ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಪುಲ್ವಮಾದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ಪರಸ್ಪರ ಗುಂಡಿನ ದಾಳಿ ನಡೆದಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಸೋಮವಾರ(ಜೂ.3) ಬೆಳಿಗ್ಗೆ ಗುಂಡಿನ ಚಕಮಕಿ ನಡೆದಿದೆ. ಪುಲ್ವಾಮ ಜಿಲ್ಲೆಯ ನಿಹಾಮ ಪ್ರದೇಶದಲ್ಲಿ ಉಗ್ರರು ಅಡಗಿಕೊಂಡಿರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಭದ್ರತಾ ಪಡೆಗಳು ಕಾರ್ಯಚರಣರ ನಡೆಸಿದರು. ಈ ಕಾರ್ಯಚರಣೆಯಲ್ಲಿ ಉಗ್ರರು ಗುಂಡು ಹಾರಿಸಿದ್ದರಿಂದ ಪ್ರತಿದಾಳಿ ನಡೆಸಲಾಗಿದೆ ಎಂದು ಅವರು ಹೇಳಿದ್ದಾರೆ.
ಪರಸ್ಪರ ಗುಂಡಿನ ದಾಳಿ ವೇಳೆ ಸಾವು ಸಂಭವಿಸಿರುವ ಬಗ್ಗೆ ವರದಿಯಾಗಿಲ್ಲ ಎಂದು ಹೇಳಿದ್ದಾರೆ.





