Mysore
20
broken clouds

Social Media

ಶುಕ್ರವಾರ, 21 ಆಗಸ್ಟ್ 2026
Light
Dark

ಪುಲ್ವಾಮಾ ದಾಳಿಯ ಮಾಸ್ಟರ್‌ ಮೈಂಡ್‌ ಹಮ್ಜಾ ಬುರ್ಹಾನ್‌ ಹತ್ಯೆ

ಇಸ್ಲಾಮಾಬಾದ್:‌ 2019ರ ಪುಲ್ವಾಮಾ ಉಗ್ರರ ದಾಳಿಯ ಮಾಸ್ಟರ್‌ ಮೈಂಡ್‌ ಹಮ್ಜಾ ಬುರ್ಹಾನ್‌ನನ್ನು ಪಾಕ್‌ ಆಕ್ರಮಿತ ಕಾಶ್ಮೀರದಲ್ಲಿ ಅಪರಿಚಿತ ವ್ಯಕ್ತಿಗಳು ಗುಂಡಿಕ್ಕಿ ಹತ್ಯೆ ಮಾಡಿದ್ದಾರೆ.

ತರಬೇತುದಾರರ ರೂಪದಲ್ಲಿ ಅಡಗಿದ್ದ ಹಮ್ಜಾ ಬುರ್ಹಾನ್‌ ಅಲಿಯಾಸ್‌ ಡಾಕ್ಟರ್‌ ಮೇಲೆ ಅಪರಿಚಿತ ವ್ಯಕ್ತಿಗಳು ಮುಜಾಫರಾಬಾದ್‌ ಕಚೇರಿಯೊಳಗೆ ನುಗ್ಗಿ ಹಲವು ಬಾರಿ ಗುಂಡಿನ ದಾಳಿ ನಡೆಸಿದ್ದಾರೆ. ಗುಂಡೇಟಿನಿಂದ ಗಂಭೀರವಾಗಿ ಗಾಯಗೊಂಡಿದ್ದ ಆತ ಬಳಿಕ ಮೃತಪಟ್ಟಿದ್ದಾನೆ ಎಂದು ವರದಿಯಾಗಿದೆ.

ಜಮ್ಮು-ಕಾಶ್ಮೀರದ ಪುಲ್ವಾಮಾ ಮೂಲದ ಹಮ್ಜಾ ಬುರಾನ್‌ನ ನಿಜವಾದ ಹೆಸರು ಅರ್ಜುಮಂಡ್‌ ಗುಲ್ಜಾರ್‌ ದಾರ್‌ ಎಂದು ತಿಳಿದುಬಂದಿದೆ. 2022ರಲ್ಲಿ ಭಾರತದ ಗೃಹ ಸಚಿವಾಲಯ ಆತನನ್ನು ಉಗ್ರನೆಂದು ಘೋಷಣೆ ಮಾಡಿತ್ತು.

Tags:
error: Content is protected !!