು ವರದಿಯಾಗಿದೆ.

ಪರಿಸ್ಥಿತಿ ನಿಯಂತ್ರಿಸಲು ಮುಂದಾದ ಪೊಲೀಸರ ಮೇಲೂ ದಾಳಿ ನಡೆದಿದ್ದು, ನೂರಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿ ಗಾಯಗೊಂಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಹದಿಹರೆಯದವರು ಸೇರಿದಂತೆ ಒಟ್ಟು 54 ಮಂದಿಯನ್ನು ಬಂಧಿಸಲಾಗಿದೆ ಎಂದು ವರದಿ ತಿಳಿಸಿದೆ.

ಹಿಂಸಾಚಾರದಲ್ಲಿ 17ಕ್ಕೂ ಹೆಚ್ಚು ವಾಣಿಜ್ಯ ಮಳಿಗೆಗಳಿಗೆ ಹಾನಿಯಾಗಿದ್ದು, ಐದು ಅಂಗಡಿಗಳನ್ನು ಸಂಪೂರ್ಣವಾಗಿ ಲೂಟಿ ಮಾಡಲಾಗಿದೆ ಎನ್ನಲಾಗಿದೆ.

ಆಂದೋಲನ ಡೆಸ್ಕ್

Recent Posts

ಚುನಾವಣಾ ಆಯೋಗದ ವಿರುದ್ಧ ನ.5ರಂದು ಬೆಂಗಳೂರಿನಲ್ಲಿ ಕಾಂಗ್ರೆಸ್‌ ಪ್ರತಿಭಟನೆ: ಬಿ.ಕೆ. ಹರಿಪ್ರಸಾದ್‌

ನವದೆಹಲಿ: ಚುನಾವಣಾ ಆಯೋಗದ ವಿರುದ್ಧ ನವೆಂಬರ್‌ 5ರಂದು ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲು ಕಾಂಗ್ರೆಸ್‌ ನಿರ್ಧರಿಸಿದೆ ಎಂದು ಬಿ.ಕೆ.…

12 mins ago

ದಿಲ್ಲಿಯಲ್ಲಿ 2 ದಿನ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಅಸ್ತು – ನ.9 ರಿಂದ ಮತ್ತೆ ಸಂಪೂರ್ಣ ನಿಷೇಧ

ನವದೆಹಲಿ: ದೀಪಾವಳಿ ಹಿನ್ನೆಲೆಯಲ್ಲಿ ದೆಹಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಎರಡು ದಿನ ಹಸಿರು ಪಟಾಕಿ ಸಿಡಿಸಲು ಸುಪ್ರೀಂ ಕೋರ್ಟ್‌ ಅನುಮತಿ…

22 mins ago

ಚಂಡಮಾರುತದ ಪ್ರಭಾವ: ಕರ್ನಾಟಕದಲ್ಲಿ ಇನ್ನೂ ನಾಲ್ಕು ದಿನ ಮಳೆ ಮುನ್ಸೂಚನೆ!

ಬೆಂಗಳೂರು: ಅರ್ನಬ್‌ ಚಂಡಮಾರುತದ ಬೆನ್ನಲ್ಲೇ ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ‘ಮುರುಸು’ ಚಂಡಮಾರುತದ ಪರಿಣಾಮ, ಕರ್ನಾಟಕದಲ್ಲಿ ಇನ್ನೂ ನಾಲ್ಕು ದಿನ ಮಳೆಯಾಗುವ ಸಾಧ್ಯತೆಯಿದೆ…

2 hours ago

ಜಿ.ಪಂ.–ತಾ.ಪಂ. ಚುನಾವಣೆಗೆ ಹಳೆಯ ಮತದಾರರ ಪಟ್ಟಿ ಬಳಕೆ ಸಾಧ್ಯತೆ: ಈಶ್ವರ್‌ ಖಂಡ್ರೆ

ಬೆಂಗಳೂರು: ಮುಂಬರುವ ಜಿಲ್ಲಾ ಪಂಚಾಯತ್‌ ಮತ್ತು ತಾಲೂಕು ಪಂಚಾಯತ್‌ ಚುನಾವಣೆಗಳನ್ನು ಹೊಸ ಎಸ್‌ಐಆರ್‌ ಪಟ್ಟಿಯ ಬದಲು ಹಳೆಯ ಮತದಾರರ ಪಟ್ಟಿಯ…

2 hours ago

ರಾಮಮಂದಿರ ದೇಣಿಗೆ ದುರುಪಯೋಗ ಆರೋಪ: ಸ್ಥಳೀಯ ನ್ಯಾಯಾಲಯದಲ್ಲಿ ವಿಚಾರಣೆ ಮುಂದುವರಿಸಲು ಸುಪ್ರೀಂ ಸೂಚನೆ

ನವದೆಹಲಿ: ಅಯೋಧ್ಯೆಯ ರಾಮಮಂದಿರಕ್ಕೆ ಭಕ್ತರು ನೀಡಿದ ದೇಣಿಗೆಯ ದುರುಪಯೋಗ ಆರೋಪಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಮಹತ್ವದ ಬೆಳವಣಿಗೆಯಾಗಿದೆ. ಪ್ರಕರಣದಲ್ಲಿ ಆರೋಪಪಟ್ಟಿ ಸಲ್ಲಿಕೆಯಾಗಿರುವ…

3 hours ago

ನೇಪಾಳದಲ್ಲಿ ಭಾರೀ ಹಿಮಪಾತ: ಸಂಕಷ್ಟದಲ್ಲಿ ಆರು ಮಂದಿ ಭಾರತೀಯರು

ಕಠ್ಮಂಡು: ನೇಪಾಳದಲ್ಲಿ ಭಾರೀ ಹಿಮಪಾತದಿಂದಾಗಿ ಇಬ್ಬರು ಮಹಿಳೆಯರು ಸೇರಿದಂತೆ ಆರು ಮಂದಿ ಭಾರತೀಯ ಪ್ರವಾಸಿಗರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರನ್ನು ಸುರಕ್ಷಿತವಾಗಿ…

4 hours ago