ನವದೆಹಲಿ: ಬೆಂಗಳೂರಿಗೆ ಕುಡಿಯುವ ನೀರು ಕೊಡಿಸುವುದು ನನ್ನ ಜೀವನದ ಕೊನೆಯ ಆಸೆಯಾಗಿದೆ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಹೇಳಿದ್ದಾರೆ.
ಈ ಬಗ್ಗೆ ರಾಜ್ಯಸಭೆಯಲ್ಲಿಂದು ಮಾತನಾಡಿದ ಎಚ್.ಡಿ.ದೇವೇಗೌಡ ಅವರು, ಬೆಂಗಳೂರಿನಲ್ಲಿ ತಲೆದೋರಿರುವ ಕುಡಿಯುವ ನೀರಿನ ಸಮಸ್ಯೆಯನ್ನು ಎತ್ತಿ ತೋರಿಸಿದರು. ಬೆಂಗಳೂರಿನಲ್ಲಿ ಒಂದೂವರೆ ಕೋಟಿ ಜನಸಂಖ್ಯೆ ಇದೆ. ನಮಗೆ 20 ಟಿಎಂಸಿ ನೀರು ಸಿಗುತ್ತಿದ್ದು, 50ಕ್ಕೂ ಅಧಿಕ ಟಿಎಂಸಿ ನೀರಿನ ಅಗತ್ಯವಿದೆ. ಕಾವೇರಿ, ಮಹದಾಯಿ, ಕೃಷ್ಣ ಈ ಮೂರು ಅಂತರ ರಾಜ್ಯ ವಿವಾದದಲ್ಲಿದೆ. ಮುಂದಿನ ತಿಂಗಳು ನೀರಿನ ಕೊರತೆ ಕಾಡಲಿದೆ ಎಂದು ಮಾಹಿತಿ ನೀಡಿದರು.
ಬೆಂಗಳೂರಿಗೆ ಕುಡಿಯುವ ನೀರಿನ ಅವಶ್ಯಕತೆ ಇದ್ದು, ಈ ಸಮಸ್ಯೆ ಬಗೆಹರಿಸಲು ಪ್ರಧಾನಿ ನರೇಂದ್ರ ಮೋದಿ ಅವರಿಂದ ಮಾತ್ರ ಸಾಧ್ಯ. ನಾನು ಮನಮೋಹನ್ ಸಿಂಗ್ ಅವರಿಗೆ ಭಿಕ್ಷೆ ಬೇಡಿದೆ. ಆದ್ರೆ ಅವರು ಇದು ಸಾಧ್ಯವಿಲ್ಲ ಎಂದುಬಿಟ್ಟರು. ಪ್ರಧಾನಿ ಮೋದಿ ಅವರು ಈ ಸಮಸ್ಯೆಯನ್ನು ಬಗೆಹರಿಸಬಹುದು. ಬೆಂಗಳೂರಿಗೆ ನೀರು ಕೊಡಿಸುವುದು ನನ್ನ ಜೀವನದ ಕೊನೆಯ ಆಸೆಯಾಗಿದೆ ಎಂದು ಹೇಳಿದರು.
ಇನ್ನು ಮುಂದುವರಿದು ಮಾತನಾಡಿದ ದೇವೇಗೌಡ ಅವರು, ಮೂರನೇ ಅವಧಿಯಲ್ಲಿ ಬಹುಮತ ಬರದಿದ್ದರೂ ವಿಪಕ್ಷಗಳು ಬೆಂಬಲ ನೀಡಿ, ಮೋದಿ ಅವರನ್ನು ಮೂರನೇ ಬಾರಿಗೆ ಪ್ರಧಾನಿಯನ್ನಾಗಿ ಮಾಡಿದರು. ಈ ಸರ್ಕಾರ ಐದು ವರ್ಷ ಮುಂದುವರಿಯಲಿದೆ. ಇದರಲ್ಲಿ ಯಾವುದೇ ಅನುಮಾನ ಇಲ್ಲ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…