Mysore
15
broken clouds

Social Media

ಗುರುವಾರ, 11 ಡಿಸೆಂಬರ್ 2025
Light
Dark

ಪುಣೆ : ಬಸ್‌ನಲ್ಲಿದ್ದ ಮಹಿಳೆ ಮೇಲೆ ಅತ್ಯಾಚಾರವೆಸಗಿದ್ದ ಆರೋಪಿ ಬಂಧನ

ಪುಣೆ : ಬಸ್‍ನಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ ಆರೋಪಿಯನ್ನು 70 ಗಂಟೆಗಳ ಕಾಲ ನಡೆಸಿದ ಕಾರ್ಯಾಚರಣೆಯ ಬಳಿಕ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬಂಧಿತ ಆರೋಪಿಯನ್ನು ಪುಣೆಯ ಗುನಾತ್ ಗ್ರಾಮದ ದತ್ತಾತ್ರಯ ರಾಮದಾಸ್ ಗಡೆ (37) ಎಂದು ಗುರುತಿಸಲಾಗಿದೆ. ಸುಮಾರು 75 ಗಂಟೆಗಳ ಕಾಲ ಆತನ ಪತ್ತೆಗಾಗಿ ಪೊಲೀಸರು ಹುಡುಕಾಟ ನಡೆಸಿ, ಶ್ರೀರೂರ್ ತಹಸಿಲ್‍ನಿಂದ ಆರೋಪಿಯನ್ನು ಬಂಧಿಸಲಾಗಿದೆ.

ತಾನು ಪೊಲೀಸರಿಗೆ ಶರಣಾಗಲು ಬಯಸುತ್ತೇನೆ ಎಂದು ಹೇಳಿ ಹೊರಟುಹೋಗಿದ್ದನಂತೆ , ದತ್ತಾತ್ರೇಯ ನೀರನ್ನು ತೆಗೆದುಕೊಂಡು ಹೋದ ನಂತರ ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಲಾಯಿತು. ನಂತರ ಪೊಲೀಸರು ಬಂಧಿಸಿದ್ದಾರೆ. ಗಡೆಯನ್ನು ಸ್ವರ್ಗೇಟ್ ಪೊಲೀಸರಿಗೆ ಹಸ್ತಾಂತರಿಸಲಾಗಿದ್ದು, ಮುಂದಿನ ತನಿಖೆ ನಡೆಸಲಿದ್ದಾರೆ.

ಬಂಧಿತ ಆರೋಪಿ ಮಂಗಳವಾರ ಬೆಳಿಗ್ಗೆ ಪೊಲೀಸ್ ಠಾಣೆಯಿಂದ 100 ಮೀಟರ್ ದೂರದಲ್ಲಿದ್ದ ಮಹಾರಾಷ್ಟ್ರ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಸ್ವರ್ಗೇಟ್ ಬಸ್ ನಿಲ್ದಾಣದಲ್ಲಿ ಮಹಿಳೆಯ ಮೇಲೆ ಅತ್ಯಾಚಾರ ಎಸಗಿದ್ದ. ಆತ ಆರಂಭದಲ್ಲಿ ಮಹಳೆಯನ್ನು ಅಕ್ಕ ಎಂದು ಕರೆದು ಮಾತಾಡಿಸಿದ್ದ. ಬಳಿಕ ಸತಾರಾಕ್ಕೆ ಹೋಗುವ ಬಸ್ ಮತ್ತೊಂದು ಪ್ಲಾಟ್‍ಫಾರ್ಮ್‍ಗೆ ಬಂದಿದೆ ಎಂದು ಹೇಳಿ, ನಿಲ್ಲಿಸಿದ್ದ ಖಾಲಿ ಬಸ್ ಬಳಿ ಕರೆದೊಯ್ದಿದ್ದ. ಮಹಿಳೆ ಬಸ್ಸಿನೊಳಗೆ ಲೈಟ್ ಆನ್ ಇರದ ಕಾರಣ ಸ್ ಹತ್ತಲು ಹಿಂಜರಿದಿದ್ದಳು. ಈ ವೇಳೆ, ಇದೇ ಸರಿಯಾದ ಬಸ್ ಎಂದು ಹೇಳಿ ಒಳಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾನೆ ಎಂದು ಮಹಿಳೆ ಆರೋಪಿಸಿದ್ದಾಳೆ.

ಈ ಘಟನೆ ನಡೆದ ಬಳಿಕ ಪುಣೆಯಲ್ಲಿ ಆಕ್ರೋಶ ವ್ಯಕ್ತವಾಗಿದ್ದು, ಎನ್‍ಸಿಪಿ ಮತ್ತು ಎಂಎನ್‍ಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಮುಖ್ಯಮಂತ್ರಿ ದೇವೇಂದ್ರ ಫಡ್ನವಿಸ್ ಅವರು ಆರೋಪಿಗಳನ್ನು ಶೀಘ್ರವಾಗಿ ಬಂಧಿಸುವಂತೆ ಪೊಲೀಸರಿಗೆ ಸೂಚನೆ ನೀಡಿದ್ದರು.
ಅತ್ಯಾಚಾರ ಆರೋಪಿ ಮೇಲಿವೆ ಹಲವು ಕೇಸ್
ಅಲ್ಲದೆ ಆರೋಪಿ ಬಗ್ಗೆ ಮಾಹಿತಿ ನೀಡಿದವರಿಗೆ 1 ಲಕ್ಷ ರೂಪಾಯಿ ಬಹುಮಾನ ಘೋಷಿಸಲಾಗಿತ್ತು. ಪೊಲೀಸರ ಪ್ರಕಾರ, ಪುಣೆ ಮತ್ತು ಪಕ್ಕದ ಅಹಲ್ಯಾನಗರ ಜಿಲ್ಲೆಗಳಲ್ಲಿ ಕಳ್ಳತನ, ದರೋಡೆ ಮತ್ತು ಸರಗಳ್ಳತನ ಸೇರಿದಂತೆ ಹಲವಾರು ಕ್ರಿಮಿನಲ್ ಪ್ರಕರಣಗಳು ಅವನ ವಿರುದ್ಧ ದಾಖಲಾಗಿವೆ.
ಮಹಾರಾಷ್ಟ್ರ ಸಾರಿಗೆ ಅಧಿಕಾರಿಗಳ ಪ್ರಕಾರ, ಆರೋಪಿತು ಸಂತ್ರಸ್ತೆಯ ವಿಶ್ವಾಸ ಗಳಿಸಲು ತಾನು ಬಸ್‍ನ ಕಂಡಕ್ಟರ್ ಎಂದು ಹೇಳಿದ್ದಾನೆ. ಆದರೆ, ಅಧಿಕಾರಿಗಳ ಹೇಳಿಕೆಯನ್ನು ಪೊಲೀಸರು ದೃಢಪಡಿಸಿಲ್ಲ. ಬಸ್ ನಿಲ್ದಾಣದ ಅಧಿಕಾರಿಗಳಿಗೆ ಬೆಳಿಗ್ಗೆ 10 ಗಂಟೆ ಸುಮಾರಿಗೆ ಅತ್ಯಾಚಾರ ಘಟನೆಯ ಬಗ್ಗೆ ತಿಳಿದು ಬಂದಿದೆ.

Tags:
error: Content is protected !!