ನವದೆಹಲಿ: ಮತಗಳ್ಳತನ ಆರೋಪ ಮಾಡಿ ಚುನಾವಣಾ ಆಯೋಗಕ್ಕೆ ಹೊರಟಿದ್ದ ರ್ಯಾಲಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಸೇರಿದಂತೆ 30 ಸಂಸದರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಇಂದು ಚುನಾವಣಾ ಆಯೋಗದ ವಿರುದ್ಧ ಇಂಡಿಯಾ ಒಕ್ಕೂಟದ ಸಂಸದರು ಪ್ರತಿಭಟನೆ ನಡೆಸಿದರು. ರಾಹುಲ್ ಗಾಂಧಿ ನೇತೃತ್ವದಲ್ಲಿ ಇಂಡಿಯಾ ಒಕ್ಕೂಟದ ಸಂಸದರು, ಸಂಸತ್ ಭವನದಿಂದ ಚುನಾವಣಾ ಆಯೋಗಕ್ಕೆ ಪ್ರತಿಭಟನಾ ರ್ಯಾಲಿ ನಡೆಸಲು ಮುಂದಾಗಿದ್ದರು.
ಈ ವೇಳೆ ಸ್ಥಳದಲ್ಲಿದ್ದ ದೆಹಲಿ ಪೊಲೀಸರು ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ ಸೇರಿದಂತೆ 30 ಸಂಸದರನ್ನು ವಶಕ್ಕೆ ಪಡೆದರು.
ಇನ್ನು ಸಂಸತ್ ಹೊರಗೆ ಭಾರೀ ಭದ್ರತೆ ಕಲ್ಪಿಸಲಾಗಿತ್ತು. ಪ್ರತಿಭಟನೆಗೆ ಅನುಮತಿ ಪಡೆಯದ ಹಿನ್ನೆಲೆಯಲ್ಲಿ ಎಲ್ಲರನ್ನು ವಶಕ್ಕೆ ಪಡೆಯಲಾಯಿತು.





