Mysore
35
few clouds

Social Media

ಶುಕ್ರವಾರ, 28 ಮಾರ್ಚ್ 2025
Light
Dark

ಬೆಂಗಳೂರಿಗೆ ನೀರು ಕೊಡಿಸುವುದು ನನ್ನ ಕೊನೆಯ ಆಸೆ: ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ

ನವದೆಹಲಿ: ಬೆಂಗಳೂರಿಗೆ ಕುಡಿಯುವ ನೀರು ಕೊಡಿಸುವುದು ನನ್ನ ಜೀವನದ ಕೊನೆಯ ಆಸೆಯಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.

ಈ ಬಗ್ಗೆ ರಾಜ್ಯಸಭೆಯಲ್ಲಿಂದು ಮಾತನಾಡಿದ ಎಚ್.ಡಿ.ದೇವೇಗೌಡ ಅವರು, ಬೆಂಗಳೂರಿನಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಎತ್ತಿ ತೋರಿಸಿದರು. ಬೆಂಗಳೂರಿನಲ್ಲಿ ಒಂದೂವರೆ ಕೋಟಿ ಜನಸಂಖ್ಯೆ ಇದೆ. ನಮಗೆ 20 ಟಿಎಂಸಿ ನೀರು ಸಿಗುತ್ತಿದ್ದು, 50ಕ್ಕೂ ಅಧಿಕ ಟಿಎಂಸಿ ನೀರಿನ ಅಗತ್ಯವಿದೆ. ಕಾವೇರಿ, ಮಹದಾಯಿ, ಕೃಷ್ಣ ಈ ಮೂರು ಅಂತರ ರಾಜ್ಯ ವಿವಾದದಲ್ಲಿದೆ. ಮುಂದಿನ ತಿಂಗಳು ನೀರಿನ ಕೊರತೆ ಕಾಡಲಿದೆ ಎಂದು ಮಾಹಿತಿ ನೀಡಿದರು.

ಬೆಂಗಳೂರಿಗೆ ಕುಡಿಯುವ ನೀರಿನ ಅವಶ್ಯಕತೆ ಇದ್ದು, ಈ ಸಮಸ್ಯೆ ಬಗೆಹರಿಸಲು ಪ್ರಧಾನಿ ನರೇಂದ್ರ ಮೋದಿ ಅವರಿಂದ ಮಾತ್ರ ಸಾಧ್ಯ. ನಾನು ಮನಮೋಹನ್‌ ಸಿಂಗ್‌ ಅವರಿಗೆ ಭಿಕ್ಷೆ ಬೇಡಿದೆ. ಆದ್ರೆ ಅವರು ಇದು ಸಾಧ್ಯವಿಲ್ಲ ಎಂದುಬಿಟ್ಟರು. ಪ್ರಧಾನಿ ಮೋದಿ ಅವರು ಈ ಸಮಸ್ಯೆಯನ್ನು ಬಗೆಹರಿಸಬಹುದು. ಬೆಂಗಳೂರಿಗೆ ನೀರು ಕೊಡಿಸುವುದು ನನ್ನ ಜೀವನದ ಕೊನೆಯ ಆಸೆಯಾಗಿದೆ ಎಂದು ಹೇಳಿದರು.

ಇನ್ನು ಮುಂದುವರಿದು ಮಾತನಾಡಿದ ದೇವೇಗೌಡ ಅವರು, ಮೂರನೇ ಅವಧಿಯಲ್ಲಿ ಬಹುಮತ ಬರದಿದ್ದರೂ ವಿಪಕ್ಷಗಳು ಬೆಂಬಲ ನೀಡಿ, ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಿಯನ್ನಾಗಿ ಮಾಡಿದರು. ಈ ಸರ್ಕಾರ ಐದು ವರ್ಷ ಮುಂದುವರಿಯಲಿದೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.

 

Tags: