ಹೈದರಾಬಾದ್: ಇತ್ತೀಚೆಗೆ ಬಿಡುಗಡೆಗೊಂಡ ಪುಷ್ಪ-2 ಚಿತ್ರದ ಪ್ರದರ್ಶನ ವೇಳೆ ನಡೆದ ಕಾಲ್ತುಳಿತ ಪ್ರಕರಣದಲ್ಲಿ ನಟ ಅಲ್ಲು ಅರ್ಜುನ್ ಅವರನ್ನು ಹೈದರಾಬಾರ್ ಪೊಲೀಸರು ಬಂಧಿಸಿದ್ದಾರೆ.
ಹೈದರಾಬಾದ್‌ನ ಅವರ ನಿವಾಸದಿಂದಲೇ ಬಂಧಿಸಲಾಗಿದೆ ಎಂದು ತೆಲುಗು ಮಾಧ್ಯಮಗಳು ವರದಿ ಮಾಡಿವೆ.
ಏನಿದು ಪ್ರಕರಣ?
ಇದೇ ತಿಂಗಳ 4 ರಂದು ಹೈದರಾಬಾದ್‌ನ ಸಂಧ್ಯಾ ಚಿತ್ರಮಂದಿರದಲ್ಲಿ ನಡೆದ ಪುಷ್ಪ-2 ಪ್ರೀಮಿಯರ್ ಶೋ ವೇಳೆ ಅಲ್ಲು ಅರ್ಜುನ್ ಅಲ್ಲಿಗೆ ಬಂದು ಹೋಗಿದ್ದರು. ಆ ವೇಳೆ ಅಭಿಮಾನಿಗಳು ಮುಗಿಬಿದ್ದರು. ಈ ವೇಳೆ ರೇವತಿ ಎಂಬ ಮಹಿಳೆ ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದು, ಆಕೆಯ ಮಗ ಗಂಭೀರ ಗಾಯಗೊಂಡಿದ್ದ. ಈ ಘಟನೆ ಕುರಿತ ಚಿಕ್ಕಡಪಲ್ಲಿ ಪೊಲೀಸರು ಅಲ್ಲು ಅರ್ಜುನ್, ಸಿನಿಮಾ ಘಟಕ ಹಾಗೂ ಚಿತ್ರಮಂದಿರ ಆಡಳಿತ ಮಂಡಳಿ ವಿರುದ್ಧ ದೂರು ದಾಖಲಿಸಿಕೊಂಡಿದ್ದರು.
ಈ ಸಂಬಂಧ ಅಲ್ಲು ಅರ್ಜುನ್ ಹೈಕೋರ್ಟ್ ಮೇಟ್ಟಿಲೇರಿ, ಪ್ರಕರಣ ರದ್ದುಗೊಳಿಸುವಂತೆ ಅರ್ಜಿ ಸಲ್ಲಿಸಿದ್ದರು. ಈ ನಡುವೆ ಪೊಲೀಸರು ಶುಕ್ರವಾರ ಆತನನ್ನು ವಶಕ್ಕೆ ಪಡೆದಿದ್ದಾರೆ.
ಯಾವುದೇ ಮಾಹಿತಿ ನೀಡಿಲ್ಲ ಮತ್ತು ಸೂಕ್ತ ಭದ್ರತೆಯನ್ನು ಏರ್ಪಡಿಸದೆ ಐಕನ್ ಸ್ಟಾರ್ ಅಲ್ಲು ಅರ್ಜುನ್ ಚಿತ್ರಮಂದಿರಕ್ಕೆ ಬಂದಿರುವುದಾಗಿ ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣದಲ್ಲಿ ಪೊಲೀಸರು ಈಗಾಗಲೇ ಮೂವರನ್ನು ಬಂಧಿಸಿದ್ದಾರೆ.
ಬೆಳಗಾವಿ: ರಾಜ್ಯದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಲ್ಲಿ 59,772 ಶಿಕ್ಷಕರ ಹುದ್ದೆಗಳು ಖಾಲಿ ಇವೆ ಎಂದು ಶಾಲಾ ಶಿಕ್ಷಣ ಮತ್ತು…
ಬೆಂಗಳೂರು: ಚಿತ್ರದುರ್ಗ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಜಾಮೀನು ಪಡೆದಿರುವ ನಟ ದರ್ಶನ್ ಮೈಸೂರಿಗೆ ನಾಲ್ಕು ವಾರಗಳ ಕಾಲ ತೆರಳಲು ಅನುಮತಿ…
ಬೆಳಗಾವಿ: ಸಚಿವೆ ಲಕ್ಷ್ಮಿ ಹೆಬ್ಬಾಳಕರ್ ಅವರಿಗೆ ಅಶ್ಲೀಲ ಪದ ಬಳಸಿ ನಿಂದಿಸಿರುವ ಆರೋಪದ ಮೇಲೆ ಬಂಧಿತಾರಾಗಿರುವ ಬಿಜೆಪಿ ಎಂಎಲ್ಸಿ ಸಿ.ಟಿ…
ಮೈಸೂರು: ನಗರದ ಅಲ್ ಅನ್ಸಾರ್ ಆಸ್ಪತ್ರೆಯ ವೈದ್ಯರೊಬ್ಬರ ಮೇಲೆ ದುಷ್ಕರ್ಮಿಗಳು ಬುಧವಾರ ತಡರಾತ್ರಿ ಹಲ್ಲೆ ನಡೆಸಿದ ಘಟನೆ ನಡೆದಿದೆ. ಡಾ.…
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…