ದೇಶ- ವಿದೇಶ

ಕರ್ನಾಟಕದ ತೊಗಲುಗೊಂಬೆ ಕಲಾವಿದೆ ಭೀಮವ್ವಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ

ನವದೆಹಲಿ: ಕರ್ನಾಟಕದ ತೊಗಲುಗೊಂಬೆ (Puppeteer) ಕಲಾವಿದೆ ಭೀಮವ್ವಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪದ್ಮಶ್ರೀ ಪ್ರಶಸ್ತಿ (Padmashree Award) ಪ್ರದಾನ ಮಾಡಿದರು.

ರಾಷ್ಟ್ರಪತಿ ಭವನದಲ್ಲಿ ಸೋಮವಾರ ನಡೆದ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಭೀಮವ್ವ ಶಿಳ್ಳೆಕ್ಯಾತರ್‌ ಅವರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಸೇರಿದಂತೆ ಹಲವು ನಾಯಕರು ಭಾಗಿಯಾಗಿದ್ದರು.

ಇದನ್ನೂ ಓದಿ:- Padma Awards ; ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ

ಬಾಲ್ಯದಿಂದಲೇ ಈ ಕಲೆಯಲ್ಲಿ ತೊಡಗಿಸಿಕೊಂಡಿರುವ ಭೀಮವ್ವ ಅವರು, ರಾಜ್ಯ ಮಾತ್ರವಲ್ಲ ದೇಶ-ವಿದೇಶಗಳಲ್ಲಿ ಈ ಕಲೆಯನ್ನು ಪ್ರದರ್ಶಿಸಿ ಪ್ರಶಂಸೆ ಪಡೆದಿದ್ದಾರೆ.

1929ರಲ್ಲಿ ಕೊಪ್ಪಳ ತಾಲ್ಲೂಕಿನ ಮೋರನಾಳ ಗ್ರಾಮದಲ್ಲಿ ಜನಿಸಿದ್ದ ಭೀಮವ್ವ ಅವರು, ತಮ್ಮ 14ನೇ ವಯಸ್ಸಿನಿಂದ ಇಲ್ಲಿಯವರೆಗೂ ತೊಗಲುಗೊಂಬೆಯಾಟವನ್ನು ಕುಲ ಕಸುಬಾಗಿ ಮಾಡುತ್ತಾ ಬಂದಿದ್ದಾರೆ.

ಆಂದೋಲನ ಡೆಸ್ಕ್

Recent Posts

ಹೊಸ ಜಾಹೀರಾತು ನೀತಿ ಮೂಲಕ ಪತ್ರಿಕೆಗಳ ದಮನಕ್ಕೆ ಮುಂದಾದ ಸರ್ಕಾರ : ಪುನರ್‌ ಪರಿಶೀಲನೆಗೆ ಒತ್ತಾಯ

ಮೈಸೂರು : ರಾಜ್ಯ ಸರ್ಕಾರವು ಜಾರಿಗೆ ತರಲು ಮುಂದಾಗಿರುವ ʻಕರ್ನಾಟಕ ಜಾಹೀರಾತು ನೀತಿ-2026ʼ ವಾರ್ತಾ ಇಲಾಖೆ ಅಧಿಕಾರಿಗಳ ವಕ್ರ ದೃಷ್ಟಿಯ…

11 mins ago

ಚಾ.ನಗರ | ಮಳೆಯಿಂದ ಹಾನಿ, ಶಾಸಕರಿಂದ ಪರಿಶೀಲನೆ

ಚಾಮರಾಜನಗರ : ಇತ್ತೀಚೆಗೆ ಸುರಿದ ಗಾಳಿ ಸಹಿತ ಮಳೆಯಿಂದಾಗಿ ತಾಲ್ಲೂಕು ವ್ಯಾಪ್ತಿಯ ದೊಡ್ಡಮೋಳೆ, ಕಟ್ನವಾಡಿ, ಗ್ರಾಮಗಳಲ್ಲಿ ಮನೆ ಗೋಡೆ ಕುಸಿದಿದ್ದ…

22 mins ago

ಮೈಸೂರು | ನೆಲಕಪ್ಪಳಿಸಿದ ಭಾರಿ ಗಾತ್ರದ ಮರ; ಕಾರು,ಆಟೋ ಜಖಂ

ಮೈಸೂರು : ಬೇರುಗಳಲ್ಲಿ ಸತ್ವ ಕಳೆದುಕೊಂಡು ಭಾರಿಗಾತ್ರದ ಬೇವಿನ ಮರ ಶನಿವಾರ ಧರೆಗುಳಿರದ ಪರಿಣಾಮ, ಒಂದು ಕಾರು, ಆಟೋ, ಬೈಕ್…

33 mins ago

ಇರಾನ್‌ ಅಧ್ಯಕ್ಷರ ಜತೆ ಪ್ರಧಾನಿ ಮೋದಿ ಮಾತುಕತೆ

ಹೊಸದಿಲ್ಲಿ : ಇರಾನ್‌ ಮತ್ತು ಇಸ್ರೇಲ್‌ ನಡುವಿನ ಸಮರ ಮತ್ತಷ್ಟು ತೀವ್ರಗೊಂಡಿದೆ. ಈ ನಡುವೆ ಇರಾನ್‌ ಅಧ್ಯಕ್ಷ ಮಸೂದ್‌ ಪೆಜೆಶ್ಕಿಯನ್‌…

45 mins ago

IPL | ಈ ಬಾರಿಯೂ ಕಪ್‌ ಗೆಲ್ಲಲು ಪರಿಶ್ರಮ ಅಗತ್ಯ ; ಆಟಗಾರರಿಗೆ ಕಿಂಗ್‌ ಕೊಹ್ಲಿ ಸಲಹೆ

ಬೆಂಗಳೂರು : ಇದೇ ಮಾರ್ಚ್ 28ರಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಐಪಿಎಲ್-2026 ಆರಂಭವಾಗಲಿದ್ದು, ಆರ್‌ಸಿಬಿ ಮೊದಲ ಪಂದ್ಯವನ್ನು ಸನ್​ರೈಸರ್ಸ್…

53 mins ago

ಅಮೆರಿಕ-ಯುಕೆ ಸೇನಾನೆಲೆ ಮೇಲೆ ಇರಾನ್ ದಾಳಿ‌ ; ವರದಿ

ಟೆಹ್ರಾನ್  : ಇಷ್ಟು ದಿನ ತನ್ನ ನೆರೆಹೊರೆಯ ದೇಶಗಳಲ್ಲಿರುವ ಅಮೆರಿಕ ಸೇನಾ ನೆಲೆಗಳ ಮೇಲೆ ದಾಳಿ ಮಾಡುತ್ತಿದ್ದ ಇರಾನ್ ಇದೀಗ…

2 hours ago