ಕಠ್ಮಂಡು(ನೇಪಾಳ): ನೇಪಾಳದ ನೂತನ ಪ್ರಧಾನಿಯಾಗಿ ಪುಷ್ಪ ಕಮಲ್ ದಹಾಲ್ ಪ್ರಚಂಡ ಪ್ರಮಾಣ ವಚನ ಸ್ವೀಕರಿಸಿದರು. ನಾಟಕೀಯ ಬೆಳವಣಿಗೆಗಳ ನಡುವೆ ಹೊಸ ಮೈತ್ರಿ ಮಾಡಿಕೊಂಡ ಪ್ರಚಂಡ ಮೂರನೇ ಬಾರಿಗೆ ಪ್ರಧಾನಿಯಾಗಿ ಜವಾಬ್ದಾರಿ ವಹಿಸಿಕೊಂಡರು. ರಾಷ್ಟ್ರಪತಿಗಳ ಅಧಿಕೃತ ನಿವಾಸ ಶೀತಲ್ ನಿವಾಸ್‌ನಲ್ಲಿ ಅವರು ಪ್ರಮಾಣ ವಚನ ಸ್ವೀಕರಿಸಿದರು.
ಪ್ರಧಾನಿ ಹುದ್ದೆ ಹಂಚಿಕೆ ವಿಚಾರದಲ್ಲಿ ಭಿನ್ನಾಭಿಪ್ರಾಯ ಉಂಟಾಗಿ ಹಳೆ ಮೈತ್ರಿಕೂಟಕ್ಕೆ ಪ್ರಚಂಡ ಗುಡ್ ಬೈ ಹೇಳಿದ್ದರು. ಇದರಿಂದಾಗಿ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಆಡಳಿತದಲ್ಲಿದ ಐದು ಪಕ್ಷಗಳಿಂದ ಕೂಡಿದ ಮೈತ್ರಿಕೂಟ ಸಮ್ಮಿಶ್ರ ಸರ್ಕಾರ ರಚಿಸಲು ಸಾಧ್ಯವಾಗಲಿಲ್ಲ.ಚುನಾವಣೆಗೆ ಮುನ್ನ ಮಾಜಿ ಪ್ರಧಾನಿ ದೇವುಬಾ ಮತ್ತು ಪ್ರಚಂಡ ಎರಡೂವರೆ ವರ್ಷಗಳ ಕಾಲ ಪ್ರಧಾನಿ ಹುದ್ದೆಯನ್ನು ಹಂಚಿಕೊಳ್ಳಲು ಒಪ್ಪಂದ ಮಾಡಿಕೊಂಡಿದ್ದರು. ಆದರೆ, ಮೊದಲ ಎರಡೂವರೆ ವರ್ಷಗಳ ಕಾಲ ಪ್ರಧಾನ ಮಂತ್ರಿ ಹುದ್ದೆಯನ್ನು ಅಲಂಕರಿಸಿದ ದೇವುಬಾ, ಪ್ರಚಂಡ ಅವರಿಗೆ ಅಧಿಕಾರ ಹಸ್ತಾಂತರಿಸುವ ಪ್ರಸ್ತಾಪವನ್ನು ತಿರಸ್ಕರಿಸಿದ್ದರು.
ಹೀಗಾಗಿ ಅಲ್ಲಿ ರಾಜಕೀಯ ಬಿಕ್ಕಟ್ಟು ಉಂಟಾಗಿ ಮೈತ್ರಿ ಮುರಿದು ಬಿದ್ದ ಪರಿಣಾಮ ಪ್ರಚಂಡ ಅವರು ತಮ್ಮ ಹಳೆಯ ಗೆಳೆಯ, ವಿರೋಧ ಪಕ್ಷದಲ್ಲಿದ್ದ ಮಾಜಿ ಪ್ರಧಾನಿ ಓಲಿ ಅವರನ್ನು ಸಂಪರ್ಕಿಸಿ ಬೆಂಬಲ ಕೋರಿದರು. ಒಲಿ ಇದಕ್ಕೆ ಒಪ್ಪಿಗೆ ಸೂಚಿಸಿದರು ಇದರಿಂದ 169 ಸದಸ್ಯರ ಬೆಂಬಲದೊಂದಿಗೆ ಪ್ರಚಂಡ ಸರ್ಕಾರ ರಚಿಸಿದ್ದಾರೆ, ಈ ಹಿನ್ನೆಲೆಯಲ್ಲಿ ಭಾನುವಾರ ಪ್ರಚಂಡ ಅವರನ್ನು ಪ್ರಧಾನಿಯಾಗಿ ನೇಮಕ ಮಾಡಿ ಆದೇಶ ಹೊರಡಿಸಲಾಗಿದೆ.
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ದಸರಾ ದೀಪಾಲಂಕಾರ ಕಾಮಗಾರಿಯಲ್ಲೇ ಯಡವಟ್ಟಾಗಿದ್ದು, ನಗರದ ಗನ್ ಹೌಸ್ ವೃತ್ತದಲ್ಲಿ ಕಟ್ಟಲಾಗಿದ್ದ ದಸರಾ ದೀಪಾಲಂಕಾರದ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಶಾಸಕರು ಕಮಿಷನ್ ಕೇಳುತ್ತಿದ್ದಾರೆ ಎಂಬ ಗುತ್ತಿಗೆದಾರರ ಆರೋಪ ಸುಳ್ಳು,ಮತದಾರರ ಪಟ್ಟಿಯ…
ಯಳಂದೂರು: ತಾಲ್ಲೂಕಿನ ವಿವಿಧ ಗ್ರಾಮಗಳಲ್ಲಿ ಕಳೆದ ಕೆಲ ದಿನಗಳಿಂದ ಸತತವಾಗಿ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರು ಭತ್ತದ ನಾಟಿ ಕಾರ್ಯದಲ್ಲಿ…
ಮಡಿಕೇರಿ: ನಾಡಿನ ಜೀವನದಿ ಕಾವೇರಿ ಉಗಮಸ್ಥಾನ ತಲಕಾವೇರಿಯಲ್ಲಿ ನಡೆಯಲಿರುವ ಪವಿತ್ರ ತೀರ್ಥೋದ್ಭವಕ್ಕೆ ದಿನಗಣನೆ ಶುರುವಾಗಿದ್ದು, ಇನ್ನೇನು ಕೇವಲ 15 ದಿನಗಳಷ್ಟೇ…
ಮಂಡ್ಯ: ರಾಜ್ಯದಲ್ಲಿ ಕಂಡು ಕೇಳರಿಯದ ಬರಗಾಲ ಆವರಿಸಿರುವ ಹಿನ್ನೆಲೆಯಲ್ಲಿ ಇಂದು ಕೇಂದ್ರ ಬರ ಅಧ್ಯಯನ ಸಮಿತಿ ಸದಸ್ಯರು ಮಂಡ್ಯಕ್ಕೆ ಆಗಮಿಸಿ…
ಐತಿಹಾಸಿಕ ಸಂಗತಿ! ಸರ್ಕಾರದ ನಿರ್ದೇಶನದ ಮೇರೆಗೆ ಬೆಳಗಾವಿ ನಗರಪಾಲಿಕೆ ‘ಗಡಿ ವಿಷಯದಲ್ಲಿ ಮಹಾಜನ್ ವರದಿಯೇ ಅಂತಿಮ’ಎಂಬ ನಿರ್ಣಯ ಅಂಗೀಕರಿಸಿರುವುದು ಐತಿಹಾಸಿಕ…